Udayavni Special

ಗಿರಿನಾಡ ದಸರಾಕ್ಕೆ ಸಿದ್ಧತೆ ಜೋರು

ಪ್ರತಿದಿನ ಬೆಳಗೆ 8ಕ್ಕೆ ಸಂಜೆ 7ಕ್ಕೆ ಅಂಬಾ ಭವಾನಿ ಮೂರ್ತಿಗೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದ್ದು

Team Udayavani, Oct 5, 2021, 6:03 PM IST

ಗಿರಿನಾಡ ದಸರಾಕ್ಕೆ ಸಿದ್ಧತೆ ಜೋರು

ಯಾದಗಿರಿ: ಗಿರಿನಾಡ ದಸರಾಕ್ಕೆ ನಗರದಲ್ಲಿ ಹಲವು ಪ್ರದೇಶಗಳಲ್ಲಿ ಅದ್ಧೂರಿ ಸಿದ್ಧತೆ ನಡೆಯುತ್ತಿದೆ. ನಗರದ ಭವಾನಿ ಮಂದಿರದ ಬಳಿ ಸೇರಿದಂತೆ ವಿವಿಧೆಡೆ ಪ್ರತಿಷ್ಠಾಪಿಸಲಾಗುವ ಭವಾನಿ ಮೂರ್ತಿಗಳಿಗೆ ಯಾದಗಿರಿ ಬಳಿಯ ಭೀಮಾ ನದಿಯಲ್ಲಿ ಗಂಗಾಸ್ನಾನದ ಮುಖಾಂತರ ಪ್ರತಿಷ್ಠಾಪನಾ ಸ್ಥಳದವರೆಗೆ ಭವ್ಯ ಮೆರವಣಿಗೆ ಮೂಲಕ ತೆರಳಲಾಗುತ್ತದೆ. ಮಹಾನವಮಿಯಂದು ಸಂಜೆ 7ಗಂಟೆಗೆ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಪ್ರತಿದಿನ ಬೆಳಗೆ 8ಕ್ಕೆ ಸಂಜೆ 7ಕ್ಕೆ ಅಂಬಾ ಭವಾನಿ ಮೂರ್ತಿಗೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ರಾತ್ರಿ ವಿಜೃಂಭಣೆಯ ಯುವಕ, ಯುವತಿಯರ ದಾಂಡಿಯಾ ಕಾರ್ಯಕ್ರಮ ನಡೆಯುತ್ತದೆ. ದಸರಾ ಸಿದ್ಧತೆಗಾಗಿ ನಗರದ ಶಾಸ್ತ್ರಿ ವೃತ್ತದಿಂದ ರೈಲು ನಿಲ್ದಾಣದವರೆಗೆ ಹಾಗೂ ದೇವಸ್ಥಾನದವರೆಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗುತ್ತಿದೆ. ದೇವಿಯನ್ನು ಪ್ರತಿಷ್ಠಾಪಿಸುವ ಮಂಟಪವನ್ನೂ ಸಿದ್ಧಗೊಳಿಸಲಾಗಿದೆ.

3 ದಶಕಗಳ ಹಿನ್ನೆಲೆ: ನಗರದ ಸ್ಟೇಷನ್‌ ಏರಿಯಾದ ಶಿವನಗರದಲ್ಲಿ ಕಳೆದ ಮೂರು ದಶಕಗಳಿಂದ ಸರ್ಕಾರದ ನೆರವಿಲ್ಲದೆ ಗಿರಿನಾಡ ದಸರಾ ಹಬ್ಬ ಆಚರಿಸಲಾಗುತ್ತಿದ್ದು, ಈಗ ಭರ್ಜರಿ ಸಿದ್ಧತೆ ನಡೆದಿದೆ. ಆರಂಭದಲ್ಲಿ ಕೆಲವರು ಸೇರಿ ಆರಂಭಿಸಿದ ಉತ್ಸವವನ್ನು ಈಗ ದೊಡ್ಡ ಮಟ್ಟದಲ್ಲಿ ನಡೆಸಲಾಗುತ್ತಿದೆ. ಹಿಂದೂ ಸೇವಾ ಸಮಿತಿ ದಸರಾ ಆಯೋಜಿಸುತ್ತಿದ್ದು, ನಗರದಲ್ಲಿ ಸಂಭ್ರಮದ ತಯಾರಿ ನಡೆದಿದೆ.

ದಾಂಡಿಯಾ ದಸರಾದ ಪ್ರಮುಖ ಆಕರ್ಷಣೆ: ಈ ದಸರಾದಲ್ಲಿ ಪ್ರಮುಖವಾಗಿ ಆಕರ್ಷಣೆ ಮಾಡುವಂತದ್ದು, ದಾಂಡಿಯಾ ನೃತ್ಯ. ದೇವಿ ಪ್ರತಿಷ್ಠಾಪಿಸಿದ ದಿನದಿಂದ 9 ದಿನಗಳ ಕಾಲ ರಾತ್ರಿ 9 ಗಂಟೆಯಿಂದ 12ರ ತನಕ ದಾಂಡಿಯಾ ನೃತ್ಯ ಮನಮೋಹಕವಾಗಿ ನಡೆಸಲಾಗುತ್ತಿದೆ. ಇದನ್ನು ನೋಡಲು ಜನರು ಕಿಕ್ಕಿರಿದು ತುಂಬಿರುತ್ತಾರೆ.

ಪ್ರತಿದಿನವೂ ಒಂದೊಂದು ಕಾರ್ಯಕ್ರಮ ಮಾಡಲಾಗುತ್ತದೆ. 7 ದಿನ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗುತ್ತದೆ. ಅಲ್ಲದೆ ಕ್ರಿಕೆಟ್‌ ಕೂಡ ಹಮ್ಮಿಕೊಳ್ಳಲಾಗುತ್ತದೆ. ಕೋಲಾಟ ಸ್ಪರ್ಧೆ ನಡೆಯುತ್ತದೆ. ಆಯುಧ ಪೂಜೆ ದಿನ ಧರ್ಮಸಭೆ ಆಯೋಜಿಸಲಾಗುತ್ತದೆ. ಈ ಧರ್ಮಸಭೆಯಲ್ಲಿ ಸ್ವಾಮಿಗಳು ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದು, ಕಡೆಯ ಎರಡು ದಿನ ವಿಜೃಂಭವಣೆಯ ದಸರಾ ಹಬ್ಬ ಜರುಗಲಿದೆ.

ಟಾಪ್ ನ್ಯೂಸ್

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadagiri news

ಕಾಲುವೆಗೆ ನೀರು ಹರಿಸಿ ಪುಣ್ಯ ಕಟ್ಟಿಕೊಳ್ಳಿ

26

ಪ್ರಶಸ್ತಿಯಿಂದ ಸಾಧಕನ ಜವಾಬ್ದಾರಿ ವೃದ್ದಿ

27

ದೇವಿಕೇರಾದಲ್ಲಿ ನ್ಯಾಯ ನಿಮ್ಮದು, ನೆರವು ನಮ್ಮದು

yadagiri news

ಮಧ್ಯವರ್ತಿಗಳಿಂದ ಮೋಸ ಹೋಗದಿರಿ

16

ಬಂಧಿತ ಕಳ್ಳನಿಂದ 7 ಬೈಕ್‌ಗಳ ಜಪ್ತಿ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ವೇಗಿ ಜೇಮ್ಸ್‌ ಪ್ಯಾಟಿನ್ಸನ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ

ಆಸ್ಟ್ರೇಲಿಯದ ವೇಗಿ ಜೇಮ್ಸ್‌ ಪ್ಯಾಟಿನ್ಸನ್‌ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.