78 ಕಾಮಗಾರಿಗಳಿಗೆ ಸಿಎಂ ಶಂಕು ಸ್ಥಾಪನೆ

Team Udayavani, Mar 19, 2022, 2:27 PM IST

11DC

ಯಾದಗಿರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸುರಪುರ ತಾಲೂಕಿನ ದೇವತ್ಕಲ್‌ ಗ್ರಾಮದಲ್ಲಿ 1024 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ 78 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ 36 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 24 ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಜೊತೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್‌. ಅಶೋಕ ಇರಲಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಹೆಲಿಕಾಪ್ಟರ್‌ ಮೂಲಕ ಹೊರಟ ಸಿಎಂ ಹಾಗೂ ಸಚಿವರು, ತೋರಣಗಲ್‌ನಲ್ಲಿ ಕೆಲ ಕಾಲ ತಂಗಿದ್ದು, ನಂತರ ಬೆಳಗ್ಗೆ 11.30ಕ್ಕೆ ದೇವತ್ಕಲ್‌ ಗ್ರಾಮಕ್ಕೆ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಿ, ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ವಿವರಿಸಿದರು.

ನಂತರ ಹೆಲಿಕಾಪ್ಟರ್‌ ಮೂಲಕ ದೋರನಹಳ್ಳಿ ಗ್ರಾಮಕ್ಕೆ ಆಗಮಿಸಿ ಇತ್ತೀಚೆಗೆ ಸಿಲಿಂಡರ್‌ ಸೊ#ಧೀಟದಿಂದ ಮೃತಪಟ್ಟ 15 ಜನರಿಗೆ ತಲಾ 5 ಲಕ್ಷ ರೂ. ಪರಿಹಾರ ಚೆಕ್‌ ನ್ನು ಅವರ ಕುಟುಂಬ ವರ್ಗದವರಿಗೆ ವಿತರಿಸಲಿದ್ದಾರೆ. ಆನಂತರ ದೋರನಹಳ್ಳಿಯಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಕಂದಾಯ ಸಚಿವರ ಗ್ರಾಮ ವಾಸ್ತವ್ಯ

ಸಿಎಂ ನಿರ್ಗಮನದ ನಂತರ ಕಂದಾಯ ಸಚಿವ ಆರ್‌. ಅಶೋಕ ಒಟ್ಟು 738.95 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಜೊತೆಗೆ ಇತರೆ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಕಂದಾಯ ಸಚಿವರು ಶನಿವಾರ ದೇವತ್ಕಲ್‌ ಗ್ರಾಮದಲ್ಲಿ ವಾಸ್ತವ್ಯ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದು, ರವಿವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಂದಾಯ ಇಲಾಖೆ 13, ಅಂಬೇಡ್ಕರ್‌ ನಿಗಮ 6, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ 2, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ 6, ಕೃಷಿ ಇಲಾಖೆ 5, ಪಶು ಸಂಗೋಪನಾ ಇಲಾಖೆ 2, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 6 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುವುದು ಎಂದು ತಿಳಿಸಿದರು.

ನಂತರ ಮಧ್ಯಾಹ್ನ 2.20ಕ್ಕೆ ಹೆಲಿಕಾಪ್ಟರ್‌ ಮೂಲಕ ದೇವತ್ಕಲ್‌ ಗ್ರಾಮದಿಂದ ನಿರ್ಗಮಿಸಿ ಮಧ್ಯಾಹ್ನ 3 ಗಂಟೆಗೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಸಿಲಿಂಡರ್‌ ಸ್ಫೋಟದಿಂದ ಮೃತಪಟ್ಟವರ ವಾರಸುದಾರ ಪ್ರತಿ ಸದಸ್ಯರಿಗೆ 5 ಲಕ್ಷ ರೂ. ನಂತೆ ಒಟ್ಟು 15 ಸದಸ್ಯರಿಗೆ (ಒಟ್ಟು 75 ಲಕ್ಷ ರೂ.) ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಚೆಕ್‌ ವಿತರಿಸಲಿದ್ದಾರೆ ಎಂದರು.

ಅಟಲಜೀ ನಾಡಕಚೇರಿ ಕಟ್ಟಡಗಳ ಶಿಲಾನ್ಯಾಸ

ಕೊಡೇಕಲ್‌, ಸೈದಾಪುರ, ಬಳಿಚಕ್ರ, ದೋರನಹಳ್ಳಿ ಹಾಗೂ ಕಕ್ಕೇರಾ ಅಟಲಜೀ ನಾಡಕಚೇರಿ ಕಟ್ಟಡಗಳಿದ್ದು, ಒಟ್ಟು ಅಂದಾಜು ಮೊತ್ತ 3.20 ಕೋಟಿ ವೆಚ್ಚದಲ್ಲಿ ಹೈಟೆಕ್‌ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಇದ್ದರು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.