ವಡಗೇರಾ ತಾಲೂಕಾಭಿವೃದ್ಧಿಗೆ ಪ್ರಯತ್ನ ಮಾಡುವೆ: ಮುದ್ನಾಳ

Team Udayavani, Sep 14, 2020, 4:56 PM IST

ವಡಗೇರಾ ತಾಲೂಕಾಭಿವೃದ್ಧಿಗೆ ಪ್ರಯತ್ನ ಮಾಡುವೆ: ಮುದ್ನಾಳ

ಯಾದಗಿರಿ: ಮತಕ್ಷೇತ್ರದ ನೂತನ ತಾಲೂಕು ಕೇಂದ್ರ ವಡಗೇರಾ ಪಟ್ಟಣ ಸೇರಿದಂತೆ ಗ್ರಾಮಿಣ ಭಾಗಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.

ನಗರದ ಎನ್‌ವಿಎಂ ಸಭಾಂಗಣದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಡಗೇರಾ ಪಟ್ಟಣದಲ್ಲಿ ಮೊದಲು ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಅಗತ್ಯವಿದೆ. ಅದಾದರೆ ಸರ್ಕಾರದ ಎಲ್ಲ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ. ಈ ಬಗ್ಗೆ ಕಂದಾಯ ಸಚಿವಆರ್‌.ಅಶೋಕ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಚರ್ಚಿಸಿರುವುದಾಗಿ ಹೇಳಿದರು.

ವಡಗೇರಾ ಪಟ್ಟಣದಲ್ಲಿ ಗ್ರಾಪಂ ಅಸ್ತಿತ್ವದಲ್ಲಿದೆ. ಅದನ್ನು ಪಪಂಗೆ ಮೇಲ್ದರ್ಜೆಗೆ ಏರಿಸುವ ವಿಚಾರವಾಗಿ ನಗರಾಭಿವೃದ್ಧಿ ಸಚಿವಬಸವರಾಜ ಬೈರತಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಈಗಾಗಲೇ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಯಾದಗಿರಿಯಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜ್‌ ಕಟ್ಟಡ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ನೀಡಿ ಸೂಕ್ತ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಶೀಘ್ರವೇ ಅಡಿಗಲ್ಲು ಸಮಾರಂಭ ನಿಗದಿ ಪಡಿಸಲಾಗುವುದು.ಜೊತೆಗೆ ಜಿಲ್ಲಾ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅಭಿವೃದ್ಧಿಗೆ ವೇಗ ನೀಡುವುದಾಗಿ ಹೇಳಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್‌ ದಾಳಿಯಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದರು.ರಾಜ್ಯದಲ್ಲಿ ಇನ್ನೂ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಬಿಎಸ್‌ವೈ ಮುಂದುವರಿಯಲಿದ್ದಾರೆ. ಅದರಲ್ಲಿ ಯಾವುದೇ ಸಂಶಯ ಬೇಡ. ಪಕ್ಷದಲ್ಲಿ ಅವರನ್ನು ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ ಎಂದು ಹೇಳಿದರು.

ನಗರಕ್ಕೆ ಹೊಂದಿಕೊಂಡಿರುವ ರೈಲ್ವೆ ಮೇಲ್ಸೇತುವೆ ಶಿಥಿಲಗೊಂಡಿದೆ. ಕೂಡಲೇ ಕಾಮಗಾರಿ ಕೈಗೊಂಡುವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ  ಮಾಡಿಕೊಡಲಾಗುವುದು. ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಪರಿಹಾರ ಒದಗಿಸಿ ಕೊಡಲಾಗುವುದು. ಠಾಣಗುಂದಿ ಬಳಿ ಭೀಮಾ ನದಿಗೆ ಹಾಗೂ ವಡಿಗೇರಾ ತಾಲೂಕಿನ ಚನ್ನೂರ(ಜೆ) ಹತ್ತಿರ ಕೃಷ್ಣಾ ನದಿಗೆ ದೊಡ್ಡ ಬ್ರಿಡ್ಜ್ ಕಂ. ಬ್ಯಾರೇಜ್‌ಗಳ ನಿರ್ಮಾಣ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಕಾಮಗಾರಿ ಅನುಷ್ಠಾನಗೊಂಡರೆ ಹಲವಾರು ಗ್ರಾಮಗಳ ಜನರ ಕುಡಿವ ನೀರಿನ ಸಮಸ್ಯೆ ದೂರವಾಗುವ ಜೊತೆಗೆಅವರ ಜಮಿನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಳ್ಳಲು ಸಹಾಯಕವಾಗುತ್ತದೆ. ಜಿಲ್ಲೆಯಲ್ಲಿ ಯಾವುದಾದರೂ ಅಕ್ರಮ ಚಟುವಟಿಕೆಗಳು ನಡೆದರೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯವಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಡಾ. ವೀರಬಸವಂತರಡ್ಡಿ ಮುದ್ನಾಳ, ಬಿಜೆಪಿ ಮಂಡಲ ಅಧ್ಯಕ್ಷ ರಾಜಶೇಖರ ಕಾಡಂನೋರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.