ವೈಯಕ್ತಿಕ ಶೌಚಾಲಯ ಬಳಕೆ ಕಡ್ಡಾಯ

Team Udayavani, Oct 26, 2018, 10:26 AM IST

gul-4.jpg

ಯಾದಗಿರಿ: ಸಾಮಾನ್ಯವಾಗಿ ಯಾವುದೇ ಕೆಲಸ ಮಾಡಲು ಕೈ ಉಪಯೋಗ ಆಗುತ್ತವೆ. ಆದ್ದರಿಂದ ಊಟ, ಹಣ್ಣು ಸೇರಿದಂತೆ ಯಾವುದೇ ಪದಾರ್ಥ ಸೇವಿಸುವ ಮೊದಲು ಕೈ ತೊಳೆಯಬೇಕು. ಇದರಿಂದ ಉತ್ತಮ ಆರೋಗ್ಯ ಲಭಿಸುತ್ತದೆ ಎಂದು ಜಿಪಂ ಸಿಇಒ ಕವಿತಾ ಎಸ್‌. ಮನ್ನಿಕೇರಿ ಹೇಳಿದರು.

ಭೀಮಾನದಿ ತೀರದ ಪುಷ್ಕರ ಉತ್ಸವ ಸ್ಥಳದಲ್ಲಿ ಗುರುವಾರ ಜಿಲ್ಲಾ ಪಂಚಾಯತ್‌ ವತಿಯಿಂದ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ಏರ್ಪಡಿಸಿದ್ದ ವಿಶ್ವ ಕೈ ತೊಳೆಯುವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದಿನ ಮಕ್ಕಳು ನಮ್ಮ ದೇಶದ ಮುಂದಿನ ಭವಿಷ್ಯವಾಗಿದ್ದಾರೆ. ಹಾಗಾಗಿ, ವಿದ್ಯಾರ್ಥಿಗಳು ಕೈ ತೊಳೆಯುವುದನ್ನು ಹಾಸ್ಯದ ರೂಪದಲ್ಲಿ ತೆಗೆದುಕೊಳ್ಳದೇ ಗಂಭೀರವಾಗಿ ತೆಗೆದುಕೊಂಡು ತಮ್ಮ ಕುಟುಂಬದವರಿಗೂ ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.

ಕೈ ತೊಳೆಯುವ ವಿಧಾನ ಕುಟುಂಬದವರಿಗೆ, ಅಕ್ಕ ಪಕ್ಕದ ಮನೆಯವರಿಗೆ ಹಾಗೂ ತಮ್ಮ ಗ್ರಾಮಗಳ ಸಾರ್ವಜನಿಕರಿಗೆ ತಿಳಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ವೈಯಕ್ತಿಕ ಶೌಚಾಲಯ ಬಳಸಬೇಕು ಎಂದು ಸಲಹೆ ನೀಡಿದ ಅವರು, ಕಾರ್ಯಕ್ರಮ ಆಯೋಜಿಸಲು ವೇದಿಕೆ ಕಲ್ಪಿಸಿದ ಭೀಮಾ ಪುಷ್ಕರ ಸೇವಾ ಸಮಿತಿಗೆ ಕೃತಜ್ಞತೆ ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿಶನ್‌ ರಾಠೊಡ ಮಾತನಾಡಿ, ಮನೆಯಲ್ಲಿ ಶೌಚಕ್ಕೆ ಹೋಗಿ ಬಂದ ಮಗುವನ್ನು ಶುಚಿಗೊಳಿಸುವ ಮಹಿಳೆಯರು ಸಾಬೂನಿನಿಂದ ಕೈ ತೊಳೆಯುವುದಿಲ್ಲ. ನಂತರ ಅದೇ ಕೈಗಳಿಂದ ಅಡುಗೆ ಸಿದ್ಧಪಡಿಸುವುದರಿಂದ ಆಹಾರದಲ್ಲಿ ಕೀಟಾಣು ಸೇರಿಕೊಂಡು ತಮಗಷ್ಟೇ ಅಲ್ಲದೆ, ಕುಟುಂಬದವರಿಗೂ ಕಾಯಿಲೆ ಹರಡುವ ಸಂಭವ ಇರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು. ಮನೆ ಸುತ್ತಮುತ್ತ ಎಲ್ಲೆಂದರಲ್ಲಿ ಶೌಚ ಮಾಡುವುದರಿಂದ ಪ್ರಾಣಿ, ಪಕ್ಷಿ, ಕೀಟಗಳಿಂದ ಆ ಶೌಚ ಮನೆಯ ಆಹಾರಗಳನ್ನು ಸೇರಿಕೊಳ್ಳುತ್ತದೆ. ಆದ್ದರಿಂದ ಎಲ್ಲರೂ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಬಳಸಬೇಕು ಎಂದು ಸಲಹೆ ನೀಡಿದರು.

ಸ್ವತ್ಛ ಭಾರತ ಮಿಷನ್‌ ಜಿಲ್ಲಾ ವ್ಯವಸ್ಥಾಪಕ ಪ್ರಶಾಂತ ಪ್ರಾಸ್ತಾವಿಕವಾಗಿ ಮಾತನಾಡಿ, ಸರಿಯಾಗಿ ಕೈ ತೊಳೆಯದೆ ಇರುವುದರಿಂದ ಆಹಾರ ಸೇವನೆಯ ಸಂದರ್ಭದಲ್ಲಿ ಕೀಟಾಣುಗಳು ದೇಹ ಸೇರುತ್ತವೆ. ಇದರಿಂದ ಅತಿಸಾರ, ಭೇದಿ, ಅಪೌಷ್ಟಿಕತೆ ಉಂಟಾಗುತ್ತದೆ. ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು 2008 ರಿಂದ ಪ್ರತಿವರ್ಷ ಅಕ್ಟೋಬರ್‌ 15ರಂದು ವಿಶ್ವ ಕೈ ತೊಳೆಯುವ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿಪಾಟೀಲ ಅನಪುರ ಕೈ ತೊಳೆದುಕೊಳ್ಳುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಲಿಕಾ ಸಂಸ್ಥೆಯ ಧನಲಕ್ಷ್ಮೀ ಮತ್ತು ರೇಖಾ ಅವರು ಸಮಾರಂಭದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಕೈ ತೊಳೆಯುವ ವಿಧಾನ ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಚಂದ್ರಕಲಾ ಶರಣಗೌಡ ಹೊಸಮನಿ, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ವಸಂತರಾವ್‌ ವಿ. ಕುಲಕರ್ಣಿ, ಭೀಮಾ ಪುಷ್ಕರ ಸೇವಾ ಸಮಿತಿ ಅಧ್ಯಕ್ಷ ಲೀಲಾಕೃಷ್ಣ ಹಾಗೂ ಜಿಪಂ ಸದಸ್ಯರು ಇದ್ದರು.

ಕಾರ್ಯಕ್ರಮದಲ್ಲಿ ಸ್ವತ್ಛ ಭಾರತ ಮಿಷನ್‌ ಸಮಾಲೋಚಕ ವೆಂಕಟೇಶ ಪವಾರ್‌, ಮಹೇಶಕುಮಾರ, ಮಹಾದೇವರೆಡ್ಡಿ, ಶಿವಕುಮಾರ, ನಾರಾಯಣ ಸೇರಿದಂತೆ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಆರ್‌.ವಿ. ಶಾಲೆ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಅಮರಯ್ಯ ಸ್ವಾಮಿ ಜಾಲಿಬೆಂಚಿ ನಿರೂಪಿಸಿದರು. 

ಸಮಾರಂಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಬಾಲ್ಯ ವಿವಾಹ ತಡೆಗಟ್ಟುವಿಕೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಸ್ವತ್ಛ ಭಾರತ ಅಭಿಯಾನ, ಮಕ್ಕಳ ಸಹಾಯವಾಣಿ-1098 ಕುರಿತ ಕರಪತ್ರ ವಿತರಿಸಲಾಯಿತು.

ಸರ್ಕಾರಿ ಕಚೇರಿ ಮತ್ತು ಶಾಲಾ ಕಾಲೇಜುಗಳ ಶೌಚಾಲಯದಲ್ಲಿ ಕೈ ತೊಳೆಯಲು ಸಾಬೂನು ವ್ಯವಸ್ಥೆ ಮಾಡಬೇಕು. ಶುಚಿತ್ವ ಜಾಗೃತಿ ಕಾರ್ಯಕ್ರಮ ಕೇವಲ ಹೆಸರಿಗಾಗಿ ಆಯೋಜಿಸಿದಂತೆ ಆಗಬಾರದು, ಜಿಲ್ಲಾದ್ಯಂತ ಬದಲಾವಣೆಗೆ ನಾಂದಿಯಾಗಬೇಕು.
ಕಿಶನ ರಾಠೊಡ, ಜಿಪಂ ಸದಸ

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.