ನ್ಯಾಯಾಲಯ ಆದೇಶ ಪಾಲಿಸಿ ಒಳ ಮೀಸಲಾತಿ ಕಲ್ಪಿಸಲು ಒತ್ತಾಯ


Team Udayavani, Sep 15, 2020, 4:10 PM IST

ನ್ಯಾಯಾಲಯ ಆದೇಶ ಪಾಲಿಸಿ ಒಳ ಮೀಸಲಾತಿ ಕಲ್ಪಿಸಲು ಒತ್ತಾಯ

ಯಾದಗಿರಿ: ಪರಿಶಿಷ್ಟ ಜಾತಿಗಳಿಗೆ ಜನಸಂಖ್ಯಾವಾರು ಮೀಸಲಾತಿ ಹಂಚಿಕೆ ಮಾಡಿ ನ್ಯಾ| ಎ.ಜೆ ಸದಾಶಿವ ಆಯೋಗದ ಶಿಫಾರಸುಗಳನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ ಕೇಂದ್ರ ಸರ್ಕಾರಕ್ಕೆಶಿಫಾರಸು ಮಾಡಲು ಒತ್ತಾಯಿಸಿ ಮಾದಿಗ ಯುವ ಸೇನೆ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಸುಭಾಶ್ಚಂದ್ರ ಬೋಸ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮಾದಿಗ ಯುವ ಸೇನೆಯ ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆನಡೆಸಿದರು.

ಮಾದಿಗ ಯುವ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ನಂದಕುಮಾರ ಬಾಂಬೆಕಾರ್‌ ಮಾತನಾಡಿ, ಕಳೆದ ಎರಡೂವರೆ ದಶಕಗಳಿಂದ ಪರಿಶಿಷ್ಟ ಜಾತಿಯಲ್ಲಿನ ಮೀಸಲಾತಿಶೇ.15ರಲ್ಲಿ ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿ ಜಾರಿಗೆ ಹೋರಾಟ ಮಾಡುತ್ತ ಬರಲಾಗಿದೆ. ನ್ಯಾ| ಎ.ಜೆ. ಸದಾಶಿವಆಯೋಗ ರಚನೆ ಮಾಡುವಾಗ ವಿರೋಧ ಮಾಡದ ಪ್ರತಿನಿಧಿ ಗಳು, ಆಯೋಗ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದನಂತರ ಲಂಬಾಣಿ, ಭೋವಿ ಸಮುದಾಯದಶಾಸಕರು ವರದಿ ಜಾರಿಗೆ ವಿರೋಧಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಳಮೀಸಲಾತಿ ಜಾರಿಗೆ ಸಂವಿಧಾನದಲ್ಲಿರುವ ಕಾನೂನುಗಳನ್ನು ತಿಳಿದುಕೊಳ್ಳದೆ ಬೇಕಾಬಿಟ್ಟಿ ಹೇಳಿಕೆ ನೀಡಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುವುದನ್ನು ನಿಲ್ಲಿಸಬೇಕು. ಸಂವಿಧಾನದಲ್ಲಿರುವ ಅಂಶಗಳನ್ನುಒಪ್ಪಿಕೊಳ್ಳಬೇಕೆಂದು ಆಗ್ರಹಿಸಿದರು. ಮಾದಿಗ ಯುವ ಸೇನೆ ಜಿಲಾಧ್ಯಕ್ಷಬಸವರಾಜ ಹಗರಟಿಗಿ ಮಾತನಾಡಿ, ಲಂಬಾಣಿ, ಭೋವಿ ಇತರೆ ಜಾತಿಗಳನ್ನುಪರಿಶಿಷ್ಟ ಜಾತಿಯಲ್ಲಿ ಸೇರಿಸಬೇಕೆಂದು ಹಾವನೂರ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದಾಗ ಮಾದಿಗ ಮತ್ತು ಛಲವಾದಿ ಸಮುದಾಯದ ಮುಖಂಡರು ವಿರೋಧ ವ್ಯಕ್ತಪಡಿಸಿಲ್ಲ, ಸರ್ಕಾರದ ಯೋಜನೆಗಳ ಲಾಭವನ್ನು ಬಹುಪಾಲು ದಲಿತ ಜನಾಂಗದವರು ಪಡೆಯುತ್ತಿದ್ದಾರೆ. ಇದರಿಂದ ಮೂಲ ದಲಿತರಿಗೆ ಅನ್ಯಾಯವಾಗುತ್ತಿದ್ದು, ಕೂಡಲೇ ನ್ಯಾ| ಎ.ಜೆ. ಸದಾಶಿವ ಆಯೋಗ ವರದಿ ಜಾರಿ ಮಾಡಬೇಕೆಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ನ್ಯಾ| ಎ,ಜೆ ಸದಾಶಿವ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿ ಒಮ್ಮತದ ನಿರ್ಣಯ ಕೈಗೊಂಡು ಮಾದಿಗ ಮತ್ತು ಛಲವಾದಿ ಸಮುದಾಯಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು. ವಾಸುದೇವ ಕಟ್ಟಿಮನಿ, ಭೀಮರಾಯಬಂದಳ್ಳಿ, ಬಸವರಾಜ ಕೋಡೆಕಲ್‌, ಪರಶುರಾಮ ಪರಸನಳ್ಳಿ, ಚಂದ್ರಶೇಖರದಾಸನಕೇರಿ, ಮಲ್ಲು ರಾಮಸಮುದ್ರ, ಶಿವು ಮುದ್ನಾಳ, ಬಸವರಾಜ ಹುಣಸಗಿ, ಕಾಶಪ್ಪ ಹೆಗ್ಗಣಗೇರಾ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.