ನೀರಿನ ಸಮಸ್ಯೆ ನಿವಾರಣೆಗೆ ಸೂಚನೆ
Team Udayavani, May 19, 2018, 2:11 PM IST
ವಡಗೇರಾ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ಕೂಡಲೇ ಜಿಲ್ಲಾಡಳಿತ ಗಮನಕ್ಕೆ ತರಬೇಕು
ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು.
ತಾಲೂಕಿನ ಕೊಂಕಲ್ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕೆ ಗ್ರಾಮಸ್ಥರಿಗೆ ಹೇಳಿದರು. ಜಿಲ್ಲಾಡಳಿತವು ಬೇಸಿಗೆ ಕಾಲ ಆಗಿರುವುದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು ಎಂದು ಎಲ್ಲಾ ರೀತಿಯ ಮುಂಜಾಗೃತ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಆಯಾ ವಿಭಾಗದ ಮುಖ್ಯಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದ ತಕ್ಷಣ ಅದಕ್ಕೆ ಸ್ಪಂದಿಸಿ ಕೂಡಲೇ ಕ್ರಮ
ಕೈಗೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ. ಗ್ರಾಮೀಣ ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ತಕ್ಷಣ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಅಗತ್ಯವಾದ ಅನುದಾನವನ್ನು ಒದಗಿಸಲಾಗುತ್ತದೆ.
ಗ್ರಾಮಸ್ಥರು ಸ್ವಚ್ಚತೆಯ ಬಗ್ಗೆ ಹೆಚ್ಚಿನ ಕಾಳಜಿ ತೊರಬೇಕು. ಒಂದು ವೇಳೆ ನಿರ್ಲಕ್ಷ ಮಾಡಿದರೆ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಇದನ್ನು ತಡೆಗಟ್ಟಬೇಕಾದರೆ ಎಲ್ಲರೂ ತಮ್ಮ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆ, ವಿದ್ಯುತ್, ಒಳಚರಂಡಿ ಹಾಗೂ ಇನ್ನಿತರ ಮೂಲಭೂತ ಸಮಸ್ಯೆಗಳ
ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮದ
ವಿವಿಧ ಬಡಾವಣೆಯ ನಿವಾಸಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?