ಅನೈತಿಕ ಸಂಬಂಧ: ಗಂಡನನ್ನೇ ಕೊಂದ ಪತ್ನಿ , ಪ್ರಿಯಕರ ಬಂಧನ

Team Udayavani, Jul 14, 2022, 5:46 PM IST

19murder

ಶಹಾಪುರ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತನ್ನ ಗಂಡನನ್ನೇ ಕೊಂದು ಪ್ರಿಯತಮನೊಂದಿಗೆ ಪರಾರಿಯಾಗಿದ್ದ ಪತ್ನಿ ಮತ್ತು ಪ್ರಿಯಕರನನ್ನು ಶಹಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಜೇವರ್ಗಿ ತಾಲೂಕಿನ ದಂಡಸೋಲಾಪುರ ಗ್ರಾಮದ ಸಿದ್ದು ಬಾಬು ದೇಸಾಯಿ (28) ಪತ್ನಿ ಕಮಲಾ ಮತ್ತು ಪ್ರಿಯಕರ ಹೆಳವರ್‌ ನಿಂದ ಕೊಲೆಯಾದವ.

ಈತ ಕಮಲಾಳನ್ನು ಪ್ರೀತಿಸಿ ಮದುವೆಯಾಗಿದ್ದ. ಜೇವರ್ಗಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಬದುಕು ಸಾಗಿಸುತ್ತಿದ್ದ. ಈ ವೇಳೆ ಕಮಲಾ ತನ್ನದೇ ಗ್ರಾಮದ ಸುರೇಶ ನಿಂಗಪ್ಪ ಹೆಳವರ್‌ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಪತಿ ಸಿದ್ದುಗೆ ಕೆಲ ದಿನಗಳ ನಂತರ ತಿಳಿದು ಕೋಪಗೊಂಡು ಮನೆಯಲ್ಲಿ ಪತ್ನಿ ಜೊತೆ ಜಗಳವಾಡಿದ್ದ. ನಂತರ ಕೆಲವರ ಸಮ್ಮುಖದಲ್ಲಿ ಸಮಾಧಾನಗೊಂಡು ಶಹಾಪುರದ ಗಂಗಾ ನಗರಕ್ಕೆ ಬಂದು ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.

ಆದರೆ ಇಲ್ಲಿಗೂ ಬಂದ ಪ್ರಿಯಕರ ಸುರೇಶ ಹೆಳವರ್‌ ಮತ್ತು ಪತ್ನಿ ಕಮಲಾ ಅಕ್ರಮ ಸಂಬಂಧ ಮುಂದುವರೆದಿತ್ತು. ತಮ್ಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನೇ ಮುಗಿಸುವ ಆಲೋಚನೆ ಮಾಡಿ ಪತ್ನಿ ಪ್ರಿಯಕರನಿಗೆ ಕರೆ ಮಾಡಿ ಮನೆಗೆ ಕರೆಯಿಸಿಕೊಂಡು ಪತಿ ಸಿದ್ದು ಮನೆಯಲ್ಲಿ ಮಲಗಿರುವಾಗ ಕೊಲೆ ಮಾಡಿದ್ದರು. ನಂತರ ಶವವನ್ನು ಸುರೇಶ ತನ್ನ ಸ್ನೇಹಿತ ಚಿತಾಪುರ ತಾಲೂಕಿನ ಇಂಗಳಿಗಿ ಗ್ರಾಮದ ಮಂಜುನಾಥ ಸ್ವಾಮಿ ಎಂಬಾತನ ಸಹಾಯದೊಂದಿಗೆ ದೋರನಹಳ್ಳಿ ಸಮೀಪದ ಕಾಲುವೆ ಸಮೀಪ ಎಸೆದಿದ್ದರು ಎನ್ನಲಾಗಿದೆ.

ನಂತರ ಠಾಣೆಗೆ ಹಾಜರಾದ ಪತ್ನಿ, ತನ್ನ ಪತಿ ಸಿದ್ದು ದೇಸಾಯಿ ಕಾಣೆಯಾಗಿದ್ದಾನೆ ಪ್ರಕರಣ ದಾಖಲಿಸಿದ್ದರು. ಆದರೆ ಈ ಕುರಿತು ಸಂಶಯಗೊಂಡ ಸಿದ್ದು ದೇಸಾಯಿ ಅವರ ಸಂಬಂಧಿ ಬಸಪ್ಪ ಟಣಕೆದಾರ ಶಹಾಪುರ ಠಾಣೆಗೆ ಈ ಕುರಿತು ತೀವ್ರ ತನಿಖೆ ಮೂಲಕ ಸತ್ಯ ಬಯಲಾಗಬೇಕಿದೆ ಎಂದು ದೂರು ಸಲ್ಲಿಸಿದ್ದರು. ನಂತರ ಪ್ರಕಣ ತಿರುವು ಪಡೆದುಕೊಂಡು ಪೊಲೀಸರ ತನಿಖೆಯಿಂದ ಬಯಲಾಗಿದೆ. ಆರೋಪಿಗಳು ಶವವನ್ನು ದೋರನಹಳ್ಳಿ ಸಮೀಪದ ಕಾಲುವೆ ಬಳಿ ಬೀಸಾಡಿರುವುದನ್ನು ತೋರಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಡಿವೈಎಸ್‌ಪಿ ಮಂಜುನಾಥ, ಪಿಐ ಶ್ರೀನಿವಾಸ ಅಲ್ಲಾಪುರೆ ಸೇರಿದಂತೆ ಇತರರು ಸ್ಥಳ ಪರಿಶೀಲನೆ ನಡೆಸಿದರು. ಜು. 11ರಂದು ಪ್ರಕರಣವನ್ನು ಪರಿವರ್ತಿಸಿ ಕೊಲೆಗೈದ ಪತ್ನಿ ಕಮಲಾ ಮತ್ತು ಸುರೇಶನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.