ಎಲ್ಲ ಸಮಸ್ಯೆಗೂ ಆತ್ಮನಿರ್ಭರ ಭಾರತ ಉತ್ತರ

Team Udayavani, Sep 18, 2020, 7:28 PM IST

yg-tdy-1

ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ “ಆತ್ಮ ನಿರ್ಭರ ಭಾರತವೇ’ ನಮ್ಮೆಲ್ಲ ಸಮಸ್ಯೆಗಳಿಗೆ ಉತ್ತರವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಜಿಲ್ಲಾಡಳಿತದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ ಹಾಗೂ ಬದ್ಧವಾಗಿದೆ ಎಂದರು.

ಈ ಭಾಗದಲ್ಲಿ ಮೊದಲು ಬಡತನ, ಅನಕ್ಷರತೆ, ನಿರುದ್ಯೋಗ ಸಮಸ್ಯೆ, ಅನ್ಯಾಯ-ಶೋಷಣೆಗಳಿಂದ ವಿಮೋಚನೆ ಆಗಬೇಕಿದೆ. ಅದಕ್ಕೆ ಅಪಾರ ಇಚ್ಛಾಶಕ್ತಿ ಅಗತ್ಯವಿದ್ದು ಇದು ಆತ್ಮನಿರ್ಭರ್‌ ಭಾರತದಿಂದ ಸಾಧ್ಯ ಎಂದರು.

ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ನಮ್ಮ-ನಿಮ್ಮ ಕೈಯಲ್ಲಿದೆ. ನಮ್ಮ ಊರು, ಜಿಲ್ಲೆ, ರಾಜ್ಯ, ರಾಷ್ಟ್ರದ ಭವಿಷ್ಯ ನಮ್ಮ ಕೈಯಲ್ಲಿದೆ. ಮುಂದಿನ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ವೇಳೆಗೆ ಯಾದಗಿರಿಯ ಅಭಿವೃದ್ಧಿ ಕರ್ನಾಟಕದ ಅಭಿವೃದ್ಧಿಯ ಕಥೆ ಹೇಳುವಂತೆ ಆಗಬೇಕು. ಅದಕ್ಕೆ ನಾವು ಕಂಕಣ ತೊಡಬೇಕಿದೆ ಎಂದು ಕರೆ ನೀಡಿದರು.

ಸ್ವಾಮಿ ರಮಾನಂದರು, ಸರ್ದಾರ್‌ ವಲ್ಲಭಭಾಯಿ ಪಟೇಲರು ಹಾಗೂ ಕೆ.ಎಂ. ಮುನ್ಷಿಅವರು ಹೈದ್ರಾಬಾದ್‌ ಕರ್ನಾಟಕ ವಿಮೋಚನಾ ದಿನದ ಹಿಂದಿರುವ ಮೂರು ಶಕ್ತಿಗಳು. ಕಲ್ಯಾಣ ಕರ್ನಾಟಕದ ರಚನೆಯಲ್ಲಿ ಇವರ ಪಾತ್ರ ಅನನ್ಯ. ಸರ್ದಾರ್‌ ಶರಣಗೌಡ ಇನಾಮದಾರ, ವಿದ್ಯಾಧರ್‌ ಗುರೂಜಿ, ಪಂಡಿತ್‌ ತಾರಾನಾಥ ಹಾಗೂಕುಸುಮಾಕರ ದೇಸಾಯಿ ಹೀಗೆ ಸಾವಿರಾರು ಸ್ವತಂತ್ರ ಸೇನಾನಿಗಳ, ಯುವಕರ, ತಾಯಂದಿರ ತ್ಯಾಗ- ಬಲಿದಾನಗಳನ್ನು ಸ್ಮರಿಸಿದರು.

ಡಾ| ನಂಜುಂಡಪ್ಪ ವರದಿ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಯಾದಗಿರಿ ಅತಿ ಹಿಂದುಳಿದ ಭಾಗಗಳಲ್ಲಿ ಒಂದಾಗಿದೆ. ಆರ್ಥಿಕಸಮೀಕ್ಷೆಗಳಲ್ಲಿ ಯಾದಗಿರಿಯ ಸ್ಥಾನ 29,  30ನೇ ಸ್ಥಾನದಲ್ಲಿದೆ. ಇದನ್ನ ಉತ್ತಮ ಪಡಿಸಬೇಕಿದೆ. ಐಐಟಿ, ಐಐಎಸ್ಸಿ ಯಂತಹ ಉತ್ತಮ ಶಿಕ್ಷಣಸಂಸ್ಥೆಗಳು, ಕೈಗಾರಿಕೋದ್ಯಮಗಳನ್ನು ಈ ಭಾಗಕ್ಕೆ ತರಬೇಕಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಕಲಂ 371ಎ ಪ್ರಕಾರ ಕಾರ್ಯಕ್ರಮ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಚಿವಾಲಯ ಸ್ಥಾಪನೆ ಘೋಷಣೆಮಾಡಿದ್ದಾರೆ. ಈ ಭಾಗದ ಸರ್ವತೋಮುಖ  ಬೆಳವಣಿಗೆಗೆ ಸುಮಾರು 7000 ಕೋಟಿ ರೂ. ಅಗತ್ಯವಿದ್ದು, ಹಂತ ಹಂತವಾಗಿ ನಮ್ಮ ಮುಖ್ಯಮಂತ್ರಿಗಳು ಕಾರ್ಯಕ್ರಮ ರೂಪಿಸುತ್ತಿದ್ದಾರೆ ಎಂದರು.

ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷಬಸನಗೌಡ ಪಾಟೀಲ ಯಡಿಯಾಪುರ, ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌., ಜಿಪಂ ಸಿಇಒ ಶಿಲ್ಪಾ ಶರ್ಮಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.

ಟಾಪ್ ನ್ಯೂಸ್

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.