ಜಿಲ್ಲೆಗೆ 14 ವೆಂಟಿಲೇಟರ್‌ ಪೂರೈಕೆ

Team Udayavani, Aug 5, 2020, 3:02 PM IST

ಜಿಲ್ಲೆಗೆ 14 ವೆಂಟಿಲೇಟರ್‌ ಪೂರೈಕೆ

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ನಿಂದಾಗಿ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅತಿ ತುರ್ತಾಗಿ ತಲಾ ಒಂದು ಎಕರೆ ಜಮೀನನ್ನು ಆದ್ಯತೆಯ ಮೇರೆಗೆ ಗುರುತಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಪಶುಸಂಗೋಪನೆ, ಹಜ್‌ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣಗಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್‌19 ಸೋಂಕಿತರ ಚಿಕಿತ್ಸೆಗಾಗಿ 14 ವೆಂಟಿಲೇಟರ್‌ ಗಳನ್ನು ಪೂರೈಸಲಾಗಿದೆ. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ, ಕೋಟ್ಯಂತರ ರೂ. ಬಿಡುಗಡೆ ಮಾಡಲಾಗಿದೆ. ಇರುವ ಸಣ್ಣಪುಟ್ಟ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಜಿಲ್ಲೆಯಲ್ಲಿ ರ್ಯಾಪಿಡ್‌ ಆಂಟಿಜೆನ್‌ ಪರೀಕ್ಷೆಯ ಕಿಟ್‌ಗಳನ್ನು ಮತ್ತಷ್ಟು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಮರ್ಪಕವಾಗಿ ಊಟ, ಉಪಾಹಾರ, ಕುಡಿಯುವ ನೀರು, ಔಷಧಗಳನ್ನು ಪೂರೈಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಅವರಲ್ಲಿ ಆತ್ಮವಿಶ್ವಾಸ ತುಂಬಿ ಅವರನ್ನು ಗುಣಮುಖರನ್ನಾಗಿಸುವ ಯತ್ನಿಸಬೇಕು. ಕೋವಿಡ್‌ ಆಸ್ಪತ್ರೆಗಳಲ್ಲಿ ಸ್ಪಚ್ಛತೆ ಕಾಪಾಡಿಕೊಳ್ಳಬೇಕು. ನಿರಂತರ ವಿದ್ಯುತ್‌ ಪೂರೈಸಬೇಕು ಎಂದರು.

ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಯಾವುದೇ ಔಷಧೋಪಚಾರಗಳ ಕೊರತೆಯಿಲ್ಲ. 108ನ 12 ವಾಹನಗಳು 18 ಆಂಬ್ಯುಲೆನ್ಸ್‌ಗಳು, 10 ಮೊಬೈಲ್‌ ವ್ಯಾನ್‌ಗಳು, ಅಗತ್ಯ ಸಂಖ್ಯೆಯ ಮಾಸ್ಕ್ಗಳು, ಸ್ಯಾನಿಟೈಸರ್‌, ಪಿಪಿ ಕಿಟ್‌ಗಳಿದ್ದು ಸಿಬ್ಬಂದಿ ಕೊರತೆ ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಜಿಲ್ಲೆಯ ಕೃಷಿಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಚಿವರು ನಿರ್ದೇಶಿಸಿದರು. ಜಿಲ್ಲೆಯ ಹಲವೆಡೆ ರಸ್ತೆಗಳು ದುರಸ್ತಿಗೊಂಡಿವೆ. ಅವುಗಳನ್ನು ಕೂಡಲೇ ಸಂಚಾರ ಯೋಗ್ಯವಾಗಿಸಲು ಪ್ರಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಚವ್ಹಾಣಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದಾಗ, 45 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಶಾಸಕರಾದ ವೆಂಕಟರೆಡ್ಡಿ ಮುದ್ನಾಳ್‌, ನರಸಿಂಹ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ್‌, ಜಿಪಂ ಅಧ್ಯಕ್ಷ ಬಸವನಗೌಡ ಯಡಿಯಾಪೂರ, ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ, ಜಿಲ್ಲಾ ಧಿಕಾರಿ ಎಂ. ಕೂರ್ಮಾರಾವ್‌, ಎಸ್‌ಪಿ ಋಷಿಕೇಶ್‌ ಸೋನಾವಣೆ, ಜಿಪಂ ಸಿಇಒ ಶಿಲ್ಪಾ ಶರ್ಮಾ ಇದ್ದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.