ಖಾಜಾ ಬಂದೇ ನವಾಜ್‌ ಖಾಸಗಿ ವಿವಿ ಸ್ಥಾಪನೆ


Team Udayavani, Jan 2, 2018, 3:47 PM IST

yad-3.jpg

ಕಲಬುರಗಿ: ಸ್ನಾತಕೋತ್ತರ ಅಧ್ಯಯನಕ್ಕಾಗಿ ಅರ್ಜಿ ಹಾಕುವವರಿಗೆಲ್ಲ ಪ್ರವೇಶ ಕಲ್ಪಿಸಿ ಶಿಕ್ಷಣ ನೀಡುವ ನಿಟ್ಟಿನಲ್ಲಿ ಖಾಜಾ ಬಂದೇ ನವಾಜ್‌ ಖಾಸಗಿ ವಿವಿ ಸ್ಥಾಪಿಸಲು ರಾಜ್ಯ ಸರಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಾ ಗಾಂಧಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆಯಡಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರ ಉನ್ನತ ಶಿಕ್ಷಣ ಅವಶ್ಯಕತೆ ಹಾಗೂ ಅವರಿದ್ದ ಸ್ಥಳದಲ್ಲಿಯೇ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಗತ್ಯ ವಿಶ್ವ ವಿದ್ಯಾಲಯಗಳನ್ನು ಸ್ಥಾಪಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಖಾಜಾ ಬಂದೇ ನವಾಜ್‌ ವಿವಿ ಸ್ಥಾಪಿಸಿ ಸ್ನಾತಕೋತ್ತರ ಅಧ್ಯಯನಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹೇಳಿದರು.

ಪ್ರತಿ ವರ್ಷ ಸುಮಾರು 12000 ವಿದ್ಯಾರ್ಥಿಗಳು ಸ್ನಾತಕೋತ್ತರ ವಿಭಾಗದಲ್ಲಿ ಪ್ರವೇಶ ಪಡೆಯಲು ಅರ್ಜಿ ಹಾಕುತ್ತಾರೆ. ಅವರಲ್ಲಿ ಕೇವಲ 3000 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಸಿಗುತ್ತದೆ. ಉಳಿದ 9000 ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗದಿರಲು ಅಗತ್ಯ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಈಗಾಗಲೇ ರಾಯಚೂರು ವಿಶ್ವವಿದ್ಯಾಲಯ ಘೋಷಣೆ ಮಾಡಲಾಗಿದೆ. ನಗರದಲ್ಲಿ ಶರಣಬಸವ ವಿಶ್ವವಿದ್ಯಾಲಯವೂ ಖಾಸಗಿಯಾಗಿ ಈಗಾಗಲೇ ಕಾರ್ಯಾರಂಭಗೊಂಡಿದೆ. ಖಾಜಾ ಬಂದೇ
ನವಾಜ್‌ ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ ಎಂದು ಹೇಳಿದರು. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಯೋಜನೆಯಡಿ ಪ್ರತಿ ವರ್ಷ ರಾಜ್ಯ ಸರ್ಕಾರ 20,000 ಕೋಟಿ
ರೂ. ವೆಚ್ಚ ಮಾಡುತ್ತಿದೆ. ಇಲ್ಲಿನ ವಿಶೇಷ ಘಟಕ ಯೋಜನೆಯಡಿ 62.5 ಲಕ್ಷ ರೂ. ಆಧಾರದ ಮೇಲೆ ಪ್ರತಿಭಾವಂತ 140 ವಿದ್ಯಾರ್ಥಿಗಳಿಗೆ ಈಗ ಲ್ಯಾಪ್‌ಟಾಪ್‌ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡಲು ಪ್ರಕ್ರಿಯೆ ನಡೆದಿದೆ.

ಹೈದ್ರಾಬಾದ್‌ ಕರ್ನಾಟಕ ಪ್ರವೇಶಾಭಿವೃದ್ಧಿ ಮಂಡಳಿ ಅನುದಾನ ಬಳಸಿಕೊಂಡು ಹಂತ ಹಂತವಾಗಿ ಗುವಿವಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರ ಉನ್ನತ ಶಿಕ್ಷಣದಲ್ಲಿ ಅಧ್ಯಯನ ಮಾಡಲು ಲ್ಯಾಪ್‌ಟಾಪ್‌ ನೀಡುತ್ತಿರುವುದರಿಂದ ನಾನು ಈ ಸರ್ಕಾರಕ್ಕೆ ಅಭಾರಿಯಾಗಿದ್ದಾನೆ. ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ ಟ್ಯಾಪ್‌ ನೀಡಿದರೆ ಚೆನ್ನಾಗಿರುತ್ತದೆ. ನಮ್ಮ ವಿಶ್ವವಿದ್ಯಾಲಯ ಬೇರೆ ವಿಶ್ವವಿದ್ಯಾಲಯದ ಜತೆ ಸ್ಪರ್ಧೆ ಮಾಡಲು ಶೈಕ್ಷಣೀಕವಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ ಬೋಧನೆಯಲ್ಲಿ ವಿನೂತನ ತಂತ್ರಜ್ಞಾನ ಅಳವಡಿಸಬೇಕು ಎಂದು ಹೇಳಿದರು.

ಸಿಂಡಿಕೇಟ್‌ ಸದಸ್ಯ ಸಾಯಬಣ್ಣ ಕೆಂಗೂರಿ, ವಿದ್ಯಾ ವಿಷಯಕ ಪರಿಷತ್‌ ಸದಸ್ಯ ಸತೀಶ ಅಳ್ಳೊಳ್ಳಿ, ಮೌಲ್ಯಮಾಪನ ಕುಲಸಚಿವ ಪ್ರೊ| ಎಂ.ಡಿ. ಮದರಿ, ವಿತ್ತಾಧಿಕಾರಿ ಪ್ರೊ| ಲಕ್ಷ್ಣ್ಮ ರಾಜನಾಳಕರ್‌, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕದ ನಿರ್ದೇಶಕ ಪ್ರೊ| ವಿ.ಟಿ. ಕಾಂಬಳೆ ಇದ್ದರು

ಸಚಿವರಿಗೆ ಮುತ್ತಿಗೆ ಕಾರ್ಯಕ್ರಮ ಮುಗಿಸಿ ಹೊರಬರುತ್ತಿದ್ದ ಸಂದರ್ಭದಲ್ಲಿ ಸಚಿವ ಡಾ| ಶರಣ ಪ್ರಕಾಶ ಪಾಟೀಲ ಅವರಿಗೆ
ಸ್ನಾತಕೋತ್ತರ ವಿದ್ಯಾರ್ಥಿಗಳು ಮುತ್ತಿಗೆ ಹಾಕಿ ಎಲ್ಲ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸಬೇಕು ಎಂದು ಆಗ್ರಹಿಸಿದರು. ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಲಿದೆ ಎಂದು ಸಚಿವರು ಭರವಸೆ ನೀಡಿದರು. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.