ರೋಗ ತಡೆಗೆ ಜನರ ಸಹಭಾಗಿತ್ವ ಅಗತ್ಯ

Team Udayavani, Jun 2, 2020, 4:15 PM IST

ರೋಗ ತಡೆಗೆ ಜನರ ಸಹಭಾಗಿತ್ವ ಅಗತ್ಯ

ಸುರಪುರ: ಕೋವಿಡ್ ಮಹಾಮಾರಿ ತಡೆಗಟ್ಟಲು ಅಧಿಕಾರಿಗಳಷ್ಟೆ ಶ್ರಮಿಸಿದರೆ ಸಾಲದು. ಇದಕ್ಕೆ ಸಮುದಾಗಳ ಸಹಭಾಗಿತ್ವ ಅಗತ್ಯ ವಾಗಿದೆ. ಕೋವಿಡ್ ವಾರಿಯರ್ಸ್ ಗೆ ಪ್ರತಿಯೊಬ್ಬರು ಸಂಪೂರ್ಣ ಸಹಕಾರ ನೀಡಬೇಕು. ಅಂದಾಗಲೆ ನಾವು ಕೋವಿಡ್ ವಿರುದ್ಧ ಜಯಸಾಧಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಹೇಳಿದರು.

ನಗರದ ಕುಂಬಾರಪೇಟೆಯಲ್ಲಿರುವ ಪ್ರೇರಣಾ ಶಾಲೆಯಲ್ಲಿ ಸೋಮವಾರ ಕೊರೊನಾ ವಾರಿರ್ಯರ್ಗೆ ಹಮ್ಮಿಕೊಂಡಿದ್ದ ಆರೋಗ್ಯ ಸೇತು ಕ್ವಾರಂಟೈನ್‌ ಮೊಬೈಲ್‌ ಆ್ಯಪ್‌ ಶಿಬಿರದಲ್ಲಿ ಅವರು ಮಾತನಾಡಿದರು. ಹಸಿರು ವಲಯವಿದ್ದ ಜಿಲ್ಲೆ ಈಗ ರಾಜ್ಯದಲ್ಲಿಯೇ ಮೊದಲ ಸ್ಥಾನಕ್ಕೆ ತಲುಪುತ್ತಿರುವುದು ಆತಂಕಕಾರಿ ಬೆಳವಣಿಗೆ. ಎಲ್ಲರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಹೊರರಾಜ್ಯಗಳಿಂದ ಬರುವ ಪ್ರತಿಯೊಬ್ಬರ ಮೇಲೂ ಹದ್ದಿನ ಕಣ್ಣಿಡಬೇಕು. ಮುಲಾಜಿಲ್ಲದೆ ಕ್ವಾರಂಟೈನ್‌ ಮಾಡಿಸಬೇಕು ಎಂದು ಹೇಳಿದರು.

ಕ್ವಾರಂಟೈನ್‌ನಲ್ಲಿ ಇರುವವರಿಗೆ ಮೂಲಸೌಲಭ್ಯ ಒದಗಿಸಲಾಗುತ್ತಿದೆ. 22 ತಂಡ ರಚಿಸಿ 16 ಸಾವಿರ ಜನರಗಂಟಲು ದ್ರಾವಣ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗುತ್ತಿದೆ. ನಮ್ಮಲ್ಲಿ ಪರೀಕ್ಷೆ ವ್ಯವಸ್ಥೆ ಇಲ್ಲದೆ ಇರುವುದರಿಂದ ವರದಿ ಬರುವಲ್ಲಿ ವಿಳಂಬವಾಗುತ್ತಿದೆ. 14 ದಿನ ಕ್ವಾರಂಟೈನ್‌ ಮುಗಿದ ಬಳಿಕವು ಮನೆಯಲ್ಲಿ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ಹೇಳಿದರು.

ಶಾಸಕ ನರಸಿಂಹನಾಯಕ (ರಾಜೂಗೌಡ) ಮಾತನಾಡಿ ಗಡಿಯಲ್ಲಿ ಸೈನಿಕರು ಕಾರ್ಯನಿರ್ವಹಿ ಸುವಂತೆ ತಾಲೂಕಿನ ಅಧಿಕಾರಿಗಳು ಕಾರ್ಯನಿರ್ವಹಿಸಿದ್ದಾರೆ. ಜೀವನದ ಹಂಗು ತೊರೆದು ಹೋರಾಟ ಮಾಡಿದರ ಫಲವಾಗಿ ಶೇ. 80ರಷ್ಟು ಯಶಸ್ವಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ಆಯುಷ್‌ ಆರೋಗ್ಯ ಇಲಾಖೆಯಿಂದ ರೋಗ ನಿರೋಧಕ ಹೆಚ್ಚಿಸುವ ಔಷಧವನ್ನು ಕೋವಿಡ್ ವಾರಿಯರ್ಸ್ ವಿತರಿಸಲಾಯಿತು. ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್‌ ಮಾತನಾಡಿದರು. ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನಾವಣೆ, ಡಿವೈಎಸ್‌ಪಿ ವೆಂಕಟೇಶ ಉಗಿಬಂಡಿ, ತಹಶೀಲ್ದಾರ್‌ ನಿಂಗಣ್ಣ ಬಿರಾದಾರ, ತಾಲೂಕು ಆರೋಗ್ಯ ಅಧಿಕಾರಿ ಡಾ| ಆರ್‌.ವಿ. ನಾಯಕ, ಆಯುಷ್‌ ಜಿಲ್ಲಾಧಿಕಾರಿ ಪ್ರಕಾಶ ಆಶಾಪುರ, ಜಿಪಂ ಸದಸ್ಯ ಮರಿಲಿಂಗಪ್ಪ ಕರ್ನಾಳ, ದೊಡ್ಡದೇಸಾಯಿ ದೇವರಗೋನಾಲ, ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒ ಸೇರಿದಂತೆ ಕೊರೋನಾ ವಾರಿಯರ್ ಇದ್ದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.