ಮಕ್ಕಳ ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಕಾಪಾಡಿ


Team Udayavani, Jun 4, 2019, 2:26 PM IST

yedagiri-tdy-3..

ಯಾದಗಿರಿ: ಎಲೆØೕರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕಕ್ಕೆ ಚಾಲನೆ ನೀಡಿ ಡಿಎಚ್ಒ ಡಾ| ಉಸ್ಮಾನ್‌ ಹಬೀಬ ಪಟೇಲ್ ಮಾತನಾಡಿದರು.

ಯಾದಗಿರಿ: ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಅಂಗವಾಗಿ ಆಶಾ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಸಹಾಯಕರು ಮನೆ ಮನೆಗೆ ಭೇಟಿ ನೀಡಿ ತಾಯಂದಿರಿಗೆ/ಪೋಷಕರಿಗೆ ಅತಿಸಾರ ಭೇದಿ ನಿಯಂತ್ರಣ ಬಗ್ಗೆ ಓ.ಆರ್‌.ಎಸ್‌ ದ್ರಾವಣ ಹಾಗೂ ಝಿಂಕ್‌ ಮಾತ್ರೆ ಹೇಗೆ ನೀಡಬೇಕು ಎಂಬುದರ ಮಾಹಿತಿ ನೀಡುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಹಬೀಬ್‌ ಉಸ್ಮಾನ್‌ ಪಟೇಲ್ ತಿಳಿಸಿದರು.

ಜಿಲ್ಲೆಯಾದ್ಯಂತ ಜೂನ್‌ 3ರಿಂದ 17ರ ವರೆಗೆ ನಡೆಯಲಿರುವ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

5 ವರ್ಷದೊಳಗಿನ ಮಕ್ಕಳ ಮನೆಯಲ್ಲಿ ಓ.ಆರ್‌.ಎಸ್‌ ಪಾಕೇಟ್ ವಿತರಣೆ ಮಾಡಿ, ಓ.ಆರ್‌.ಎಸ್‌ ತಯಾರಿಸುವುದು ಹಾಗೂ ಮಕ್ಕಳಿಗೆ ನೀಡುವ ಪ್ರಮಾಣದ ಕುರಿತು ಮಾಹಿತಿ ನೀಡುವರು. ಅತಿಸಾರ ಭೇದಿಯಾದ ಮಗುವಿಗೆ ಓ.ಆರ್‌.ಎಸ್‌ ದ್ರಾವಣ ನೀಡಿ ಪ್ರತಿದಿನ ಒಂದು ಝಿಂಕ್‌ ಮಾತ್ರೆಯನ್ನು 14 ದಿವಸಗಳವರೆಗೆ ನೀಡಬೇಕು. ಜೊತೆಯಲ್ಲಿ ಕೈ ತೊಳೆಯುವ ವಿಧಾನದ ಬಗ್ಗೆ ಹಾಗೂ ಸ್ವಚ್ಛತೆ ಬಗ್ಗೆ ಕೂಡ ತಿಳಿಸುವರು ಎಂದರು.

ಜಿಲ್ಲಾ ಆರ್‌.ಸಿ.ಎಚ್ ಅಧಿಕಾರಿ ಡಾ| ಲಕ್ಷ್ಮೀಕಾಂತ ಮಾತನಾಡಿ, ಅತಿಸಾರ ಭೇದಿ ಸಮಯದಲ್ಲಿ ಹಾಗೂ ಅತಿಸಾರ ಭೇದಿ ನಂತರ ತಾಯಿಯ ಎದೆ ಹಾಲು ಮತ್ತು ಪೂರಕ ಆಹಾರ ಮುಂದುವರಿಸಬೇಕು. ಮಗು ಹುಟ್ಟಿದಾಗಿನಿಂದ 6 ತಿಂಗಳವರೆಗೆ ತಾಯಿಯ ಎದೆ ಹಾಲು ಮಾತ್ರ ನೀಡಬೇಕು. ಆಹಾರ ತಯಾರಿಸುವಾಗ ಹಾಗೂ ತಿನ್ನಿಸುವಾಗ ಮೊದಲು ಮತ್ತು ನಂತರ ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕು. ಅತಿಸಾರ ಭೇದಿ ಚಿಕಿತ್ಸೆಗಾಗಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಆರೋಗ್ಯ ಸಹಾಯಕರನ್ನು ಸಂಪರ್ಕಿಸಲು ಸಲಹೆ ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಹಣಮಂತ ರೆಡ್ಡಿ ಮಾತನಾಡಿ, ಓ.ಆರ್‌.ಎಸ್‌ ಹಾಗೂ ಝಿಂಕ್‌ ಮಾತ್ರೆ ನೀಡಿ ಅತಿಸಾರ ಭೇದಿಯನ್ನು ತಡೆಯಬಹುದು. ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಎಲ್ಲರೂ ಊಟಕ್ಕೆ ಮೊದಲು ಮತ್ತು ಶೌಚಾಲಯದ ನಂತರ ಕೈಗಳನ್ನು ಸಾಬೂನಿನಿಂದ ತೊಳೆದುಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ| ನಾಗನಾಥ, ಡಾ| ಜ್ಞಾನೇಶ್ವರ, ಶಂಕರಾನಂದ, ಸುದರ್ಶನ, ಗ್ರಾಪಂ ಸದಸ್ಯರಾದ ಶರಣಗೌಡ, ಶಿವರಾಯ, ಸೋಮನಾಥರೆಡ್ಡಿ, ಸಿದ್ದಪ್ಪಹಳ್ಳಿ, ನಾಗಮ್ಮ ಹಾಗೂ ಅಂಗನವಾಡಿ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಅಬ್ದುಲ್ಸಾಬ್‌ ನಿರೂಪಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ವಂದಿಸಿದರು.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.