ರಸ್ತೆ ಮೇಲೆ ಚರಂಡಿ ನೀರು; ಬೇಸತ್ತ ಗ್ರಾಮಸ್ಥರು

Team Udayavani, Dec 9, 2021, 11:34 AM IST

11road

ಗುರುಮಠಕಲ್‌: ಗಡಿ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಊರು ಹಲವು ಸೌಲಭ್ಯಗಳಿಂದ ವಂಚಿತವಾಗಿರುವುದು ಒಂದು ಕಡೆಯಾದರೆ ಕನಿಷ್ಟ ರಸ್ತೆ ಮೇಲೆ ಹರಿಯುವ ನೀರನ್ನು ಬೇರೆ ಕಡೆ ಹೋಗಲು ವ್ಯವಸ್ಥೆ ಮಾಡದಷ್ಟು ಆಡಳಿತ ಜಿಡ್ಡುಗಟ್ಟಿದೆ.

ತಾಲೂಕಿನ ಕಾಕಲವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರಬಂಡ ಗ್ರಾಮದಲ್ಲಿ ರಸ್ತೆ ಮೇಲೆ ಹರಿಯುವ ಚರಂಡಿ ನೀರು ಹಲವು ರೋಗ, ರುಜಿಗಳಿಗೆ ರಹದಾರಿಯಾಗಿದೆ. ಕೊಳಚೆ ನೀರಿನ ಮೇಲೆಯೇ ಮಕ್ಕಳು, ಮಹಿಳೆಯರು, ವಯೋವೃದ್ಧರು ನಿತ್ಯ ಓಡಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಮಕ್ಕಳು, ವೃದ್ಧರನ್ನು ಎತ್ತಿಕೊಂಡು ದಾಟಿಸದಿದ್ದರೇ ಕೊಳಚೆಯಲ್ಲಿ ಬೀಳುವುದು ಸಾಮಾನ್ಯವಾಗಿದೆ. ಈ ರಸ್ತೆಯ ಹಾಗೂ ಚರಂಡಿಯನ್ನು ಸರಿಯಾಗಿ ನಿರ್ವಹಿಸಲು ಒಮ್ಮೆಯೂ ಆ ಭಾಗದ ಇಂಜಿನಿಯರ್‌ಗಳು ಗಡಿ ಗ್ರಾಮಕ್ಕೆ ಬಂದೇ ಇಲ್ಲ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ರಸ್ತೆ ನಮಗೆ ಸಂಬಂಧಿಸಿಲ್ಲ ಎನ್ನುತ್ತಾರೆ. ಹಾಗಾದರೆ ಈ ರಸ್ತೆಯ ದುರಸ್ತಿ ಯಾರು ಮಾಡಿಸಬೇಕು? ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ.

ಮಳೆ ಬಂತೆಂದರೆ ಮುಖ್ಯ ರಸ್ತೆಯಲ್ಲಿ ಚರಂಡಿ ತುಂಬಿ ರಸ್ತೆ ಮೇಲೆ ಸದಾ ಹರಿಯುತ್ತಿದೆ. ಚರಂಡಿ ತುಂಬಿದ ನೀರು ಸುಲಭವಾಗಿ ಹೋಗುವಂತೆ ಯಾವುದೇ ವ್ಯವಸ್ಥೆ ಮಾಡಿಲ್ಲ. ಸಾರ್ವಜನಿಕರು ಬಳಸಿದ ನೀರು, ಬಚ್ಚಲು ನೀರು, ಕೊಚ್ಚೆ ನೀರಿನ ರೂಪತಾಳಿ ಮುಖ್ಯ ರಸ್ತೆ ಮೇಲೆ ನಿಂತು ಗಬ್ಬೆದ್ದು ನಾರುತ್ತಿದೆ. ರಸ್ತೆಯಲ್ಲಿ ಕೊಳಚೆ ನೀರು ಸದಾ ಹರಿಯುತ್ತಿದೆ. ಚರಂಡಿ ಸ್ವತ್ಛಗೊಳಿಸದೇ ಇರುವದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ರಸ್ತೆಯಲ್ಲಿ ಸಂಚಾರಕ್ಕೂ ತೊಂದರೆ ಉಂಟಾಗಿದೆಯಲ್ಲದೇ ಈ ರಸ್ತೆ ದಾಟಲು ಜನರು ಪರದಾಡುವ ಸ್ಥಿತಿ ಉಂಟಾಗಿದೆ.

ವಿದ್ಯಾರ್ಥಿಗಳ ಗೋಳಂತೂ ಹೇಳತೀರದು. ಚರಂಡಿ ನೀರಿನಲ್ಲಿಯೇ ನಡೆದು ಪಾಲಕರು ತಮ್ಮ ಮಕ್ಕಳನ್ನು ಎತ್ತಿಕೊಂಡು ಹೋಗಿ ರಸ್ತೆ ದಾಟಿಸುವ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸಾರ್ವಜನಿಕರು ಸಂಬಂಧಿ ಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಈಗಲಾದರೂ ಸಂಬಂಧಿಸಿದ ಅಧಿಕಾರಿಗಳು ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರನ್ನು ನಿಲ್ಲಿಸಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸಬೇಕು ಎಂದು ಬೋರಬಂಡ ಗ್ರಾಮದ ನಿವಾಸಿಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.