ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ

Team Udayavani, Apr 13, 2022, 5:30 PM IST

18price

ಸುರಪುರ: ದಿನಬಳಕೆ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ, ಬೆಂಬಲ ಬೆಲೆ ನಿಗದಿ ಮತ್ತು ಖರೀದಿ ಕೇಂದ್ರ ಆರಂಭ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಮುಖಂಡರು ಸೋಮವಾರ ಎಪಿಎಂಸಿ ಕಾರ್ಯಾಲಯದ ಎದುರು ಪ್ರತಿಭಟಿಸಿದರು.

ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಬಾವಿ ಮಾತನಾಡಿ, ಅಡುಗೆ ಎಣ್ಣೆ, ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ದಿನಬಳಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇತ್ತ ರೈತರು ಬೆಳೆದಿರುವ ಶೇಂಗಾ ಮತ್ತು ಭತ್ತ ಬೆಳೆಗಳಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ. ಬೀಜ ಗೊಬ್ಬರಕ್ಕೆ ಖರ್ಚು ಮಾಡಿದ ಹಣ ಕೈಗೆ ಬಾರದೇ ಮಾಡಿದ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ರೈತರು, ಕೂಲಿ ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.

ತಾಲೂಕು ಅಧ್ಯಕ್ಷ ಹನುಮಂತ್ರಾಯ ಮಡಿವಾಳ ಮಾತನಾಡಿ, ಅತೀ ವೃಷ್ಟಿ ಅನಾವೃಷ್ಟಿ ಒಂದೆಡೆಯಾದರೆ ಬೆಳೆಗಳಿಗೆ ಯೋಗ್ಯ ಬೆಲೆ ಸಿಗದಿರುವುದು ರೈತರಿಗೆ ಗಾಯದ ಮೇಳೆ ಬರೆ ಎಳೆದಂತ್ತಾಗಿದೆ. ಶೇಂಗಾ ಮತ್ತು ಭತ್ತ ಕಟಾವಿಗೆ ಬಂದಿವೆ. ಶೇಂಗಾ ಬೀಜ 12 ಸಾವಿರ ರೂ. ಕ್ವಿಂಟಲ್‌ ತಂದು ಬಿತ್ತಿದ್ದಾರೆ. ಶೇಂಗಾಕ್ಕೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೇ ರೈತರು ಕಂಗಾಲಾಗಿದ್ದಾರೆ. ಪ್ರತಿ ಹಂತದಲ್ಲೂ ನಷ್ಟ ಅನುಭವಿಸುತ್ತಿರುವ ರೈತರು ಆತ್ಮಹತ್ಯೆ ಹಾದಿ ತುಳಿಯುವಂತ್ತಾಗಿದೆ ಎಂದು ದೂರಿದರು.

ಕೆಲಸಕ್ಕೆ ಬಾರದ ವಿಷಯಗಳನ್ನು ಕೆದಕುತ್ತ ಜನಪ್ರತಿನಿಧಿಗಳು ಕಾಲ ಹರಣ ಮಾಡುವುದು ಸರಿಯಲ್ಲ. ಸರಕಾರದ ಮೇಲೆ ಒತ್ತಡ ತಂದು ರೈತರ ನೆರವಿಗೆ ಬರಬೇಕು. ಶೇಂಗಾ, ಜೋಳ, ಸಜ್ಜಿ ಮತ್ತು ಭತ್ತವನ್ನು ಬೆಂಬಲ ಬೆಲೆಯಡಿ ಖರೀದಿಸುವ ವ್ಯವಸ್ಥೆ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ರೈತರು ಅನಿವಾರ್ಯವಾಗಿ ಆತ್ಮಹತ್ಯೆ ಹಾದಿ ಹಿಡಿಯಬೇಕಾಗುತ್ತದೆ. ಇದಕ್ಕೆ ಸರಕಾರ ನೇರ ಹೊಣೆ ಎಂದು ಎಚ್ಚರಿಸಿದರು.

ಶಿರಸ್ತೇದಾರ್‌ ಮಲ್ಯಯ್ಯ ದಂಡು ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಲ್ಲಯ್ಯ ಕಮತಗಿ, ಸಾಹೇಬಗೌಡ ಮದಲಿಂಗನಾಳ, ರಾಘು ಕುಪಗಲ್‌, ಹನುಮಗೌಡ ನಾರಾಯಣಪುರ, ನಾಗಪ್ಪ ಕುಪಗಲ್‌, ಶರಣು ಮೇಟಿ, ವೆಂಕಟೇಶ ಕುಪಗಲ್‌ ಇತರರಿದ್ದರು.

ಟಾಪ್ ನ್ಯೂಸ್

3school

ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ

ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು

ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು

cm-b-bommai

ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ

2temple

ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18deamnd

ನಕಲಿ ಮದ್ಯ ಮಾರಾಟ ತಡೆಗೆ ಆಗ್ರಹ

17water

ಶುದ್ದ ಕುಡಿಯುವ ನೀರಿಗಾಗಿ ಪರದಾಟ!

16theft

ವಂಚಕ ದಂಪತಿ ಬಂಧನ-ಹಣ ಜಪ್ತಿ

ರೈಲೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

ರೈಲೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

13arrest

ನಕಲಿ ಮದ್ಯ ಸಂಗ್ರಹ ಘಟಕದ ಮೇಲೆ ದಾಳಿ

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

3school

ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ

ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು

ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು

cm-b-bommai

ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ

2temple

ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.