PSI Parashuram Case: ಯಾದಗರಿ ಶಾಸಕ ಚೆನ್ನಾರೆಡ್ಡಿಹಾಗೂ ಪುತ್ರನ ವಿರುದ್ಧ ಎಫ್ಐಆರ್
Team Udayavani, Aug 3, 2024, 2:01 PM IST
ಕಲಬುರಗಿ/ಯಾದಗಿರಿ: ಪಿಎಸ್ಐ ಸಾವಿನಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಸನ್ನಿರೆಡ್ಡಿ ಪಾಟೀಲ ಕೈವಾಡ ಇರುವುದಾಗಿ ಮೃತ ಪಿಎಸ್ಐ ಪತ್ನಿ ದೂರು ನೀಡಿರುವ ಹಿನ್ನಲೆಯಲ್ಲಿ ಶಾಸಕ ಹಾಗೂ ಪುತ್ರ ಸನ್ನಿರೆಡ್ಡಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಸಕ ಹಾಗೂ ಪುತ್ರನ ನಿರಂತರ ಒತ್ತಡದಿಂದ ನನ್ನ ಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಅಲ್ಲದೆ ವರ್ಗಾವಣೆ ಮಾಡಿರುವುದು ಕೂಡ ನಿಯಮಬಾಹಿರ. ನನಗೆ ಅನ್ಯಾಯವಾಗಿದೆ. ಶಾಸಕ ಹಾಗೂ ಅವರ ಪುತ್ರ 30 ಲಕ್ಷ ರೂ ಗಳಿಗೆ ಬೇಡಿಕೆ ಇಟ್ಟಿದ್ದರು. ಕೊಡದೆ ಇದ್ದಾಗ ನನಗೆ ವರ್ಗಾವಣೆ ಮಾಡಿದ್ದಾರೆ ಎಂದು ನನ್ನ ಬಳಿ ಹೇಳಿಕೊಂಡಿದ್ದರು ಎಂದು ದೂರಿನಲ್ಲಿ ಪತ್ನಿ ಶ್ವೇತಾ ಅಪಾದನೆ ಮಾಡಿದ್ದಾರೆ.
ಅಲ್ಲದೆ ನನ್ನ ಪತಿಯ ಸಾವಿಗೆ ನೇರವಾಗಿ ಶಾಸಕರು ಹಾಗೂ ಅವರ ಪುತ್ರ ನೇರ ಕಾರಣ ಎಂದೂ ದೂರಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಸರಕಾರಕ್ಕೆ ಮತ್ತೊಂದು ಕಂಟಕ ಎದುರಾದಂತಾಗಿದೆ.
ಯತ್ನಾಳ್ ಕಿಡಿ
ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ… pic.twitter.com/J7pdcfg0kC
— Basanagouda R Patil (Yatnal) (@BasanagoudaBJP) August 3, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.