ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ತಯಾರಿ ಜೋರು


Team Udayavani, Aug 7, 2022, 5:08 PM IST

10-tirang

ಸುರಪುರ: ಆ. 13ರಿಂದ 15ರವರೆಗೆ ಸಾರ್ವಜನಿಕರು ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಗಲು-ರಾತ್ರಿ ಹಾರಿಸಬೇಕು. ಹಬ್ಬದ ವಾತಾವರಣ ನಿರ್ಮಾಣ ಮಾಡುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ರಾಜುಗೌಡ ಹೇಳಿದರು.

ಇಲ್ಲಿಯ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ಹರ್‌ ಘರ್‌ ತಿರಂಗಾ ಅಭಿಯಾನದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಆ. 13ರಂದು ಬೆಳಗ್ಗೆ 10ಕ್ಕೆ ಶ್ರೀಮಹರ್ಷಿ ವಾಲ್ಮೀಕಿ ವೃತ್ತದಿಂದ ಅರಮನೆ ಮಾರ್ಗವಾಗಿ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದವರೆಗೆ, 14ರಂದು ಹುಣಸಗಿಯಲ್ಲಿ ಬೆಳಗ್ಗೆ 10ಕ್ಕೆ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಭಾರತ ಮಾತೆ ಸ್ತಬ್ಧ ಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಸುರಪುರದಲ್ಲಿ ಭಾರತ ಮಾತೆ ಜೊತೆಗೆ ವೀರ ಸೇನಾನಿ ರಾಜಾ ನಾಲ್ವಡಿ ವೆಂಕಟಪ್ಪನಾಯಕರ ಸ್ತಬ್ಧಚಿತ್ರದ ಮೆರವಣಿಗೆ ಆಯೋಜಿಸಲಾಗಿದೆ. ತಿರಂಗಾ ಧ್ವಜಯೊಂದಿಗೆ ಅದ್ಧೂರಿ ಮೆರವಣಿಗೆ ಜರುಗಲಿದೆ ಎಂದರು.

ನಗರದ ಎಲ್ಲ ರಸ್ತೆಗಳ ಸ್ವತ್ಛತೆಗೆ ಆದ್ಯತೆ ನೀಡಬೇಕು. ಮಾಜಿ ಸೈನಿಕರನ್ನು ಆಹ್ವಾನಿಸಿ ಗೌರವಿಸಬೇಕು. ಸರಕಾರಿ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತರು, ವಿವಿಧ ಸಂಘಟನೆಯವರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಪಕ್ಷಗಳ ಮುಖಂಡರು ಪಕ್ಷಾತೀತವಾಗಿ ಭಾಗವಹಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಆ. 13ರಂದು ಬೆಳಗ್ಗೆ 11ಕ್ಕೆ ಸುರಪುರದ ಗಾಂಧಿ ವೃತ್ತದಲ್ಲಿ ಮಹಾತ್ಮ ಗಾಂಧೀಜಿಯವರ ಕಂಚಿನ ಪುತ್ಥಳಿ ಉದ್ಘಾಟನೆ ನಡೆಯಲಿದೆ ಎಂದರು. ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಮಾತನಾಡಿ, ತಾಲೂಕಿನಲ್ಲಿ 30 ಸಾವಿರ ಧ್ವಜಾರೋಹಣ ಗುರಿ ಹೊಂದಲಾಗಿದ್ದು, ಐದು ಸಾವಿರ ಧ್ವಜಗಳು ಕಚೇರಿಗೆ ಬಂದಿವೆ. ಅಭಿಯಾನವನ್ನು ಅರ್ಥ ಪೂರ್ಣವಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ತಾಪಂ ಇಒ ಚಂದ್ರಶೇಖರ ಪವ್ಹಾರ್‌ ವೇದಿಕೆಯಲ್ಲಿದ್ದರು. ಬಿಇಒ ಸೀಬಾ ಜಲಿಯನ್‌ ಸೈಲಸ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಆರ್‌.ವಿ. ನಾಯಕ ಸಲಹೆ ನೀಡಿದರು. ಬಳಿಕ ಶಾಸಕರು ಸಾರ್ವಜನಿಕರಿಗೆ ಧ್ವಜಗಳನ್ನು ವಿತರಿಸಿದರು. ಎಲ್ಲ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂರ್ತಿ ಪ್ರತಿಷ್ಠಾಪನೆ: 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ದಕ್ಷಿಣ ಭಾರತದ ನೇತೃತ್ವ ವಹಿಸಿದ್ದ ರಾಜಾ ನಾಲ್ವಡಿ ವೆಂಕಟಪ್ಪನಾಯಕರ ಪಂಚ ಲೋಹದ ಪುತ್ಥಳಿಯನ್ನು ನಾರಾಯಣಪುರ ಬಸವಸಾಗರ ಜಲಾಶಯದ ಮುಂದೆ ಸ್ಥಾಪಿಸಲು ನಿರ್ಧರಿಸಿದ್ದು, ಇದಕ್ಕೆ ಸರಕಾರ ಅನುಮೋದನೆ ನೀಡಿದೆ. ಶೀಘ್ರ ಪುತ್ಥಳಿ ಪ್ರತಿಷ್ಠಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಜೂಗೌಡ ತಿಳಿಸಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.