ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಕ್ಕೆ ಸೂಚನೆ

Team Udayavani, Jun 19, 2022, 12:12 PM IST

6work

ಯಾದಗಿರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಮೂಲಗಳ ಅಭಿವೃದ್ಧಿ ಹಾಗೂ ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಸುತ್ತೋಲೆಯಂತೆ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಆಯ್ದುಕೊಂಡು ನಿರ್ವಹಿಸುತ್ತಿರುವ 15 ಅಮೃತ ಸರೋವರ ಕೆರೆಗಳ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಅಮರೇಶ ಆರ್‌. ನಾಯಕ ಪಿಡಿಒಗಳಿಗೆ ಸೂಚಿಸಿದರು.

ರಾಮಸಮುದ್ರ ಗ್ರಾಪಂ ವ್ಯಾಪ್ತಿಯಲ್ಲಿ ಮಿಷನ್‌ ಅಮೃತ ಸರೋವರದಡಿ ಆಯ್ಕೆಯಾದ ವರ್ಕನಳ್ಳಿಯ ಕುಂಬಾರ ಕೆರೆ, ರಾಮಸಮುದ್ರದ ಸರ್ವೇ ನಂಬರ್‌ 18ರಲ್ಲಿ ನಿರ್ಮಾಣ ಹಂತದಲ್ಲಿರುವ ಅಮೃತ ಸರೋವರ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.

ಭವಿಷತ್ತಿನಲ್ಲಿ ಉದ್ಬವಿಸುವ ನೀರಿನ ಸಮಸ್ಯೆ ಪರಿಹರಿಸಲು, ಗ್ರಾಮೀಣ ಜಲ ಭದ್ರತೆಗೆ ಧಕ್ಕೆಯಾಗದಂತೆ ವಿಶೇಷವಾಗಿ ರೈತರು ಹಾಗೂ ಮಹಿಳೆಯರ ನೀರಿನ ಭವಣೆ ನಿಭಾಯಿಸಲು, ಅಂತರ್ಜಲ ಮೂಲ ಅಭಿವೃದ್ಧಿ ಪಡಿಸುವುದು, ಜಲ ಸಂಪತ್ತಿನ ರಕ್ಷಣೆ, ಕೃಷಿ ಚಟುವಟಿಕೆ, ತೋಟಗಾರಿಕೆ, ಅರಣ್ಯೀಕರಣ ಅಭಿವೃದ್ಧಿ ಪಡಿಸುವ ಜೊತೆ ಪರಿಸರ ಸಮತೋಲನ ರಕ್ಷಿಸಿ, ಗ್ರಾಮೀಣ ಭಾಗದ ಜನರ ಆರೋಗ್ಯ ಸುಧಾರಿಸುವುದು ಮಿಷನ್‌ ಅಮೃತ ಸರೋವರ ಯೋಜನೆ ಉದ್ದೇಶವಾಗಿದೆ ಎಂದು ಹೇಳಿದರು.

ಆಜಾದಿಕಾ ಅಮೃತ ಮಹೋತ್ಸವ ಅಂಗವಾಗಿ ಮಿಷನ್‌ ಅಮೃತ ಸರೋವರ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಯಾದಗಿರಿ 34, ಗುರುಮಠಕಲ್‌ 20, ವಡಗೇರಾ 5, ಶಹಾಪುರ 11, ಸುರಪುರ 22 ಹಾಗೂ ಹುಣಸಗಿ 15 ಸೇರಿ ಒಟ್ಟು 107 ಕೆರೆಗಳನ್ನು ಆಯ್ದುಕೊಂಡಿದ್ದು, ಮೊದಲ ಹಂತವಾಗಿ ಆ. 15ರೊಳಗೆ 15 ಜಲಮೂಲಗಳನ್ನು ಅಮೃತ ಸರೋವರಗಳಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.

ತಾಪಂ ಇಒ ಬಸವರಾಜ ಶರಬೈ, ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ, ಪಿಡಿಒ ಗಿರಿಮಲ್ಲಣ್ಣ, ಜಿಪಂ ಎಡಿಪಿಸಿ ಬನ್ನಪ್ಪ ಬೈಟಿಪುಲ್ಲಿ, ಎನ್‌ಆರ್‌ ಎಂ ಜಿಲ್ಲಾ ಸಂಯೋಜಕ ಪ್ರಶಾಂತ, ಎನ್‌ಆರ್‌ಎಂ ತಾಲೂಕು ಸಂಯೋಜಕರಾದ ಜಬ್ಬರ ಪಾಷಾ, ಪವನ ಕುಮಾರ, ಪ್ರಸನ್ನ, ಉಮೇಶ, ತಾಂತ್ರಿಕ ಸಹಾಯಕ ನಿಂಗಪ್ಪ, ಐಇಸಿ ಸಂಯೋಜಕ ಬಸಪ್ಪ, ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.