ಆಮೆಗತಿ ಕಾಮಗಾರಿ ಸಲ್ಲ

Team Udayavani, Jun 29, 2018, 3:03 PM IST

yad-2.jpg

ಶಹಾಪುರ: ಸರ್ಕಾರಿ ಯೋಜನೆಗಳಾದ ಸುವರ್ಣ ಗ್ರಾಮೋದಯ ಸೇರಿದಂತೆ ಹಲವು ಯೋಜನೆಗಳು
ಜಾರಿಯಲ್ಲಿದ್ದು, ಕಳೆದ ಏಳು ವರ್ಷ ಗತಿಸಿದರೂ ಇಂದಿಗೂ ಹಳೇ ಕಾಮಗಾರಿಗಳನ್ನು ಮುಂದುವರೆಸಿದ್ದು, ಅದನ್ನೆ ಅಭಿವೃದ್ಧಿ ಎಂದು ಹೇಳುವುದು ತಪ್ಪು, ಆಮೆಗತಿಯಲ್ಲಿ ಸಾಗಿರುವ ಕಾಮಗಾರಿ ಶೀಘ್ರ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಸೂಚಿಸಿದರು.

ನಗರದ ತಾಪಂ ಸಭಾಂಗಣದಲ್ಲಿ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನೆ ನಡೆಸಿದಅವರು, ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣ ಗೊಳಿಸಬೇಕು. ಸಮರ್ಪಕವಾಗಿ ಅನುದಾನ ಬಳಕೆಯಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕ್ಷೇತ್ರದಲ್ಲಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವವಿದ್ದು, ಅಂತಹ ಹಳ್ಳಿಗಳಲ್ಲಿ ಕುಡಿಯುವ ನೀರು ಗ್ರಾಮ ನೈರ್ಮಲ್ಯ ಇಲಾಖೆ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಗೊಳಿಸಲು ಮುಂದಾಗಬೇಕು. ಮತ್ತು ಈಗಾಗಲೇ ಗ್ರಾಮಗಳಲ್ಲಿದ್ದ ಶುದ್ಧ ನೀರಿನ ಘಟಕ ಚಾಲ್ತಿಯಲ್ಲಿ ಎಷ್ಟಿವೆ ಎಂದು ಮಾಹಿತಿ ನೀಡಲು ಕೋರಿದರು.
 
ಈ ಕುರಿತು ಎಇಇ ರಾಜಕುಮಾರ ಪತ್ತಾರ ಮಾತನಾಡಿ, ತಾಲೂಕಿನ 180 ಶುದ್ಧ ನೀರಿನ ಘಟಕಗಳನ್ನು
ನಿರ್ಮಾಣ ಮಾಡಲಾಗಿದ್ದು, 160 ಮಾತ್ರ ಚಾಲ್ತಿಯಲ್ಲಿವೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಕೂಡಿರುವ ಪರಿಣಾಮ
20 ಘಟಕಗಳು ಸ್ಥಗಿತಗೊಂಡಿವೆ ಎಂದು ತಿಳಿಸಿದರು.

ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಗರ ಮತ್ತು ಶಹಾಪುರ ನಗರದಲ್ಲಿ ಶೌಚಾಲಯ ನಿಮಾಣ ಮಾಡಲಾಗಿದೆ. 20 ಲಕ್ಷ.ರೂ ವೆಚ್ಚದಲ್ಲಿ ಬೀಮಾನಾಯ್ಕ ತಾಂಡಾದಲ್ಲಿ ಕಾಮಗಾರಿ ಮತ್ತು ಟಾಸ್ಕ್ಪೋರ್ಸ್‌ ಕಮಿಟಿಯಿಂದ 16 ಲಕ್ಷ. ರೂ. ಮಂಜೂರಾಗಿದ್ದು, ಕುಡಿಯುವ ನೀರಿಗಾಗಿ ಬಳಕೆ ಮಾಡುವಂತೆ ಶಾಸಕರು ಸೂಚಿಸಿದರು.

ಜಿಪಂ ಎಇಇ ಸೂಗರಡ್ಡಿ ಅವರು, ಇಲಾಖೆಯಿಂದ ಗ್ರಾಮ ವಿಕಾಸ ಯೋಜನೆಯಡಿ 50 ಲಕ್ಷ ರೂ. ಬಿಡುಗಡೆಯಾಗಿದ್ದು, ಚಾಮಾನಾಳ ಮತ್ತು ತಾಂಡಾಗಳ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹತ್ತಿಗೂಡೂರ, ಸಗರ, ನಾಗನಟಗಿ, ಹೊಸ್ಕೇರಾ ರಸ್ತೆ ಬದಿಗಳಲ್ಲಿ ಗಿಡಗಳನ್ನು ನೆಡುವಂತೆ ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಇಲಾಖೆ ಪ್ರತಿಯನ್ನು ಪ್ರಸ್ತಾಪಿಸಿದ ಅರಣ್ಯ ಇಲಖೆ ಅಧಿಕಾರಿಗಳು ಎಸ್‌ಸಿಪಿ ಉಜ್ವಲ ಯೋಜನೆಯಡಿ ಕಳೆದ ಸಾಲಿನಲ್ಲಿ ಒಟ್ಟು 650 ಮತ್ತು ಟಿಎಸ್‌ಪಿಯಲ್ಲಿ ಶೋರಾಪುರ, ಹುಣಸಗಿ, ಶಹಾಪುರ, ವಡಗೇರಾ ತಾಲೂಕು ಕೇದ್ರಗಳಲ್ಲಿ ಒಟ್ಟು 1.190 ಸದಸ್ಯರಿಗೆ ಉಚಿತ ಗ್ಯಾಸ್‌ ಸಿಲಿಂಡರ್‌ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಹೊನ್ನಪ್ಪಗೌಡ ಹೋತಪೇಟ,. ಕಾರ್ಯ ನಿರ್ವಾಹಣಾಧಿಕಾರಿ ಎಸ್‌.ಕೆ.ಟಕ್ಕಳಕಿ ಉಪಸ್ಥಿತರಿದ್ದರು. ತಾಲೂಕು ಆಡಳಿತದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನಗರದಲ್ಲಿ ಸಿಗ್ನಲ್‌ ಅಳವಡಿಕೆ ಮತ್ತು ಸಿಸಿ ಕ್ಯಾಮರಾ ಅಳವಡಿಸಲು 15 ಲಕ್ಷ ರೂ. ಅನುದಾನ ಅವಕಾಶವಿದ್ದು, ಅದನ್ನು ಸದ್ಬಳಿಕೆ ಮಾಡಿಕೊಳ್ಳಬೇಕು. ಮಂಜೂರಾದ 15 ಲಕ್ಷ ರೂ. ವೆಚ್ಚದಲ್ಲಿ ಸಿಸಿ ಕ್ಯಾಮರಾ ಮತ್ತು ಸಿಗ್ನಲ್‌ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಡು ಪೊಲೀಸ್‌ ಇಲಾಖೆ ನಿರ್ದೇಶನದಂತೆ ಕಾಮಗಾರಿ ಮುಂದುವರೆಸುವಂತೆ ನಿರ್ಮಿತಿ ಕೇಂದ್ರ ಅಧಿ ಕಾರಿಗಳಿಗೆ ಶಾಸಕರು ಸೂಚಿಸಿದರು. 

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.