ಅಕ್ರಮ ಹತ್ತಿ ವ್ಯಾಪಾರ: 4 ಲಾರಿ ಜಪ್ತಿ

Team Udayavani, Dec 29, 2017, 3:59 PM IST

yad-5.jpg

ಶಹಾಪುರ: ತಾಲೂಕಿನ ವಡಗೇರಾ ಗ್ರಾಮದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಹತ್ತಿ ವ್ಯಾಪಾರ ವಹಿವಾಟು ಮಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ವಡಗೇರಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮೌಲಾಲಿ ಸೇರಿದಂತೆ ಇತರೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಹತ್ತಿ ತುಂಬಿದ್ದ ನಾಲ್ಕು ಲಾರಿಗಳನ್ನು ಎಪಿಎಂಸಿ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಗುರುವಾರ ನಡೆದಿದೆ.

ನಾಲ್ಕು ಲಾರಿಯಲ್ಲಿ ಅಂದಾಜು 250 ಕ್ವಿಂಟಲ್‌ ಹತ್ತಿ ಇರಬಹುದು. ಇದರ ಮೌಲ್ಯ ಅಂದಾಜು 12.50 ಲಕ್ಷ ರೂ. ಆಗಿದೆ ಎಂದು ಎಪಿಎಂಸಿ ಕಾರ್ಯದರ್ಶಿ ರಂಗನಾಥ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾತನಾಡಿದ ಸಹಾಯಕ ನಿರ್ದೇಶಕ ಭೀಮರಾಯ, ಇದುವರೆಗೆ 113 ಹತ್ತಿ ಲಾರಿಗಳನ್ನು ಜಪ್ತಿ ಮಾಡಿ 10 ಲಕ್ಷಕ್ಕಿಂತಲೂ ಹೆಚ್ಚಿನ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುವುದು. 

ನಿಗದಿಪಡಿಸಿದ ಹತ್ತಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವಂತೆ ತಿಳಿಸಲಾಗುವುದು. ತಾಲೂಕಿನಲ್ಲಿ ರಸ್ತೆ ಬದಿ ಸಾಕಷ್ಟು ಸಂಖ್ಯೆಯಲ್ಲಿ ಅಕ್ರಮ ಹತ್ತಿ ಮಾರಾಟ ಕೇಂದ್ರಗಳು ಹುಟ್ಟಿಕೊಂಡಿವೆ. ರೈತರು ಎಚ್ಚರ ವಹಿಸಬೇಕಿದೆ.

ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹತ್ತಿ ಮಿಲ್‌ಗಳಿವೆ. ಪ್ರತಿಯೊಬ್ಬ ರೈತರು ನಿಯಮಾನುಸಾರವಾಗಿ ಪರವಾನಗಿ ಪಡೆದುಕೊಂಡ ಮಿಲ್‌ಗ‌ಳಿಗೆ ಹತ್ತಿ ಮಾರಾಟ ಮಾಡಬೇಕು. ಮಿಲ್‌ಗ‌ಳು ಪರವಾನಿಗೆ ಪಡೆದಿರುತ್ತವೆ. ಹಾಗಾಗಿ ಯಾವುದೇ ಮೋಸ ಮಾಡಲು ಸಾಧ್ಯವಿಲ್ಲ. ಅಕ್ರಮವಾಗಿ ಖರೀದಿಸುವರಿಗೆ ಹತ್ತಿ ಮಾರಾಟ ಮಾಡಿದ್ದಲ್ಲಿ ತೂಕದಲ್ಲಿ ಮೋಸ ಸೇರಿದಂತೆ ಬಾಕಿ ದುಡ್ಡು ನೀಡದೆ ಪರಾರಿಯಾದ ಸಾಕಷ್ಟು ಘಟನೆಗಳು ಕಣ್ಮುಂದೆ ಇವೆ. ಅಲ್ಲದೆ ಅವರು ಯಾವುದೇ ರಸೀದಿ ಕೊಡುವುದಿಲ್ಲ ಎಂದು ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸಿದ್ದರೂ ಇಂತಹ ಘಟನೆಗಳು ನಡೆಯುತ್ತಿವೆ. ಪರವಾನಗಿ ಪಡೆದ ಹತ್ತಿ ಖರೀದಿದಾರರಿಗೆ ಮಾರಾಟ ಮಾಡಬೇಕು ಎಂದು ಸರ್ಕಾರ ನಿರ್ದೇಶನ ಇದ್ದರೂ ಎಪಿಎಂಸಿ ಪರವಾನಗಿ ಇಲ್ಲದಿರುವ ವ್ಯಾಪಾರಸ್ಥರ ಬಳಿ ರೈತರು ಹತ್ತಿ ವ್ಯಾಪಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಇದರಿಂದ ರೈತರ ಶ್ರಮಕ್ಕೆ ಸೂಕ್ತ ಫಲ ಸಿಗುವುದಿಲ್ಲ. ಮೋಸ ಹೋಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.