ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ

Team Udayavani, Oct 31, 2021, 4:23 PM IST

18clean

ಯಾದಗಿರಿ: ಅಧಿಕಾರಿಗಳು ನಗರದ ಪ್ರತಿಯೊಂದು ವಾರ್ಡ್‌ಗಳಿಗೆ ಭೇಟಿ ನೀಡಿ, ಘನತ್ಯಾಜ್ಯ ವಿಂಗಡನೆಯ ನಿರ್ವಹಣೆಗೆ ಮತ್ತು ಸಾಂಕ್ರಾಮಿಕ ರೋಗ ಹರಡದಂತೆ ನಗರದಲ್ಲಿ ಸ್ವತ್ಛತೆಗೆ ಎಲ್ಲ ಸ್ಥಳೀಯ ಸಂಸ್ಥೆಗಳು ಪ್ರಥಮ ಆದ್ಯತೆ ವಹಿಸಬೇಕು. ಮನೆ-ಮನೆ ಕಸ ಸಂಗ್ರಹಣೆ ಮತ್ತು ಮೂಲದಲ್ಲಿಯೇ ತ್ಯಾಜ್ಯ ವಿಂಗಡನೆ ಎಲ್ಲ ವಾರ್ಡ್‌ ಗಳಲ್ಲಿ ಜಾರಿಗೆ ತರಬೇಕು ಎಂದು ಡಿಸಿ ಡಾ| ರಾಗಪ್ರಿಯಾ ಆರ್‌. ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಲಸಿಕಾಕರಣದಿಂದ ಮಾತ್ರ ಮೂರನೇ ಅಲೆ ತಪ್ಪಿಸಲು ಸಾಧ್ಯ. ಹೀಗಾಗಿ ಸಾರ್ವಜನಿಕರಿಗೆ ಕೋವಿಡ್‌ ಲಸಿಕಾ ಕುರಿತು ನಗರದ ವ್ಯಾಪ್ತಿಯಲ್ಲಿ ಜಾಗೃತಿ ಅಭಿಯಾನವನ್ನು ಆಯೋಜಿಸಬೇಕು. ಲಸಿಕೆ ನಿರಾಕರಣೆ ಮತ್ತು ವಲಸೆ (ಗುಳೆ) ಹೋದವರ ಬಗ್ಗೆ ಅಧಿಕಾರಿಗಳು ಖುದ್ದು ಮನೆಗೆ ಭೇಟಿ ಮಾಹಿತಿ ಪಡೆಯಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ನೀಡಿದ ಗುರಿಗೆ ಅನುಗುಣವಾಗಿ ಗುರಿ ಸಾಧಿಸಲು ಹೆಚ್ಚು ಒತ್ತು ನೀಡಬೇಕು ಎಂದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಕಲಬುರ್ಗಿ ಕ್ಯಾಬಿನೆಟ್‌, ನಗರೋತ್ಥಾನ ಹಂತ-2, ನಗರೋತ್ಥಾನ ಹಂತ-3 ಹಾಗೂ 14, 15ನೇ ಹಣಕಾಸು ಮತ್ತು ಎಸ್‌.ಎಫ್‌.ಸಿ ಯೋಜನೆಯಡಿ ಅನುಮೋದನೆಯಾದ ಕಾಮಗಾರಿಗಳ ಪ್ರಗತಿಯ ಮಾಹಿತಿ ಕೇಳಿದರು.

ನಗರೋತ್ಥಾನ ಹಂತ-3 (ಮೂರರ) ರಡಿಯಲ್ಲಿ ಮಂಜೂರಾದ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿಯಲ್ಲಿ ಅನುಮೋದನೆಯಾದ ಎಲ್ಲ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಯಾದಗಿರಿ ನಗರಸಭೆಯಲ್ಲಿ ಒಂದು (1) ಕಾಮಗಾರಿ ಬಾಕಿಯಿದೆ ಮತ್ತು 2 ಕಾಮಗಾರಿಗಳ ಕಾಮಗಾರಿ ಬದಲಾವಣೆಗೆ ಡಿಎಂಎಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಎಲ್ಲ ಕಾಮಗಾರಿಗಳನ್ನು 15 ದಿನದೊಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಶಾ ಆಲಂ ಹುಸೇನ್‌, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಬಕ್ಕಪ್ಪ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.