ಪ್ರಧಾನಿ ಮೋದಿ ಸಾಧನೆ ಶೂನ್ಯ

Team Udayavani, Jan 28, 2019, 11:37 AM IST

yad-1.jpg

ಗುರುಮಠಕಲ್‌: ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ಒದಗಿಸಲಾಗುತ್ತದೆ. ಅಲ್ಲದೆ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ರೂ ಜಮಾ ಮಾಡಲಾಗುವುದು ಎಂದು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಯಾವುದನ್ನೂ ಅನುಷ್ಠಾನ ಮಾಡಿಲ್ಲ ಎಂದು ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

ಪಟ್ಟಣದ ಎಪಿಎಂಸಿ ಮೈದಾನದಲ್ಲಿ ನಡೆದ ಗುರುಮಠಕಲ್‌ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ಪಕ್ಷ ಏನೂ ಮಾಡಿಲ್ಲ ಎಂದು ಆರೋಪಿಸುವ ಮೊದಲು ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕಾಂಗ್ರೆಸ್‌ ಪಕ್ಷ ಅಭಿವೃದ್ಧಿ ಮಾಡದಿದ್ದಲ್ಲಿ ದೇಶದಲ್ಲಿ ನೀರಾವರಿ ಕ್ರಾಂತಿ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ್ದು ಯಾರು ಎಂದು ಪ್ರಶ್ನಿಸಿದರು.

ನಾನು ಮೋದಿ ಮತ್ತು ಇನ್ನಾರನ್ನು ತೆಗಳಿ ಅಧಿಕಾರಕ್ಕೆ ಬರುವ ಉದ್ದೇಶ ನನ್ನದಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ಮತ್ತು ಪ್ರೀತಿಯಿದ ಅಧಿಕಾರಕ್ಕೆ ಬರಲು ಮನಸ್ಸು ಮಾಡುತ್ತೇನೆ. ಕಳೆದ 48 ವರ್ಷಗಳಿಂದ ನನ್ನ ಮೇಲೆ ತಾವು ಇಟ್ಟ ವಿಶ್ವಾಸದಿಂದ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಎಲ್ಲಿಯವರಿಗೆ ನಿಮ್ಮ ಆಶೀರ್ವಾದ ಇರುತ್ತದೆಯೋ ಅಲ್ಲಿಯವರಿಗೆ ತಮ್ಮ ನಿರೀಕ್ಷೆ ಹುಸಿ ಮಾಡದಂತೆ ಅಧಿಕಾರ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ನಾನು ಈ ಮುಂಚೆಯೇ ಗುರುಮಠಕಲ್‌ ಮತ್ತು ಸೇಡಂ ಕ್ಷೇತ್ರಕ್ಕೆ ಭೇಟಿ ನೀಡಬೇಕಿತ್ತು. ಆದರೆ ಪ್ರಧಾನಿ ನೇತೃತ್ವದಲ್ಲಿ ಪ್ರಮುಖ ಸಭೆಗಳು ಇರುವುದರಿಂದ ಬರಲಾಗಿಲ್ಲ. ನಿಮಗೆ ತೊಂದರೆ ಕೊಡುವ ಉದ್ದೇಶ ನನಗಿಲ್ಲ. ನಾನು ಕಾಂಗ್ರೆಸ್‌ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಆ ಪಕ್ಷಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಭದ್ರಗೊಳಿಸಲು ಕೇಂದ್ರ ಬಿಜೆಪಿ ನಾಯಕರು ಕುಮ್ಮಕ್ಕು ಕೊಡುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಆಪರೇಷನ್‌ ಕಮಲ ನಡೆಯುವುದಿಲ್ಲ. ಸಮ್ಮಿಶ್ರ ಸರಕಾರ ಪೂರ್ಣ ಅವಧಿಯವರಿಗೆ ಅಧಿಕಾರ ನಡೆಸಲಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಚೆನ್ನಾರೆಡ್ಡಿ ತುನ್ನೂರು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ ಹತ್ತಿಕುಣಿ, ಜಿಪಂ ಮಾಜಿ ಅಧ್ಯಕ್ಷ ಬಸರೆಡ್ಡಿ ಮಾಲಿಪಾಟೀಲ ಅನಪುರ, ಸವಿತ ಸಜ್ಜನ, ಮಹಾಂತಪ್ಪ, ಮರಿಗೌಡ, ವಿಶ್ವನಾಥ ನೀಲಹಳ್ಳಿ, ಶರಣಿಕುಮಾರ, ಮಲ್ಲಣ್ಣಗೌಡ, ಚಿದನಂದಪ್ಪ, ಬಸಣ್ಣ ದೇವರಹಳ್ಳಿ, ಬಸಪ್ಪ ಬದ್ದೆಪಲ್ಲಿ, ತಿಪ್ಪಣ್ಣ ಗುಟ್ಟಲ, ರವೀಂದರರೆಡ್ಡಿ ಶೇರಿ, ಅನಂತಪ್ಪ ಯದ್ಲಾಪು ಭಾಗವಹಿಸಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.