ವಿದ್ಯಾರ್ಥಿಗಳು ಗುರಿ ಸಾಧಿಸುವ ಪ್ರಯತ್ನ ಮಾಡಲಿ


Team Udayavani, Aug 10, 2018, 12:11 PM IST

yad-1.jpg

ಯಾದಗಿರಿ: ವಿದ್ಯಾರ್ಥಿಗಳು ಸರಕಾರಿ ಸೌಲಭ್ಯಗಳ ಸದುಪಯೋಗ ಪಡೆದು ನಿರಂತರ ಪ್ರಯತ್ನದೊಂದಿಗೆ ಕಷ್ಟಪಟ್ಟು ಅಭ್ಯಾಸ ಮಾಡಬೇಕು. ಉತ್ತಮ ಗೆಳೆಯ-ಗೆಳತಿಯರ ಸ್ನೇಹದೊಂದಿಗೆ ಅಭ್ಯಾಸದ ಕುರಿತು ಚರ್ಚೆ ಮಾಡಿದಾಗ ವಿಷಯದ ಮನನವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ರಾಚಪ್ಪ ಕೆ. ತಾಳಿಕೋಟಿ ಹೇಳಿದರು.

ಗುರುವಾರ ಕೋಲಿವಾಡ ಸರಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕ್ಲಬ್‌ ಉದ್ಘಾಟನೆ ಹಾಗೂ ಮೂಲಭೂತ ಹಕ್ಕುಗಳು ಮತ್ತು ಮೂಲಭೂತ ಕರ್ತವ್ಯಗಳು ಕುರಿತ ಹಮ್ಮಿಕೊಳ್ಳಲಾಗಿದ್ದ
ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉನ್ನತ ಶ್ರೇಣಿಯಲ್ಲಿ ಉತೀರ್ಣರಾಗುವುದರೊಂದಿಗೆ ಉನ್ನತ ಹುದ್ದೆ ಪಡೆಯಲು ಸಾಧ್ಯವಿದೆ. 

ವಿದ್ಯಾಥಿಗಳಿಗೆ ಸರಿಯಾದ ದಾರಿ ತೋರಲು ಹಿಂದೆ ಗುರುಗಳು ಇರುತ್ತಾರೆ. ಆದರೆ ಗುರಿ ಸಾಧಿಸುವ ಪ್ರಯತ್ನ ವಿದ್ಯಾರ್ಥಿಗಳು ಮಾಡಬೇಕು ಎಂದು ಕಿವಿಮಾತು ಹೇಳಿದರು. ಎಲ್ಲಾ ಕಾನೂನು ಮೂಲ ಸಂವಿಧಾನವಾಗಿದ್ದು. ಎಲ್ಲರೂ ಸಂವಿಧಾನಕ್ಕೆ ಬದ್ಧರಾಗಿರಬೇಕು. ಸಂವಿಧಾನದಲ್ಲಿರುವ ನೀತಿಗಳಿಗೆ ವಿರುದ್ಧವಾಗಿ ಯಾವುದೇ ಕಾಯ್ದೆಗಳನ್ನು ರಚಿಸುವಂತಿಲ್ಲ. ಸರ್ವರಿಗೂ ಸಮಬಾಳು ಎನ್ನುವ ರೀತಿಯಲ್ಲಿ ಎಲ್ಲರಿಗೂ ಸಾಧ್ಯವಾದಷ್ಟು ಕಾನೂನಿನ ಅರಿವು ಅಗತ್ಯವಾಗಿದೆ. ಇಂದು ಸ್ತ್ರೀಯರಿಗೂ ಪುರುಷರಿಗೂ ಸಮಾನವಾದ ಕಾನೂನಿನ ನಿಯಮಗಳಿವೆ ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಮಾತನಾಡಿ, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರವು ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಾನೂನು ಸೇವಾ ಕ್ಲಬ್‌ಗಳನ್ನು ನಿರ್ಮಿಸಿ ಆ ಮೂಲಕ ಜನರಲ್ಲಿ ಕಾನೂನಿನ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಶಾಲೆಗಳಲ್ಲಿ ಮುಖ್ಯ ಗುರುಗಳ ಅಧ್ಯಕ್ಷತೆಯಲ್ಲಿ ಕಾನೂನು ಸಾಕ್ಷರತಾ ಕ್ಲಬ್‌ಗನ್ನು ಸ್ಥಾಪಿಸಿ ವಿದ್ಯಾರ್ಥಿಗಳಲ್ಲಿ ನಿಬಂಧ, ಚರ್ಚಾಕೂಟ ಮುಂತಾದ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ಕಾನೂನಿನ ಅರಿವು
ಮೂಡಿಸಲಾಗುತ್ತದೆ ಎಂದು ಹೇಳಿದರು. 

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ವಕೀಲರಾದ ಕಲ್ಲಪ್ಪ ಬಿ. ಅಂಗಡಿ ಮಾತನಾಡಿ, ಮೂಲಭೂತ ಹಕ್ಕುಗಳು, ಮೂಲಭೂತ ಕತವ್ಯಗಳು ಹಾಗೂ ಜನನ ಮತ್ತು ಮರಣ ನೋಂದಣಿ ಮಾಡಿಸುವುದರಿಂದ ಆಗುವ ಲಾಭ-ನಷ್ಟದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ಮಾತನಾಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶ್ರೀನಿವಾಸರಾವ್‌ ಕುಲಕರ್ಣಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಸಿ.ಎಸ್‌. ಮಾಲಿಪಾಟೀಲ, ಪ್ರೌಢಶಾಲೆಯ ಪ್ರಭಾರ ಮುಖ್ಯಗುರು ಖಾಜಾ ಮೈನುದ್ದೀನ್‌ ಹಾಗೂ ಜಿಲ್ಲಾ ವಕೀಲರ ಸಂಘದ
ಕಾರ್ಯದರ್ಶಿ ಶಾಂತಪ್ಪ ಖಾನಹಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 

ಕೋಲಿವಾಡ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಹ ಶಿಕ್ಷಕ ಎಸ್‌.ಕೆ. ಬಿರಾದಾರ ನಿರೂಪಿಸಿದರು. ಸಹ ಶಿಕ್ಷಕ ಮೈಬೂಬ ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.