ಸರ್ಕಾರಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ

Team Udayavani, Jul 16, 2019, 12:26 PM IST

ಸುರಪುರ: ಎಚ್‌ಡಿಕೆ ಸೇನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಸುರಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಹುತೇಕ ಯೋಜನೆಗಳು ಬೋಗಸ್‌ ನಡೆಯುತ್ತಿದ್ದು, ಈ ಕುರಿತು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥ ಗ್ರಾಮ ಪಂಚಾಯಿತಿ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ ಎಚ್.ಡಿ. ಕುಮಾರಸ್ವಾಮಿ ಸೇನೆ ಕಾರ್ಯಕರ್ತರು ಸೋಮವಾರ ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ರಸ್ತೆ ತಡೆಯಿಂದ ಪ್ರಯಾಣಿಕರು ಪರದಾಡಿದರು. ಟೈರ್‌ಗೆ ಬೆಂಕಿ ಹಚ್ಚಿ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ನಂತರ ಪೊಲೀಸರ ಮಧ್ಯಸ್ಥಿಕೆಯಿಂದ ರಸ್ತೆ ತಡೆ ಕೈ ಬಿಟ್ಟು ಪ್ರತಿಭಟನೆ ಮುಂದುವರೆಸಿದರು.

ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲ್ಲಿ ಸರಕಾರದ ಬಹುತೇಕ ಯೋಜನೆಗಳು ಸಮರ್ಪಕ ಅನುಷ್ಠಾನಗೊಳ್ಳುತ್ತಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸದೆ ರಾಜಕೀಯ ಒತ್ತಡಕ್ಕೆ ಮಣಿದು ಬೋಗಸ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮನೆಗಳ ಹಂಚಿಕೆಯಲ್ಲಿ ಗ್ರಾಮ ಸಭೆ ಕರೆಯದೆ ಎಲ್ಲಿಯೋ ಕುಳಿತು ಫಲಾನುಭವಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ. ಒಂದೇ ಕಟುಂಬದಲ್ಲಿ ಅಣ್ಣ ತಮ್ಮಂದಿರಿಗೆ ಮತ್ತು ಸಂಬಂಧಿಕರಿಗೆ ಹಂಚಿಕೆ ಮಾಡಿದ್ದಾರೆ. ಕೆಲ ಕಡೆ ಈ ಹಿಂದೆ ಪಡೆದುಕೊಂಡವರಿಗೆ ಪುನಃ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅರ್ಹ ಬಡವರು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.

ಚರಂಡಿ, ಸಿಸಿ ರಸ್ತೆ ಕಾಮಗಾರಿಗಳು ನಿಯಮಿತವಾಗಿ ನಡೆಯುತ್ತಿಲ್ಲ. ನರೇಗಾ ಯೋಜನೆಯಲ್ಲಿ ಚೆಕ್‌ ಡ್ಯಾಂ, ಕೃಷಿ ಹೊಂಡ ಸೇರಿದಂತೆ ಇನ್ನಿತರೆ ಕಾಮಗಾರಿಗಳು ಸಂಪೂರ್ಣ ಬೋಗಸ್‌ ನಡೆಯುತ್ತಿವೆ. ಮಂಜೂರಿಯಾಗಿರುವ ಎಲ್ಲಾ ಕಾಮಗಾರಿಗಳನ್ನು ನಿಮಯ ಮೀರಿ ಪಂಚಾಯಿತಿ ಸದಸ್ಯರಿಗೆ ಕೊಡಲಾಗಿದೆ. ಸದಸ್ಯರು ಕಾಮಗಾರಿ ನಿರ್ವಹಿಸದೆ ರಾಜಕೀಯ ಪ್ರಭಾವ ಬಳಸಿ ಬೋಗಸ್‌ ಬಿಲ್ ಬರೆಯಸಿಕೊಳ್ಳುತ್ತಿದ್ದಾರೆ. ಇದರಿಂದ ಸರಕಾರದ ಹಣ ದುರ್ಬಳಕೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಸಂಘಟನೆ ಅನೇಕ ಬಾರಿ ಮನವಿ ಮಾಡಿದೆ. ತಾಪಂ ಇಒ ಮತ್ತು ತಹಶೀಲ್ದಾರ್‌ ಗಮನಕ್ಕೂ ತಂದರು ಪ್ರಯೋಜನವಾಗಿಲ್ಲ.

ಈ ಕುರಿತು ಸೂಕ್ತ ತನಿಖೆ ಮಾಡಿಸಿ ತಪ್ಪಿತಸ್ಥ ಪಿಡಿಒಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ಜುಲೈ 20ರಂದು ತಾಪಂ ಕಚೇರಿ ಎದುರು ಉವಾಸ ಧರಣಿ ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು.

ಜಿಪಂ ಸಿಇಒ ಅವರಿಗೆ ಬರೆದ ಮನವಿಯನ್ನು ತಹಶೀಲ್ದಾರ್‌ ಕಚೇರಿ ಶಿರಸ್ತೇದಾರ್‌ ರಾಮು ಪೂಜಾರಿಗೆ ಸಲ್ಲಿಸಿದರು. ಸೇನೆಯ ಅನೇಕ ಕಾರ್ಯಕರ್ತರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಸುರಪುರ: ತೊಗರಿ ಖರೀದಿ ಕೇಂದ್ರ ಆರಂಭಿಸಿ ನೋಂದಣಿ ಅವಧಿ ವಿಸ್ತರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಘಟಕ ಪದಾಧಿಕಾರಿಗಳು ಪ್ರತಿಭಟನೆ...

  • ಯಾದಗಿರಿ: ತೋಟಗಾರಿಕೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಸ್ಟೇಷನ್‌ ರಸ್ತೆ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಎರಡು ದಿನಗಳವರೆಗೆ...

  • ಯಾದಗಿರಿ: ಕೀರ್ತನ ಸಾಹಿತ್ಯದಲ್ಲಿ ಪುರಂದರ ದಾಸರದ್ದು ಬಹು ದೊಡ್ಡ ಹೆಸರು. ಗಾತ್ರ-ಗುಣ ಎರಡರಲ್ಲೂ ಅವರ ಕೃತಿಗಳದು ಗಿರಿತೂಕ. ಯತಿವರ್ಯರಾದ ವ್ಯಾಸರಾಯರು ಪುರಂದರ...

  • ಯಾದಗಿರಿ: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು, ಅಧಿಕಾರಿಗಳು, ವೈದ್ಯರು, ಸರ್ವರು ಬದ್ಧತೆಯಿಂದ ತನು, ಮನದಿಂದ ದುಡಿಯೋಣ. ಈ ಮೂಲಕ ಯಾದಗಿರಿ ಜಿಲ್ಲೆಯನ್ನು...

  • ಯಾದಗಿರಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಇತರೆ ದೇಶಗಳಿಂದ ಮಹತ್ವದ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವದ ಉಳಿವು ಮತ್ತು ರಾಷ್ಟ್ರದ ಭದ್ರತೆಗೆ 18 ವರ್ಷ ತುಂಬಿದ...

ಹೊಸ ಸೇರ್ಪಡೆ