ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಿಸಿ; ಡಾ| ರಾಗಪ್ರಿಯಾ
ಜಿಲ್ಲೆಯ 53 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
Team Udayavani, Feb 17, 2021, 6:15 PM IST
ಯಾದಗಿರಿ: ಆರೋಗ್ಯ ಇಲಾಖೆ ಸಿಬ್ಬಂದಿ, ಕಂದಾಯ, ಪೊಲೀಸ್, ಪಂಚಾಯತ್ ರಾಜ್ ಇಲಾಖೆಗಳು ಸೇರಿದಂತೆ ಇತರ ಇಲಾಖೆಯ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎರಡನೇ ಡೋಸ್ (ಲಸಿಕೆ) ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಸೂಚನೆ ನೀಡಿದರು.
ಎರಡನೇ ಡೋಸ್ ವಿತರಣೆಗೆ ಕುರಿತು ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ -19 ಲಸಿಕೆಗೆ ಸಂಬಂಧಿ ಸಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಜನಸಂದಣಿ ಉಂಟಾಗದಂತೆ ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆಗೆ ವ್ಯವಸ್ಥಿತ ಯೋಜನೆ ರೂಪಿಸಿಕೊಳ್ಳಬೇಕು ಎಂದರು.
ಲಸಿಕೆ ಸಂಗ್ರಹಿಸಿಡಲು ಜಿಲ್ಲೆಯಲ್ಲಿ ದಾಸ್ತಾನು ಕೇಂದ್ರ ತೆರೆಯಲಾಗಿದ್ದು, ಲಸಿಕೆ ಪೂರೈಕೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾಗಬಾರದು. ವ್ಯವಸ್ಥಿತವಾಗಿ ಲಸಿಕೆ ಪೂರೈಕೆ ಮಾಡಬೇಕು ಎಂದು ಅಧಿ ಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಇಂದುಮತಿ ಕಾಮಶೆಟ್ಟಿ ಮಾತನಾಡಿ, ಎರಡನೇ ಡೋಸ್ ನೀಡಲು 15 ಸೆಷನ್ ಗಳನ್ನು ಮಾಡಲಾಗಿದ್ದು, ಒಂದು ಕೇಂದ್ರದಲ್ಲಿ ದಿನಕ್ಕೆ 150 ಜನ ಲಸಿಕೆ ಪಡೆಯಬಹುದು. ಜಿಲ್ಲೆಯ 53 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕೋವಿಡ್ ಲಸಿಕೆ ಪಡೆದವರಿಗೆ ವೇಟಿಂಗ್ ಹಾಲ್, ಲಸಿಕಾ ಕೊಠಡಿ, ನಿಗಾವಣೆ ಕೊಠಡಿ ಸೇರಿದಂತೆ ಲಸಿಕೆಗಾಗಿ ಮೂರು ಕೊಠಡಿಗಳು ಬೇಕಾಗುತ್ತವೆ. ಈ ನಿಟ್ಟಿನಲ್ಲಿ ಕಿರಿಯ ಆರೋಗ್ಯ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಕೋವಿಡ್ ಲಸಿಕೆ ದಾಸ್ತಾನ ಕೇಂದ್ರದಲ್ಲಿ ಸುಮಾರು 24 ಲಕ್ಷ ಡೋಸ್ ಸಂಗ್ರಹಿಸುವ ಅವಕಾಶವಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ವಿಶ್ವ ಆರೋಗ್ಯ ಸಂಸ್ಥೆಯ ಎನ್‌ಪಿಎಸ್ ಅ ಧಿಕಾರಿ ಅನಿಲ ಕುಮಾರ್ ತಾಳಿಕೋಟಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಹೊಸ ಸೇರ್ಪಡೆ
ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ!
ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು
75ನೇ ಸ್ವಾತಂತ್ರ್ಯೋತ್ಸವ ಸಮಿತಿಯಲ್ಲಿ ಹಲವು ಕನ್ನಡಿಗರಿಗೆ ಸ್ಥಾನ
5 ಕೋ. ರೂ.ಡೀಲ್ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್ ಕಲ್ಲಹಳ್ಳಿ ಪ್ರಶ್ನೆ
ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ