ಚಿಟಗುಪ್ಪದಲ್ಲಿ ನಿಲ್ಲದ ಕೋವಿಡ್

ಮೂವರ ಬಲಿ ನಿನ್ನೆ ಏಳು ಜನರಲ್ಲಿ ಸೋಂಕು ಪತ್ತೆ

Team Udayavani, Jun 1, 2020, 12:39 PM IST

01-June-07

ಹುಮನಾಬಾದ: ಚಿಟಗುಪ್ಪ ತಾಲೂಕಿನಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದ್ದು, ಈ ವರೆಗೆ ಮೂರು ಜನರ ಬಲಿ ಪಡೆದಿದೆ. ರವಿವಾರ ಒಂದೇ ದಿನ ಒಟ್ಟು 7 ಜನರಲ್ಲಿ ಕೋವಿಡ್‌ ಸೋಂಕಿರುವುದು ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಮೃತಪಟ್ಟಿದ 75 ವರ್ಷದ ವ್ಯಕ್ತಿಗೂ ಹಾಗೂ ಆತನ ಕುಟುಂಬದ ನಾಲ್ಕು ಜನರಲ್ಲಿ ಸೋಂಕಿರುವುದು ದೃಢಪಟ್ಟಿದೆ.

ಚಿಟಗುಪ್ಪ ಪಟ್ಟಣದ ಇಬ್ಬರು ಹಾಗೂ ಪುರಸಭೆ ವ್ಯಾಪ್ತಿಯ ಫಾತ್ಮಾಪುರದ ಒಬ್ಬ ಮಹಿಳೆ ಸೋಂಕು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ಮೂವರು ಮೃತಪಟ್ಟ ನಂತರವೇ ಪಾಸಿಟಿವ್‌ ಪತ್ತೆಯಾಗಿರುವುದು ವಿಶೇಷ. ರವಿವಾರದ ವರದಿ ಪ್ರಕಾರ, ಚಿಟಗುಪ್ಪ ಪಟ್ಟಣದ ಕಂಟೇನ್ಮೆಂಟ್‌ ಝೋನ್‌ನಲ್ಲಿನ 75 ವರ್ಷದ ವ್ಯಕ್ತಿ ರಕ್ತದೊತ್ತಡ, ಜ್ವರ ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮೇ 29ರಂದು ಚಿಟಗುಪ್ಪ ಪಟ್ಟಣದ ಮನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಮೃತ ವ್ಯಕ್ತಿ ಗಂಟಲು ದ್ರವ ಮಾದರಿ ಪಡೆದು ಪರೀಕ್ಷೆಗೆ ಕಳುಹಿಸಿದ್ದು, ರವಿವಾರ ಪಾಸಿಟಿವ್‌ (ಪಿ-2965) ಎಂದು ಗುರುತಿಸಲಾಗಿದೆ.

ಸದ್ಯ ಆರೋಗ್ಯ ಅಧಿಕಾರಿಗಳು ಮೃತ ವ್ಯಕ್ತಿಯ ಸಂಪರ್ಕದವರ ಪತ್ತೆಗೆ ಮುಂದಾಗಿದ್ದಾರೆ. ಮೃತ ವ್ಯಕ್ತಿ ಪತ್ನಿ, ಮಗ ಸೊಸೆ ಹಾಗೂ ಮೊಮ್ಮಗಳಿಗೆ ಸೋಂಕು ಇರುವುದು ಪತ್ತೆಯಾಗಿದೆ. ಅವರ ಮನೆ ಪಕ್ಕದಲ್ಲಿನ 60 ವರ್ಷದ ಮಹಿಳೆ ಹಾಗೂ ಪಟ್ಟಣದ ಬೇರೆ ಬಡಾವಣೆಯ 40 ವರ್ಷದ ಶಿಕ್ಷಣ ಇಲಾಖೆ ಸಿಬ್ಬಂದಿಗೂ ಪಾಸಿಟಿವ್‌ ಬಂದಿದೆ. ಆದರೆ, ಯಾರ ಸಂಪರ್ಕದಿಂದ ಬಂದಿದೆ ಎಂಬುವುದು ತಿಳಿದುಬಂದಿಲ್ಲ. ಈ ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಡಾ| ವೀರನಾಥ ಕನಕ ನೇತೃತ್ವದಲ್ಲಿ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕದ ವ್ಯಕ್ತಿಗಳ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಈ ವರೆಗೆ ತಹಶೀಲ್ದಾರ್‌ ಜೀಯಾವುದ್ದಿನ್‌ ನೇತೃತ್ವದಲ್ಲಿ 28 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ. ಅಲ್ಲದೆ, ಬಡಾವಣೆಗಳನ್ನು ಸೀಲ್‌ ಡೌನ್‌ ಮಾಡಲಾಗಿದ್ದು, ಎಲ್ಲ ರಸ್ತೆಗಳನ್ನು ಬಂದ್‌ ಮಾಡಿ ಜನರ ಸಂಚಾರ ನಿಷೇಧಿಸಲಾಗಿದೆ.

ಪಾಸಿಟಿವ್‌ ಪತ್ತೆಯಾದ ಬಡಾವಣೆಗಳಿಗೆ ಚಿಟಗುಪ್ಪ ತಹಶೀಲ್ದಾರ್‌ ಮಹಮದ್‌ ಜೀಯಾವುದ್ದಿನ್‌, ಕೋವಿಡ್‌ ಉಸ್ತುವಾರಿ ಅಧಿಕಾರಿ ಡಾ| ಗೋವಿಂದ, ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ ರಾಜಪುರೋಹಿತ, ತಾಲೂಕು ವೈದ್ಯಾಧಿಕಾರಿ ಅಶೋಕ ಮೈಲಾರೆ, ಡಾ| ವೀರನಾಥ ಕನಕ ಸೇರಿದಂತೆ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ರಾಜೀ ಸಂಧಾನದಿಂದ ಕಕ್ಷಿದಾರರಿಗೆ ಶೀಘ್ರ ನ್ಯಾಯ: ಬಿ.ಎಸ್‌.ರೇಖಾ

ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

Surapura: ದೊರೆಯ ಕುವರನಿಗೆ ‘ಕೈ’ ಹಿಡಿದ ಸುರಪುರ ಜನತೆ : ರಾಜಾ ವೇಣುಗೋಪಾಲ ನಾಯಕ ಗೆಲುವು

1-Yadagiri

Yadagiri Result: ಸೋಲನ್ನು ಒಪ್ಪಿಕೊಂಡು, ಹೊರ ನಡೆದ ರಾಜೂಗೌಡ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

ಭೀಕರ ಅಪಘಾತ: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ, ಪ್ರಯಾಣಿಕರು ಬಸ್ಸಿನಡಿ ಸಿಲುಕಿರುವ ಶಂಕೆ

Road Mishap: ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಾಯ… ಓರ್ವ ಪ್ರಯಾಣಿಕ ಸಿಲುಕಿರುವ ಶಂಕೆ

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

court

Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-aaaa

Mangaluru; ಅತೀ ವೇಗದ ವಾಹನ ಚಾಲನೆ ತಡೆಗೆ ಮೊಬೈಲ್ ಸ್ಪೀಡ್ ರಾಡಾರ್ ಗನ್ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.