ಪ್ರತಿಯೊಬ್ಬರು ಮತ ಚಲಾಯಿಸಲಿ

Team Udayavani, Apr 10, 2018, 4:22 PM IST

yad-1.jpg

ಯಾದಗಿರಿ: ಮತ ನಿಮ್ಮ ಹಕ್ಕಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು.

ನಗರದ ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಶ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವ್ಯವಸ್ಥಿತ ಮತದಾರರಿಗೆ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್‌) ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮತದಾರರ ಗುರುತಿನ ಚೀಟಿ ಪಡೆಯದೇ ಇರುವ ಫಲಾನುಭವಿಗಳನ್ನು ಗುರುತಿಸಿ, ಹೆಸರು ನೋಂದಾಯಿಸಬೇಕು. ಕೂಡಲೇ ಅವರಿಗೆ ಮತದಾರರ ಚೀಟಿ ನೀಡಬೇಕು ಎಂದು ಈ ಸಂದರ್ಭದಲ್ಲಿ ಯಾದಗಿರಿ ತಹಶೀಲ್ದಾರ್‌ ಅವರಿಗೆ ಆದೇಶಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ದೇವದಾಸಿಯರು, ಲೈಂಗಿಕ ಅಲ್ಪಸಂಖ್ಯಾತರು, ಧನಶ್ರೀ ಮತ್ತು ಚೇತನ ಯೋಜನೆಯ ಫಲಾನುಭವಿಗಳಿಗೆ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸದಸ್ಯರುಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಜಿಲ್ಲಾ  ಧಿಕಾರಿಗಳು ಬೋಧಿ ಸಿದರು. ನಂತರ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.

ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ ಸ್ವಾಗತಿಸಿದರು. ದೇವದಾಸಿ ಪುನರ್ವಸತಿ ಯೋಜನೆ ಯೋಜನಾ ಧಿಕಾರಿ ಎಸ್‌.ಎನ್‌. ಹಿರೇಮಠ ನಿರೂಪಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕ ಶಿವಮಂಗಳಾ ಎಂ. ಪ್ರಸನ್ನ ವಂದಿಸಿದರು. ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಹಾಕಿದ ಮತ ವಿವಿ ಪ್ಯಾಟ್‌ನಿಂದ ದೃಢಪಡಿಸಿಕೊಳ್ಳಿ  
ಸುರಪುರ:
ದೇಶದ ಸುಭದ್ರ ಪ್ರಜಾಪ್ರಭುತ್ವ ತಳಹದಿಗೆ ಮತದಾನ ಮೂಲವಾಗಿದೆ. ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್‌ ತಿಳಿಸಿದರು.

ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸ್ವೀಪ್‌ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ಮಹತ್ವವಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಮತ ಚಲಾಯಿಸುವ ಹಕ್ಕನ್ನು ಸಂವಿಧಾನ ನೀಡಿದ್ದು, ಪ್ರತಿಯೊಬ್ಬ ಮತದಾರನೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸಲಹೆ ನೀಡಿದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿವಿ ಪ್ಯಾಟ್‌ ಯಂತ್ರ ಬಳಿಸಲಾಗುತ್ತಿದ್ದು, ಇದರಿಂದ ಮತದಾರ ತಾನು ಹಾಕಿರುವ ಮತ ದೃಢಪಡಿಸಿಕೊಳ್ಳಬಹುದಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರು ಪ್ರಭುಗಳಾಗಿದ್ದು, ಯಾವುದೇ ಅಮಿಷಗಳಿಗೂ ಬಲಿಯಾಗದೆ ಪಾರದರ್ಶಕವಾಗಿ ಮತ ಚಲಾಯಿಸುವ ಅಗತ್ಯವಿದೆ ಎಂದು ನುಡಿದರು. ಕ್ಷೇತ್ರ ಶಿಕ್ಷಣಾಧಿ ಕಾರಿ ನಾಗರತ್ನಾ ಓಲೇಕಾರ್‌, ಪೌರಯುಕ್ತ
ದೇವಿಂದ್ರ ಹೆಗ್ಗಡೆ, ಸಿಡಿಪಿಒ ಮೀನಾಕ್ಷಿ, ಅಂಗನವಾಡಿ ಮೇಲ್ವಿಚಾರಕಿ ಚಂದ್ರಲೀಲಾ ನಿಂಬೂರ್‌, ಪ್ರಾಶಾಶಿ ಸಂಘದ ಅಧ್ಯಕ್ಷ ಸೋಮರಡ್ಡಿ ಮಂಗ್ಯಾಳ, ಸಿಆರ್‌ಪಿ ತಿಪ್ಪಣ್ಣ, ಎಪಿಎಫ್‌ನ ಅನ್ವರ್‌ ಜಮಾದಾರ್‌ ಸೇರಿದಂತೆ ದರಬಾರ ಶಾಲೆ, ದರಬಾರ್‌ ಉರ್ದು ಶಾಲೆ, ಕಬಾಡಗೇರಾ, ರಾಣಿ ಜಾನಕೀದೇವಿ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಗಳು ಇದ್ದರು. ಸಿಆರ್‌ಪಿ ಸಿದ್ದಣ್ಣ ದಂಡಗುಂಡ ಅವರ ತಂಡವು ಹಾಡುಗಳ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.