ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ
Team Udayavani, Aug 19, 2017, 6:50 AM IST
ಯಾದಗಿರಿ: ತಾಲೂಕಿನ ಗುರುಮಠಕಲ್ ಬಳಿಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆಗೆ ಹಾಗೂ ವಾಡಿ ಬೈಪಾಸ್ ರೈಲ್ವೆ ಮಾರ್ಗ ನಿರ್ಮಾಣಕ್ಕೆ ನವದೆಹಲಿಯ ರೈಲ್ವೆ ಮಂಡಳಿಯಲ್ಲಿ ರಿಮೋಟ್ ಲಿಂಕ್ ಮೂಲಕ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಶುಕ್ರವಾರ ಚಾಲನೆ ನೀಡಿದರು.
ನಂತರ ಮಾತನಾಡಿ, ರಾಜ್ಯದ ರೈಲ್ವೆ ಯೋಜನೆ, ಹಾಗೂ ಅಭಿವೃದ್ಧಿ ಕಾರ್ಯಗಳಿಗಾಗಿ 3,177 ಕೋಟಿ ರೂ. ಅನುದಾನ ನೀಡಲಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ವಾರ್ಷಿಕ 600 ಬೋಗಿ ಫ್ರೇಮ್ ಉತ್ಪಾದನಾ ಸಾಮರ್ಥಯದ ರೈಲ್ವೆ ಬೋಗಿ ಕಾರ್ಖಾನೆ ಆರಂಭವಾಗಲಿದ್ದು, ಜಿಲ್ಲೆಯ ಜನತೆಗೆ ಇದು ಯಾದಗಾರ್ ದಿನವಾಗಲಿದೆ ಎಂದರು.
ಯಾದಗಿರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಬಿ.ವಿ.ನಾಯಕ್ ಮಾತನಾಡಿ, ಡಾ. ಮಲ್ಲಿಕಾರ್ಜುನ ಖರ್ಗೆ ಹಿಂದಿನ ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ಈ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಈಗ ರೈಲ್ವೆ ಬೋಗಿ ಕಾರ್ಖಾನೆ ಉದ್ಘಾಟನೆಗೊಳ್ಳುತ್ತಿರುವುದು ಸಂತಸ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…