ಶಹಾಪುರ: ಅಂಗಡಿಗಳಿಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ
ನಾಲ್ಕೈದು ಅಂಗಡಿಗೆ ಕೆನ್ನಾಲಿಗೆ ಚಾಚಿದ ಬೆಂಕಿ, ಸಾಮಾಗ್ರಿಗಳು ಸುಟ್ಟು ಭಸ್ಮ
Team Udayavani, Jan 12, 2023, 9:00 AM IST
ಶಹಾಪುರ: ನಗರದ ಗ್ಯಾರೇಜ್ ಲೈನ್ ನ ನಾಲ್ಕೈದು ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದು ಅಪಾರ ನಷ್ಟವಾದ ಘಟನೆ ಜ.11ರ ರಾತ್ರಿ ನಡೆದಿದೆ.
ಗ್ಯಾರೇಜ್ ಲೈನ್ ವೀರ ಭೂಮಿಪುತ್ರ ಏಜೆನ್ಸಿಯ ಅಂಗಡಿಯಲ್ಲಿ ಮೊದಲು ಬೆಂಕಿ ಹೊತ್ತಿದ್ದು, ಈ ಅಂಗಡಿಯ ಹಿಂಬದಿಯ ಆರ್ಟ್ಸ್ ಮತ್ತು ಫರ್ನಿಚರ್ ಅಂಗಡಿಗೂ ಬೆಂಕಿ ಮುನ್ನಾಲೆ ಚಾಚಿಕೊಂಡಿದ್ದು, ಒಟ್ಟು ನಾಲ್ಕೈದು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ ಎನ್ನಲಾಗಿದೆ.
ವೀರ ಭೂಮಿ ಪುತ್ರ ಎಜೆನ್ಸಿ ಅಂಗಡಿಯೊಳಗಿನ ಕೃಷಿ ಪರಿಕರಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ
ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR