ಮಹಿಳಾ ದೌರ್ಜನ್ಯ ತಡೆಗೆ ಖಾಕಿ ಕಣ್ಗಾವಲು

ನಗರ ಸೇರಿದಂತೆ ಎಲ್ಲೆಡೆ ಮಹಿಳೆಯರ ಬಗ್ಗೆ ಸುರಕ್ಷತೆಯ ಪ್ರಶ್ನೆಗಳು ಉದ್ಭವಿಸಿವೆ.

Team Udayavani, Oct 4, 2021, 6:33 PM IST

ಮಹಿಳಾ ದೌರ್ಜನ್ಯ ತಡೆಗೆ ಖಾಕಿ ಕಣ್ಗಾವಲು

ಯಾದಗಿರಿ: ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ನಿಯಂತ್ರಿಸಲು, ಇನ್ನಿತರೆ ಅಪರಾಧ ಪ್ರಕರಣಗಳ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು, ಅಪರಾಧ ಕೃತ್ಯದಲ್ಲಿ ಭಾಗಿಯಾಗುವವರಿಗೆ ಬಿಸಿ ಮುಟ್ಟಿಸಲು ಪೊಲೀಸ್‌ ಇಲಾಖೆ ಮುಂದಾಗಿದ್ದು, ನಗರದಲ್ಲಿ ಮಹಿಳಾ ಸಂಚಾರಿ ಗಸ್ತು ಪಡೆ ನಿಯೋಜಿಸಿದೆ.

ವರದಕ್ಷಿಣೆ ಪ್ರಕರಣ, ಅತ್ಯಾಚಾರ, ಅಪಹರಣ, ಮತ್ತಿತರ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಇದಕ್ಕೆ ಕಡಿವಾಣ ಅಗತ್ಯವಿದೆ ಎಂದುದನ್ನರಿತ ಪೊಲೀಸ್‌ ಇಲಾಖೆ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದೆ.

ದಿಲ್ಲಿಯಲ್ಲಿ ನಡೆದ ನಿರ್ಭಯಾ ಪ್ರಕರಣ ನಂತರ ಅತ್ಯಾಚಾರ ವಿರುದ್ಧ ಹಲವಾರು ಕಠಿಣ ಕಾನೂನುಗಳು ಜಾರಿಗೊಂಡಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ ಮಾತ್ರ ಕಡಿಮೆಯಾಗಿಲ್ಲ. ನಗರ ಸೇರಿದಂತೆ ಎಲ್ಲೆಡೆ ಮಹಿಳೆಯರ ಬಗ್ಗೆ ಸುರಕ್ಷತೆಯ ಪ್ರಶ್ನೆಗಳು ಉದ್ಭವಿಸಿವೆ. ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ನಡೆದ ಮಹಿಳಾ ದೌರ್ಜನ್ಯ ಪ್ರಕರಣ ರಾಜ್ಯಾದ್ಯಂತ ಗಮನ ಸೆಳೆದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್‌ ಇಲಾಖೆ “ಮಹಿಳಾ ಗಸ್ತು ಪಡೆ’ ಆರಂಭಿಸಿದೆ.

ಪುಂಡ-ಪೋಕರಿಗಳಿಗೆ ಖಡಕ್‌ ವಾರ್ನಿಂಗ್‌: ಯುವತಿಯರಿಗೆ ಕಿರುಕುಳ, ಸರಗಳ್ಳತನ ಸೇರಿದಂತೆ ಮುಂತಾದ ಕೃತ್ಯಗಳಲ್ಲಿ ಭಾಗಿಯಾಗುವ ಪುಂಡ ಪೋಕರಿಗಳಿಗೆ ಬಿಸಿ ಮುಟ್ಟಿಸಲು ಖಾಕಿ ಪಡೆ ಸಜ್ಜುಗೊಂಡಿದೆ. ಯಾವುದೇ ಕೃತ್ಯಗಳು ನಡೆದ ತಕ್ಷಣವೇ ಮಹಿಳೆಯರ ರಕ್ಷಣೆಗೆ ನಿಲ್ಲಲು ಹಾಗೂ ಪುಂಡರ ಹೆಡೆಮುರಿ ಕಟ್ಟಲು ರಕ್ಷಾ ಕವಚದಂತೆ ಕಾರ್ಯ ನಿರ್ವಹಿಸಲು ಗಸ್ತುಪಡೆ ವಾಹನ ಸಿದ್ಧಗೊಂಡಿದೆ. ಈ ಗಸ್ತು ಪಡೆಯಲ್ಲಿ ಹೆಚ್ಚು ಮಹಿಳಾ ಸಿಬ್ಬಂದಿಯೇ ಕಾರ್ಯ
ನಿರ್ವಹಿಸಲಿದ್ದು, ಮಹಿಳಾ ದೌರ್ಜನ್ಯ ಬಗ್ಗೆ ಬರುವ ಯಾವುದೇ ಕರೆಗಳಿಗೆ ತಕ್ಷಣ ಸ್ಪಂದಿಸಲಿದ್ದಾರೆ. ಮಹಿಳಾ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಈ ಗಸ್ತು ಪಡೆಯ ಉಸ್ತುವಾರಿ ವಹಿಸಲಿದ್ದಾರೆ.

ಮಹಿಳೆಯರಲ್ಲಿ ಭದ್ರತೆ ಬಗ್ಗೆ ವಿಶ್ವಾಸ ಮೂಡಿಸುವುದು ಈ ಸಂಚಾರಿ ಗಸ್ತು ಪಡೆ ಮುಖ್ಯ ಉದ್ದೇಶವಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಕಾನೂನು ಭಯದ ಜತೆಗೆ ಸಮಾಜ ಹಾಗೂ ಪ್ರತಿ ಮನೆಗಳಲ್ಲಿ ಬದಲಾವಣೆ ನಡೆಯಬೇಕಿದೆ.

ಪೊಲೀಸ್‌ ಇಲಾಖೆ ವತಿಯಿಂದ ಮಹಿಳಾ ಪೊಲೀಸ್‌ ಪಡೆ ಗಸ್ತು ವಾಹನ ಸೇವೆಗೆ ಸಜ್ಜುಗೊಂಡಿದೆ. ಸದರಿ ವಾಹನ ದಿನನಿತ್ಯ ಶಾಲೆ, ಕಾಲೇಜು, ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಸೇರುವ ಸ್ಥಳಗಳಲ್ಲಿ ಸಂಚರಿಸಲಿದೆ. ಶಾಲಾ-ಕಾಲೇಜಿನ ಹತ್ತಿರ ನಿಂತು ಹೆಣ್ಣು ಮಕ್ಕಳನ್ನು ಚುಡಾಯಿಸುವ, ಸತಾಯಿಸುವುದು ಪುಂಡ ಪೋಕರಿಗಳ ಮೇಲೆ ಈ ಪಡೆ ಕಣ್ಣಿಡಲಿದೆ. ವಾಹನದಲ್ಲಿ ಮಹಿಳಾ ಸಿಬ್ಬಂದಿ ಇರುತ್ತಾರೆ.
ಡಾ| ಸಿ.ಬಿ.ವೇದಮೂರ್ತಿ,
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

*ಮಹೇಶ ಕಲಾಲ

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.