ಬಾಲ ಮಂದಿರ ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ

Team Udayavani, Nov 16, 2020, 6:36 PM IST

ಬಾಲ ಮಂದಿರ ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ

ಯಾದಗಿರಿ: ಜಿಲ್ಲೆಯಲ್ಲಿ ಬಾಲಕರ ಬಾಲ ಮಂದಿರವನ್ನು ಸ್ಥಾಪಿಸಲು ಮತ್ತು ನವಜಾತಶಿಶುಗಳ ರಕ್ಷಣೆಗಾಗಿ ಶಿಶುಗೃಹವನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಹಾಯವಾಣಿ ಸಲಹಾ ಮಂಡಳಿ ಹಾಗೂ ಮಕ್ಕಳ ರಕ್ಷಣಾ ಘಟಕ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಏಕ ಪೋಷಕರಿರುವ ಮಕ್ಕಳಿಗೆ ಪ್ರತಿ ತಿಂಗಳು ಒಂದು ಸಾವಿರ ರೂ. ಧನ ಸಹಾಯ ನೀಡಲಾಗುತ್ತಿದೆ. ನಿರ್ಗತಿಕರು, ಜೈಲು ಶಿಕ್ಷೆಗೆ ಒಳಗಾಗಿರುವ ಪೋಷಕರ ಮಕ್ಕಳಿಗೂ ಈ ಸೌಲಭ್ಯ ಒದಗಿಸಿ ಅವರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಗಳ ಸುಧಾರಣೆಗೆ ಕ್ರಮವಹಿಸುವಂತೆ ಡಿಸಿ ಸೂಚಿಸಿದರು.

ಬಾಲ್ಯ ವಿವಾಹದ ದುಷ್ಪರಿಣಾಮಗಳು ಹಾಗೂ ಅದನ್ನು ನಿಷೇಧಿ ಸಿ ಸರ್ಕಾರ ಹೊರಡಿಸಿರುವ ಕಾನೂನಿನ ಕುರಿತು ಜಿಲ್ಲೆಯಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿ ಸಿ ಕಾನೂನು ಜಾರಿಗೊಳಿಸಲಾಗಿದೆ. ಅದನ್ನು ಉಲ್ಲಂಘಿಸಿದ್ದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ. ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವವರು ಹಾಗೂ ಬಾಲ್ಯ ವಿವಾಹವನ್ನು ಜರುಗಿಸುವವರ ವಿರುದ್ಧ ಸಂಬಂಧಿಸಿದ ಎಲ್ಲಾ ಇಲಾಖೆಗಳು ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬಾಲ್ಯ ವಿವಾಹ ನಿಷೇಧದ ಕುರಿತು ಗೋಡೆ ಬರಹಗಳು ಸೇರಿದಂತೆ ಸ್ಥಳೀಯ ಪ್ರಚಾರ ಮಾಧ್ಯಮಗಳ ಮೂಲಕ ಎಲ್ಲಾ ಗ್ರಾಮಗಳಲ್ಲಿ ಜಾಗೃತಿ ಮೂಡಿಸಬೇಕು. ಪುರೋಹಿತರು, ಚರ್ಚ್‌ ಪಾದ್ರಿಗಳು ಸೇರಿದಂತೆ ಸಂಬಂಧಿಸಿದವರಿಗೆ ಕಾನೂನಿನ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿ ಕಟ್ಟಡಗಳು, ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳು, ಗ್ರಾಪಂ ಕಟ್ಟಡಗಳು, ತಹಶೀಲ್ದಾರರ ಕಚೇರಿ ಸೇರಿದಂತೆ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕುರಿತು ಪ್ರಚಾರ ಕಾರ್ಯ ಕೈಗೊಳ್ಳಬೇಕು. ಯಾವುದೇ ಮಗು ಸಮಸ್ಯೆಗೆ ಸಿಲುಕಿಕೊಂಡಿದ್ದಲ್ಲಿ ಉಚಿತ ದೂರವಾಣಿ 1098ಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಲು ಸಾಧ್ಯವಾಗಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಉಪ ನಿರ್ದೇಶಕ ಪ್ರಭಾಕರ ಮಾತನಾಡಿ, ಜಿಲ್ಲೆಯಲ್ಲಿ ಎಚ್‌.ಐ.ವಿ ಸೋಂಕಿತ ಅಥವಾ ಬಾಧಿ ತರ 321 ಮಕ್ಕಳಿಗೆ ಸರ್ಕಾರದಿಂದ ಪೌಷ್ಟಿಕ ಆಹಾರ, ಭದ್ರತೆ, ಶಿಕ್ಷಣ ಹಾಗೂ ರಕ್ಷಣೆ ಹಾಗೂ ಅವರ ಆರೈಕೆಗಾಗಿ ಧನ ಸಹಾಯ ನೀಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಈ ಯೋಜನೆ ಕುರಿತು ವ್ಯಾಪಕ ಪ್ರಚಾರ ಕೈಗೊಂಡು ಹೆಚ್ಚಿನ ಅರ್ಜಿ ಪಡೆಯಲಾಗುವುದು ಎಂದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ್‌ ಸೋನಾವಣೆ, ಬಾಲ ನ್ಯಾಯಮಂಡಳಿ ಹಾಗೂ ಮುಖ್ಯ ನ್ಯಾಯಾಂಗ ದಂಡಾಧಿಕಾರಿ ಎನ್‌.ಕೆ. ಸಾಲಿಮಂಟಪಿ, ಡಾನ್‌ ಬಾಸ್ಕೋ ಸಂಸ್ಥೆಯ ಸಮಾಜ ಸೇವಾ ಕೇಂದ್ರದ ನಿರ್ದೇಶಕ ಫಾ. ಪ್ರವೀಣ್‌, ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಪಿಒ, ಸಿಡಿಪಿಒಗಳು ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.