ಗ್ರಾಮದ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆ

84.20 ಕೋಟಿ ರೂ. ವೆಚ್ಚದಲ್ಲಿ ಜಲಜೀವನ ಯೋಜನೆ ಅನುಷ್ಠಾನ

Team Udayavani, Jul 9, 2020, 3:30 PM IST

9-July-16

ಶಹಾಪುರ: ತಾಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು.

ಶಹಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 2020-21ರಿಂದ 2024-25ರ ವರೆಗೆ ಜಲ ಜೀವನ ವಿನೂತನ ಯೋಜನೆಯಡಿ ತಾಲೂಕಿನ 198 ಗ್ರಾಮಗಳಲ್ಲಿನ ಅಂದಾಜು 68, 472 ಕುಟುಂಬದ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ನಳಗಳ ಮೂಲಕ ಪೂರೈಸಲಾಗುತ್ತಿದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ರಾಜಕುಮಾರ ಪತ್ತಾರ ಹೇಳಿದರು.

ನಗರದ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಜಲ ಜೀವನ ಯೋಜನೆ ವಿವರ ನೀಡಿದ ಅವರು, ನಾಲ್ಕು ವರ್ಷದ ಅಂದಾಜು ಪಟ್ಟಿ ತಯಾರಿಸಲಾಗಿದ್ದು, ಒಟ್ಟು 84.20 ಕೋಟಿ ರೂ. ವೆಚ್ಚ ತಗುಲಲಿದೆ. ಈಗಾಗಲೇ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆಗೆ ಸಲ್ಲಿಸಲಾಗಿದೆ. ಮೊದಲ ಹಂತದಲ್ಲಿ 2020-21ನೇ ಸಾಲಿನಲ್ಲಿ 198 ಗ್ರಾಮಗಳಲ್ಲಿ 47 ಗ್ರಾಮಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, 22,595 ಕುಟುಂಬಗಳ ಮನೆಗೆ ನಳದ ಮೂಲಕ ಶುದ್ಧ ನೀರು ಪೂರೈಸುವ ಗುರಿ ಹೊಂದಲಾಗಿದೆ. ಈ ಕೆಲಸಕ್ಕೆ ಅಂದಾಜು 29.37 ಲಕ್ಷ ರೂ. ಅನುಮೋದನೆಗೆ ಕಳುಹಿಸಲಾಗಿದೆ ಎಂದು ಹೇಳಿದರು.

ಆನ್‌ಲೈನ್‌ ಕ್ಲಾಸ್‌ ಕುರಿತು ತಾಪಂ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕ್ಷೇತ್ರ ಶಿಕ್ಷಾಣಾಧಿಕಾರಿ ರುದ್ರಗೌಡ ಪಾಟೀಲ, ಆನ್‌ಲೈನ್‌ ಕ್ಲಾಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೂ ಶಾಲೆ ಕಾಲೇಜುಗಳನ್ನು ಆರಂಭಿಸುವ ಪ್ರಸ್ತಾಪವಿಲ್ಲ ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಗುರುರಾಜ, ಕೊರೊನಾ ಹಾವಳಿಯಿಂದಾಗಿ ಅಂಗನವಾಡಿ ಕೇಂದ್ರ ಬಂದ್‌ ಮಾಡಿರುವ ಕಾರಣ ಪ್ರತಿ ಮಗುವಿಗೂ ಆಹಾರ ಧಾನ್ಯಗಳನ್ನು ಮನೆ ಮನೆಗೆ ತೆರಳಿ ವಿತರಿಸಲಾಗಿದೆ. ಜೂನ್‌ನಿಂದ ಜುಲೈ ಅಂತ್ಯದವರೆಗೂ ಎಲ್ಲ ಅಂಗನವಾಡಿ ಕಾರ್ಯಕರ್ತರಿಗೆ ಕೋವಿಡ್‌ ಟೆಸ್ಟಿಂಗ್‌ ಮಾಡಿಸಲಾಗುತ್ತದೆ ಎಂದು ಹೇಳಿದರು.

ಕೃಷಿ ಸಹಾಯಕ ನಿರ್ದೇಶಕ ಗೌತಂ ಮಾತನಾಡಿ, ಏಕದಳ ಧಾನ್ಯಗಳಲ್ಲಿ 24,968 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಿದ್ದು, 220 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ದ್ವಿದಳ ಧಾನ್ಯಗಳು 33,848 ಹೆಕ್ಟೇರ್‌ ಬಿತ್ತನೆ ಗುರಿ ಇದೆ. 19408 ಹೆಕ್ಟೇರ್‌ ಪ್ರದೇಶಗಳಲ್ಲಿ ಬಿತ್ತನೆಯಾಗಿದೆ. ಎಣ್ಣೆಕಾಳು 371 ಹೆಕ್ಟೇರ್‌ ಗುರಿ ಇದ್ದು, 23 ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ವಾಣಿಜ್ಯ ಬೆಳೆಗಳು ಒಟ್ಟು 75,550 ಹೆಕ್ಟೇರ್‌ ಗುರಿ ಇದ್ದು, 27, 270 ಹೆಕ್ಟೇರ್‌ ಭೂಮಿಯಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಒಟ್ಟು ಮುಂಗಾರು ಹಂಗಾಮು 1,34,737 ಹೆಕ್ಟೇರ್‌ ಜಮೀನಿನಲ್ಲಿ ಬಿತ್ತುವ ಗುರಿ ಹೊಂಡಲಾಗಿದ್ದು, ಈಗಾಗಲೇ 46,701 ಹೆಕ್ಟೇರ್‌ ಜಮೀನುಗಳಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಶೇ.43ರಷ್ಟು ಬಿತ್ತನೆ ಸಾಧಿಸಲಾಗಿದೆ. ರೈತರಿಗೆ ಅಗತ್ಯವಿರುವ ರಸಗೊಬ್ಬರ ರೈತ ಸಂಪರ್ಕ ಕೇಂದ್ರಗಳಲ್ಲಿ ಒಟ್ಟು 51350 ಟನ್‌ ಲಭ್ಯವಿದೆ ಎಂದು ವಿವರಿಸಿದರು.

ತಾಪಂ ಅಧ್ಯಕ್ಷ ನಾಗಣ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಮೂರ್ತಿ, ತಾಪಂ ಸದಸ್ಯರಾದ ಹೊನ್ನಪ್ಪಗೌಡ, ಪರಶುರಾಮ ಕುರುಕುಂದಿ, ಬಸವಂತರಡ್ಡಿ, ಭೀಮರಡ್ಡಿ ಪೂಜಾರಿ, ಸಿದ್ಧಲಿಂಗಪ್ಪಗೌಡ ಪಾಟೀಲ, ಹಣಮಂತ್ರಾಯ ದಳಪತಿ ಇದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.