ಅಕ್ರಮ ಮರಳು ಸಾಗಾಣಿಕೆ ತಡೆಯಿರಿ

Team Udayavani, Jun 11, 2019, 10:26 AM IST

yg-tdy-1..

ಶಹಾಪುರ: ಹತ್ತಿಗೂಡೂರ ಗ್ರಾಮದ ಅಂಬೇಡ್ಕರ್‌ ವೃತ್ತದಲ್ಲಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದವು.

ಶಹಾಪುರ: ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಣಿಕೆ ನಡೆದಿದ್ದು, ಅಕ್ರಮ ಮರಳು ಸಾಗಾಣಿಕೆ ಭರದಲ್ಲಿ ಚಾಲಕರು ಟಿಪ್ಪರ್‌ನ್ನು ಬೇಕಾಬಿಟ್ಟಿಯಾಗಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರು ಮತ್ತು ಬೈಕ್‌ ಸವಾರರು ಪ್ರಾಣ ಭಯದಿಂದಲೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಸತ್ಯಂಪೇಟೆ ಆಕ್ರೋಶ ವ್ಯಕ್ತಪಡಿಸಿದರು.

ಅಕ್ರಮ ಮರಳು ಸಾಗಾಣಿಕೆ ತಡೆ ಮತ್ತು ರವಿವಾರ ನಡೆದ ಅಪ‌ಘಾತ ಘಟನೆ ಖಂಡಿಸಿ ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಹಾಗೂ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ತಾಲೂಕಿನ ಹತ್ತಿಗೂಡೂರ ಗ್ರಾಮದಲ್ಲಿ ರವಿವಾರ ಮರಳು ತುಂಬಿದ ಟಿಪ್ಪರವೊಂದು ವೇಗದಿಂದ ಬಂದು ಬೈಕ್‌ ಸವಾರನೋರ್ವನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಅಮಾಯಕ ರೈತ ಕನ್ಯಾಕೋಳೂರ ಗ್ರಾಮದ ಮಡಿವಾಳಪ್ಪ ಎಂಬುವರು ಅಸುನೀಗಿದರು.

ಮರಳು ವಾಹನ ಒಂದೇ ರಾಯಲ್ಟಿ ಪಡೆದು ಹಲವು ಟ್ರಿಪ್‌ ಮರಳನ್ನು ಸಾಗಿಸುತ್ತಿದ್ದು, ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದಾರೆ. ಶನಿವಾರ ರಾತ್ರಿಯೇ ನಮ್ಮ ಕಾರ್ಯಕರ್ತರು ಅಕ್ರಮವಾಗಿ ಮರಳು ತುಂಬಿದ ಹಲವು ಟಿಪ್ಪರಗಳನ್ನು ತಡೆ ಹಿಡಿದು ಪೊಲೀಸ್‌ ಠಾಣೆಗೆ ಕರೆ ಮಾಡಿದರೂ ಯಾರೊಬ್ಬ ಅಧಿಕಾರಿಗಳು ಸ್ಪಂದನೆ ನೀಡದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಕಾರಣ ಕೂಡಲೇ ಪೊಲೀಸ್‌ ಅಧಿಕಾರಿಗಳು ಮರಳು ಟಿಪ್ಪರ್‌ ಮಾಲೀಕರು ಮತ್ತು ಚಾಲಕರನ್ನು ಕರೆದು ಸಭೆ ನಡೆಸುವ ಮೂಲಕ ಎಚ್ಚರಿಕೆ ನೀಡಬೇಕು. ಕೂಡಲೇ ಹತ್ತಿಗೂಡೂರ ಗ್ರಾಮದ ಬಳಿ ಇರುವ ಪೊಲೀಸ್‌ ಚೆಕ್‌ ಪೋಸ್ಟ್‌ ನಿಯಮನುಸಾರ ಕರ್ತವ್ಯ ನಿಭಾಯಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್‌ ಚಂದ್ರಕಾಂತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ದಲಿತ ಮುಖಂಡ ಶರಣರಡ್ಡಿ ಹತ್ತಿಗೂಡೂರ, ಭೀಮಣ್ಣ ಮಾಲಿಪಾಟೀಲ, ಸಾಯಬಣ್ಣ ಪೂಜಾರಿ ಕನ್ಯಾಕೋಳೂರ, ಸುರೇಶ ಬಾಬು ಹೊಸ್ಮನಿ, ರಂಗನಾಥ ಬಾಗಲಿ, ನಾಗಪ್ಪ ಘಂಟಿ, ಹಣಮಂತ ನಾಟೇಕಾರ, ಬಸವರಾಜ, ಮಲಕಣ್ಣ ಸೇರಿದಂತೆ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.