ಹತ್ತಿ ಬೆಳೆಗೆ ಸಿಗುವುದೇ ಸೂಕ್ತ ಬೆಲೆ?

Team Udayavani, Nov 10, 2019, 4:03 PM IST

yg-tdy-1

ಯಾದಗಿರಿ: ರೈತ ಬೆವರು ಸುರಿಸಿ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೇ ಕಂಗಾಲಾಗುತ್ತಿರುವುದು ಒಂದೆಡೆಯಾದರೆ ಇನ್ನೊಂದೆಡೆ ರಸ್ತೆಯುದ್ದಕ್ಕೂ ದಲ್ಲಾಳಿಗಳ ದರ್ಬಾರ್‌ನಿಂದಾಗಿ ಕೈ ಕೆಸರಾದರೂ ಬಾಯಿ ಮೊಸರಾಗಲಿಲ್ಲ ಎನ್ನುವಂತಾಗಿದೆ.

ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ ಹಾಗೂ  ವಡಗೇರಾ ವ್ಯಾಪ್ತಿಯಲ್ಲಿ ಅತೀ ಹೆಚ್ಚಿನ ರೈತರು ಮುಂಗಾರಿನಲ್ಲಿ ಹತ್ತಿ ಬೆಳೆದಿದ್ದು, ಈಗ ಹತ್ತಿ ಕಟಾವಿಗೆ ಬಂದು ರೈತರು ಕಟಾವಿನಲ್ಲಿ ತೊಡಗಿದ್ದು, ಸುಮಾರು 1 ತಿಂಗಳಿನಿಂದ ಹತ್ತಿ ಖರೀದಿ ಜೋರಾಗಿ ಸಾಗಿದೆ. ಈ ಮಧ್ಯೆ ಜಿಲ್ಲೆಯ ಬಹುತೇಕ ಕಡೆ ರಸ್ತೆಯುದ್ದಕ್ಕೂ ದಲ್ಲಾಳಿಗಳು ರೈತರಿಂದ ಹತ್ತಿ ಖರೀದಿಸಲು ತಾತ್ಕಾಲಿಕ ವ್ಯಾಪಾರ ಆರಂಭಿಸಿದ್ದು, ಇದರಿಂದ ನಿಗದಿತ ಬೆಲೆಗಿಂತ ಕಡಿಮೆ ಬೆಲೆಗೆ ರೈತರಿಂದ ಖರೀದಿಸುತ್ತಿರುವುದು ಅಮಾಯಕ ರೈತರು ಬೆಳೆಗೆ ನಗದು ಸ್ಥಳದಲ್ಲಿಯೇ ದೊರೆಯುವ ಒಂದೇ ಕಾರಣಕ್ಕೆ ಶ್ರಮ ಲೆಕ್ಕಿಸದೇ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ.

ಕ್ವಿಂಟಲ್‌ಗೆ ಮೂರ್‍ನಾಲ್ಕು ಕೆ.ಜಿ ಹೊಡೆತ: ಹತ್ತಿ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದನ್ನೇ ಬಂಡವಾಳವಾಗಿಸಿಕೊಂಡು ಲಾಭ ಪಡೆಯುತ್ತಿರುವ ರಸ್ತೆ ಬದಿ ದಲ್ಲಾಳಿಗಳು ರೈತರು ಬೆಳೆದ ಬೆಳೆಯನ್ನು 4,800 ರೂ. ಆಸುಪಾಸಿನ ದರದಲ್ಲಿ ಖರೀದಿಸುತ್ತಿದ್ದು, ಅದರಲ್ಲಿ ಅನಧಿಕೃತವಾಗಿ ಎರಡು ಕೆ.ಜಿ ಹತ್ತಿ, ಹಮಾಲಿ ಶುಲ್ಕ ಇತರ ಕಟಾವು ಮಾಡುತ್ತಿದ್ದು, ಸರಿಸುಮಾರು ಕ್ವಿಂಟಲ್‌ ಬೆಳೆಗೆ 3-4 ಕೆ.ಜಿಯಷ್ಟು ಹೊಡೆತ ಬೀಳುತ್ತಿರುವುದು ಗಮನಕ್ಕೆ ಬಂದರೂ ರೈತರ ಪಾಡು ಯಾರಿಗೂ ಹೇಳಿಕೊಳ್ಳದಂತಾಗಿದೆ.

ದಲ್ಲಾಳಿಗಳಿಗೆ ಚುರುಕು ಮುಟ್ಟಿಸಿದ ಅಧಿಕಾರಿಗಳು: ಈ ಮಧ್ಯೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿ  ಕಾರಿಗಳು ರಸ್ತೆ ಬದಿ ವ್ಯಾಪಾರ ಮಾಡುವುದನ್ನು ನಿಲ್ಲಿಸಿ, ಮಾರುಕಟ್ಟೆಯಲ್ಲಿ ಸೂಕ್ತ ಸೌಕರ್ಯ ಒದಗಿಸಲಾಗುವುದು. ಇಲ್ಲಿಯೇ ಖರೀದಿಸುವಂತೆ ಹಲವು ಬಾರಿ ಹೇಳಿದರೂ ಕ್ಯಾರೇ ಎನ್ನದ ದಲ್ಲಾಳಿಗಳಿಗೆ ಚುರುಕು ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿದ್ದು, ಈಗಾಗಲೇ ಹಲವರಿಗೆ ನೋಟಿಸ್‌ ನೀಡಿದ್ದು, ಕಳೆದ 15 ದಿನಗಳಲ್ಲಿ 3.80 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಸರ್ಕಾರದ ನಿಗದಿತ ಬೆಲೆ ದೊರೆಯಲಿ: ಸರ್ಕಾರ ಹತ್ತಿಗೆ ಗುಣಮಟ್ಟದ ಆಧಾರದಲ್ಲಿ ಕ್ವಿಂಟಲ್‌ಗೆ 5,250ರಿಂದ 5,550 ರೂ. ನಿಗದಿ ಮಾಡಿದೆ. ಆದರೆ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಖರೀದಿಸುವಂತೆ ಆದೇಶ ನೀಡದಿರುವುದು ದಲ್ಲಾಳಿಗಳಿಗೆ ವರವಾಗಿ ಪರಿಣಮಿಸಿದ್ದು, ಕಾನೂನು ಚೌಕಟ್ಟಿನಲ್ಲಿ ರೈತರಿಂದ ಬೆಳೆ ಖರೀದಿಸಿ ನಿಗದಿತ ಬೆಲೆ ದೊರೆಯುವಂತಾಗಬೇಕು ಎನ್ನುತ್ತಾರೆ ರೈತ ಮುಖಂಡರು.

ಹತ್ತಿ ನಿಗಮದ ಒಪ್ಪಂದ ಫಲ ನೀಡುವುದೇ?: ಜಿಲ್ಲೆಯಲ್ಲಿ ರೈತರು ಬೆಳೆದಿರುವ ಹತ್ತಿ ಬೆಳೆಗೆ ಸೂಕ್ತ ಬೆಲೆ ಮತ್ತು ರೈತರಿಗಾಗುತ್ತಿರುವ ಅನ್ಯಾಯ ತಡೆಯಲು ಮುಂದಾಗಿರುವ ಜಿಲ್ಲಾಡಳಿತ ಹತ್ತಿ ಖರೀದಿಸಲು ಭಾರತೀಯ ಹತ್ತಿ ನಿಗಮದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದೆ. ಜಿಲ್ಲೆಯ ಐದು ಕಡೆ ಖರೀದಿಗೆ ನಿಗಮ ಒಪ್ಪಿದೆ ಎನ್ನುವ ಮಾಹಿತಿ ಕೃಷಿ ಮಾರುಕಟ್ಟೆ ಅಧಿಕಾರಿಗಳಿಂದ ಲಭ್ಯವಾಗಿದ್ದು, ಶೀಘ್ರವೇ ಖರೀದಿ ಆರಂಭಿಸುವ ಭರವಸೆ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದದ ಪ್ರಕಾರ ಖರೀದಿ ಆರಂಭವಾದರೆ ರೈತರಿಗೆ ನ್ಯಾಯಯುತ ಬೆಲೆ ದೊರೆಯಲಿದ್ದು, ಸ್ಥಳದಲ್ಲಿಯೇ ಕೈಗೆ ಹಣದ ಜೊತೆಗೆ ಅನ ಧಿಕೃತ ಕಡಿತದ ಹೊರೆಯೂ ತಪ್ಪಲಿದೆ. ಸೋಮವಾರದಿಂದಲೇ ಖರೀದಿ ಆರಂಭಿಸುವ ಸಾಧ್ಯತೆಗಳಿವೆ.

-ಅನೀಲ ಬಸೂದೆ

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.