ಗ್ರಾಮೀಣ ಆಧಾರಿತ ಉಪ ಕಸುಬುಗಳಿಗೆ ನೀಡಿ ಆದ್ಯತೆ

Team Udayavani, Jun 2, 2018, 4:08 PM IST

Shyam Prasad Shastry.jpg

ಯಾದಗಿರಿ: ಕೇಂದ್ರ ಸರ್ಕಾರದ ಕೃಷಿ ಇಲಾಖೆಯು ಕೃಷಿ ಆದಾಯವನ್ನು 2022ರ ವರೆಗೆ ದ್ವಿಗುಣಗೊಳಿಸುವ ಉದ್ದೇಶದಿಂದ ವಿವಿಧ ರಾಜ್ಯಗಳಲ್ಲಿ ಹಲವಾರು ಕೃಷಿ ಪೂರಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.

ಶಹಾಪುರ ತಾಲೂಕಿನ ಬೆನಕನಾಳ ಜೆ. ಗ್ರಾಮದಲ್ಲಿ ಕಿಸಾನ್‌ ಕಲ್ಯಾಣ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯ 25 ಗ್ರಾಮಗಳಲ್ಲಿ ಕೃಷಿ ಆದಾಯ ದ್ವಿಗುಣಗೊಳಿಸುವ ಉದ್ದೇಶದಿಂದ ಕಿಸಾನ ಕಲ್ಯಾಣ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಕೃಷಿ ಹಾಗೂ ಕೃಷಿಯೇತರ ಗ್ರಾಮೀಣ ಆಧಾರಿತ ಉಪ ಕಸುಬುಗಳಿಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ವಿವಿಧ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು, ಒಟ್ಟು ಕೃಷಿ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿ ದೇಶದ 115 ಹಿಂದುಳಿದ ಜಿಲ್ಲೆಗಳನ್ನು ಮಹತ್ವಾಕಾಂಕ್ಷೆ (ಆಸ್ಪಿರೇಶನಲ್‌) ಜಿಲ್ಲೆಗಳನ್ನಾಗಿ ಆಯ್ಕೆ ಮಾಡಿ ಕಿಸಾನ ಕಲ್ಯಾಣ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳೂ ಈ ಯೋಜನೆಯ ಅನುಷ್ಠಾನಕ್ಕೆ ಆಯ್ಕೆಗೊಂಡಿದ್ದು, ಈ ನಿಟ್ಟಿನಲ್ಲಿ ಜೂನ್‌ 1ರಿಂದ ಜುಲೈ 31ರ ವರೆಗೆ ವಿವಿಧ ಕೃಷಿ ಅಭಿವೃದ್ಧಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಯಾದಗಿರಿ ಜಿಲ್ಲೆಯ 25 ಗ್ರಾಮಗಳಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ, ಬೀಜ ನಿಗಮ ಹಾಗೂ ಇತರೆ ಕೃಷಿ ಆಧಾರಿತ ಇಲಾಖೆಗಳ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ವಿಜ್ಞಾನ ಕೇಂದ್ರವು ಈ ಕಾರ್ಯಕ್ರಮದಲ್ಲಿ ತಾಂತ್ರಿಕ ಮಾಹಿತಿಗಳ ವರ್ಗಾವಣೆ ಹಾಗೂ 25 ಗ್ರಾಮಗಳಲ್ಲಿ ತರಬೇತಿ ಕೈಗೊಳ್ಳಲು ಕಾರ್ಯ ಯೋಜನೆಯನ್ನು ರೂಪಿಸಿದೆ. ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಆದಾಯ ಹೆಚ್ಚಿಸುವ ಉಪ ಕಸುಬುಗಳಾದ ಜೇನು ಸಾಕಾಣಿಕೆ, ಎರೆಹುಳ ಗೊಬ್ಬರ ತಯಾರಿಕೆ, ಅಣಬೆ ಬೇಸಾಯ, ಕೈ ತೋಟ, ಕುರಿ ಸಾಕಾಣಿಕೆ, ಆಡು ಸಾಕಾಣಿಕೆ, ಮೀನು ಸಾಕಾಣಿಕೆ, ಆಹಾರ ಸಂಸ್ಕರಣೆ ಮುಂತಾದವುಗಳ ಬಗ್ಗೆ ತರಬೇತಿ ಮತ್ತು ಮಾಹಿತಿಯನ್ನು ನೀಡಲಾಗುವುದು ಎಂದು ವಿವರಿಸಿದರು.
 
ಪಶುತಜ್ಞ ಡಾ| ಮಹೇಶ, ಸಹಾಯಕ ಕೃಷಿ ನಿರ್ದೇಶಕ ದಾನಪ್ಪ ಕತ್ನಳ್ಳಿ, ಕೃಷಿ ಅಧಿಕಾರಿಗಳು ಹಾಗೂ ಗ್ರಾಮದ ರೈತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.