ಜಂಗಮರಿಗೆ ನ್ಯಾಯ ಕಲ್ಪಿಸಲು ಆಗ್ರಹ

Team Udayavani, Jan 14, 2019, 11:09 AM IST

yad-1.jpg

ಯಾದಗಿರಿ: ಜಿಲ್ಲೆಯಲ್ಲಿ ಅನಾದಿ ಕಾಲದಿಂದಲೂ ಇರುವ ಬೇಡ, ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿನಾಕಾರಣ ಕಿರುಕುಳ ನೀಡಲಾಗುತ್ತಿದ್ದು, ಇದನ್ನು ತಡೆದು ತಕ್ಷಣ ಸರ್ಕಾರದ ಆದೇಶಗಳಂತೆ ಜಾತಿ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಬೇಡ ಜಂಗಮ ಕ್ಷೇಮಾಭಿವೃದ್ಧಿ ವೇದಿಕೆ ಕಾರ್ಯಾಧ್ಯಕ್ಷ ವೈಜನಾಥ ಹಿರೇಮಠ ಒತ್ತಾಯಿಸಿದರು.

ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ಬನದ ವೀರೇಶ್ವರ ಕಲ್ಯಾಣ ಮಂಟಪದಿಂದ ಹೊರಟ ಬೈಕ್‌ ರ್ಯಾಲಿ ತಹಶೀಲ್ದಾರ್‌ ಕಚೇರಿ ಎದುರು ಜಮಾಯಿಸಿದ್ದ ನಂತರ ನಡೆದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.

ಬೇಡ ಜಂಗಮರು ಎಂದರೆ ಯಾರು ಎಂದು ತಿಳಿಯಲು ಸರ್ಕಾರ ನಿಯೋಜಿಸಿದ್ದ ಡಾ| ಸೂರ್ಯನಾಥ ಕಾಮತ್‌ ಅವರ ನೇತೃತ್ವದ ಸಮಿತಿ ವಡಗೇರಾಗೆ ಭೇಟಿ ನೀಡಿತ್ತು. ಇಲ್ಲಿಯೂ ಪರಿಶೀಲನೆ ನಡೆಸಿ, ಇಲ್ಲಿ ಬೇಡ ಜಂಗಮರಿದ್ದಾರೆ ಎಂದು ವರದಿ ನೀಡಿದೆ. ಹಿರೇಮಠ, ಸಾಲಿಮಠ, ಮಠಪತಿ ಎಂದು ಗುರ್ತಿಸಿಕೊಂಡಿದ್ದಾರೋ ಅವರೇ ಬೇಡ ಜಂಗಮರು ಎಂದು ಈ ಸಮಿತಿ ವರದಿ ಹೇಳಿದೆ. ಆದರೆ ವಡಗೇರಾ ತಹಸೀಲ್ದಾರ್‌ ಇಲ್ಲಿ ಬೇಡ ಜಂಗಮರು ಇಲ್ಲ ಎಂದು ಹಿಂಬರಹ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1901ರಲ್ಲಿಯೇ ನಿಜಾಮ ಸರ್ಕಾರದಲ್ಲಿ ಬೇಡ ಜಂಗಮರು ಸೌಲತ್ತು ಪಡೆಯುತ್ತಿದ್ದರು. ತದನಂತರ 1950ರಲ್ಲಿ ಡಾ| ಅಂಬೇಡ್ಕರ್‌ ಅವರು ಸಹ ಅಧ್ಯಯನ ಮಾಡಿ ಬೇಡ ಜಂಗಮರನ್ನು ಪರಿಶಿಷ್ಟ ಜಾತಿಯಲ್ಲಿ ಸೇರಿಸಿ ಸೌಲತ್ತು ಕೊಡಲು ಶಿಫಾರಸು ಮಾಡಿದ್ದರೂ ಸಹ ಇಂದಿಗೆ 65 ವರ್ಷಗಳೇ ಕಳೆದರೂ ಬೇಡ ಜಂಗಮರಿಗೆ ಈ ಸೌಲತ್ತು ಬಳಸಿಕೊಳ್ಳಲು ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ಬಿಡುತ್ತಿಲ್ಲ ಎಂದರು.

ಬಳಿಕ ವಡಗೇರಾ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬೇಡ ಜಂಗಮ ಅಭಿವೃದ್ಧಿ ವೇದಿಕೆ ಜಿಲ್ಲಾಧ್ಯಕ್ಷ ಶರಣ ಬಸವ ಸ್ವಾಮಿ ಬದ್ದೇಪಲ್ಲಿ ಮನವಿ ಸಲ್ಲಿಸಿದರು. ಬಿ.ಬಿ. ಸ್ವಾಮಿ, ಪಂಪಯ್ಯ ಸ್ವಾಮಿ ವಡಗೇರಾ, ಗೌರಿಶಂಕರ ಹಿರೇಮಠ, ಸೊಮಶೇಖರಯ್ಯ ಸ್ವಾಮಿ ರುದ್ರಮುನಿ ಬೆಂಡೆಬೆಂಬಳಿ, ಸೋಮಶೇಖರ ರೊಟ್ನಡಿಗಿ ಇದ್ದರು.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.