ಯಾದಗಿರಿಯ ಬಳಿ ವಿಶ್ವದರ್ಜೆ ‘ಔಷಧಿ ಪಾರ್ಕ್’ ನಿರ್ಮಾಣಕ್ಕೆ ಸಚಿವರಿಂದ ಮನವಿ  


Team Udayavani, Aug 12, 2021, 8:56 PM IST

hfghdfghfg

ಯಾದಗಿರಿ: ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲೆಯ ಕಡೆಚೂರುನಲ್ಲಿ ವಿಶ್ವದರ್ಜೆಯ ಬೃಹತ್ ಔಷಧ ಪಾರ್ಕ್ ಅಭಿವೃದ್ಧಿಪಡಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮನವಿ ಮಾಡಿದ್ದಾರೆ.

ಕೇಂದ್ರ ರಸಾಯನ  ಮತ್ತು ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬ ಅವರನ್ನು ಇತ್ತೀಚೆಗೆ ನವದೆಹಲಿಯಲ್ಲಿ ಭೇಟಿಯಾದ ಅವರು, ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ  ಬೃಹತ್ ಔಷಧ ಪಾರ್ಕ್ ನಿರ್ಮಿಸಿದರೆ  ಈ ಭಾಗಕ್ಕೆ ಹೆಚ್ಚಿನ ನ್ಯಾಯ ಸಿಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಿದರು.

ಯಾದಗಿರಿ ಜಿಲ್ಲೆಯು ಹಿಂದುಳಿದ ಕರ್ನಾಟಕ ಜಿಲ್ಲಾ ವ್ಯಾಪ್ತಿಗೆ ಒಳಪಡಲಿದೆ. 2 ಮತ್ತು 3ನೇ ಹಂತದ ನಗರಗಳನ್ನು ಅಭಿವೃದ್ಧಿಪಡಿಸಿ ಇಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿ ಹೂಡಿಕೆದಾರರನ್ನು ಆಕರ್ಷಿಸಬೇಕೆಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂಬುದನ್ನು ಸಚಿವರಿಗೆ ವಿವರಿಸಿದರು.   ಯೋಜನೆ ಅನುಷ್ಟಾನಗೊಂಡರೆ ಸುಮಾರು  6 ಸಾವಿರ ಕೋಟಿ ಬಂಡವಾಳವನ್ನು ಆಕರ್ಷಣೆ ಮಾಡಬಹುದು. ಅಂದಾಜು 10 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ್ ಯೋಜನೆಯಡಿ ಇದನ್ನು ಕೈಗೆತ್ತಿಕೊಂಡರೆ ಉದ್ಯೋಗ ಕ್ರಾಂತಿಯೇ ಸೃಷ್ಟಿಯಾಗಲಿದೆ ಎಂದು  ಅಭಿಪ್ರಾಯಪಟ್ಟರು.

ಯಾದಗಿರಿ ಜಿಲ್ಲೆಯು ಕಲಬರುಗಿ ನಗರಕ್ಕೆ ಸಮೀಪದಲ್ಲಿದ್ದು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಸೇರಿಂತೆ ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿದೆ.  ರಾಜ್ಯ ಸರ್ಕಾರವು  ಔಷಾಧಾಲಯ ಕಾರ್ಖಾನೆಗಳಿಗೆ  ಎಲ್ಲ ರೀತಿಯ ನೆರವು ನೀಡಲಿದೆ. ಈ ಯೋಜನೆಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕೆಂದು ಸಚಿವರಿಗೆ ನಿರಾಣಿ ಮನವರಿಕೆ ಮಾಡಿದರು.

ತುಮಕೂರು ಮಿಷನ್ ಟೂಲ್ ಪಾರ್ಕ್, ರಾಜ್ಯದಲ್ಲಿ ಈಗಾಗಲೇ ತುಮಕೂರು ಮಿಷನರಿ ಟೋಲ್ ಪಾರ್ಕ್, ಹೈಟೆಕ್  ರಕ್ಷಣಾ ಮತ್ತು ವೈಮಾನಿಕ ಪಾರ್ಕ್, ಜಪಾನೀಸ್ ಕೈಗಾರಿಕಾ ಟೌನ್‍ಶಿಪ್ ಸೇರಿದಂತೆ ಹತ್ತು ಹಲವು ಯೋಜನೆಗಳು ನಿರ್ಮಾಣವಾಗಿದೆ.

ಯಾದಗಿರಿಯ ಕಡೆಚೂರಿನಲ್ಲಿ ವಿಶ್ವದರ್ಜೆಯ ಔಷಧಾಲಯ ಪಾರ್ಕ್ ನಿರ್ಮಾಣಕ್ಕೆ ಒಂದು ಸಾವಿರ ಕೋಟಿ ಆರ್ಥಿಕ ನೆರವು ನೀಡಲು ಸಿದ್ದವಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಯೋಜನೆ ಪ್ರಾರಂಭಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಭಗವಂತ ಕೂಬ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು ಯೋಜನೆಯನ್ನು ಕಾಲ ಮಿತಿಯೊಳಗೆ ಅನುಷ್ಠಾನಗೊಳಿಸುವ  ಭರವಸೆಯನ್ನು ನೀಡಿದರು.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.