ಮಾರಕ ವಿಧೇಯಕ ಕೇಂದ್ರ ಸರ್ಕಾರ ಕೈ ಬಿಡಲಿ


Team Udayavani, Jul 29, 2018, 5:25 PM IST

dvg.jpg

ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವಿಧೇಯಕ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ ನೀಡಿದ ಕರೆ ಮೇರೆಗೆ ಶನಿವಾರ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳಲ್ಲಿ ಹೊರ ರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸುವ ಮೂಲಕ ಪ್ರತಿಭಟಿಸಿ, ಖಾಸಗಿ ವೈದ್ಯರು
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘಟನೆ ಹಿರಿಯ
ಸಲಹೆಗಾರ ಡಾ| ಎ.ಎಂ. ಶಿವಕುಮಾರ್‌, ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ
ಆಯೋಗ ವಿಧೇಯಕ ದೇಶದ ಆರೋಗ್ಯ ಕ್ಷೇತ್ರಕ್ಕೆ ಮಾರಕವಾಗಲಿದೆ. ಮುಂದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ ಅಕ್ಷರಶಃ ಗಗನಕುಸುಮ ಆಗಲಿದೆ.

ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಬರೀ ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳ ವೈದ್ಯರು ಮತ್ತು
ವೈದ್ಯಕೀಯೇತರ ಸಿಬ್ಬಂದಿಗೆ ಮಾತ್ರವಲ್ಲ, ಜನಸಾಮಾನ್ಯರ ವಿರೋಧಿ. ಹಾಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಕೈ ಬಿಡಬೇಕು ಎಂದು ಒತ್ತಾಯಿಸಿದರು.

1956ರಲ್ಲಿ ಪ್ರಾರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘಟನೆ ವೈದ್ಯಕೀಯ ಕಾಲೇಜುಗಳ ಪ್ರಾರಂಭ, ವೈದ್ಯರೆಸಗುವ ತಪ್ಪುಗಳ ವಿಚಾರಣೆ ಕೈಗೊಂಡು ಸೂಕ್ತ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತಿತ್ತು. ಒಂದು ವೈದ್ಯಕೀಯ ಕಾಲೇಜು ಪ್ರಾರಂಭಿಸ ಬೇಕಾದಲ್ಲಿ ಭಾರತೀಯ ವೈದ್ಯಕೀಯ ಸಂಘಟನೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕಿತ್ತು.

ಒಟ್ಟಾರೆಯಾಗಿ ಭಾರತದ ವೈದ್ಯಕೀಯ ಸೇವಾ ಕ್ಷೇತ್ರವನ್ನು ನಿಯಂತ್ರಿಸುವ ಕೆಲಸ ಮಾಡುತ್ತಿತ್ತು. ಅಂತಹ ಭಾರತೀಯ
ವೈದ್ಯಕೀಯ ಸಂಘಟನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನೆಪವೊಡ್ಡಿ ಕೇಂದ್ರ ಸರ್ಕಾರ ಆ ಸಂಘಟನೆಯನ್ನೇ ರದ್ದುಪಡಿಸಿ, ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸಲು ಮುಂದಾಗಿರುವುದು ಸಮಂಜಸವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಭಾರತೀಯ ವೈದ್ಯಕೀಯ ಸಂಘಟನೆಯಲ್ಲಿ ವೈದ್ಯಕೀಯ ಕ್ಷೇತ್ರದ ತಜ್ಞರು, ನಿಪುಣರು, ಕ್ಷೇತ್ರದ ಪ್ರತಿ ಮಾಹಿತಿ ಹೊಂದಿದವರು ಇರುತ್ತಿದ್ದರು. ಈಗ ಉದ್ದೇಶಿಸಿರುವ ಆಯೋಗದ 29 ಸದಸ್ಯರಲ್ಲಿ ಐವರು ಮಾತ್ರ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದವರು ಇರುತ್ತಾರೆ. ಆ ಐವರು 10 ವರ್ಷದವರೆಗೆ ಬದಲಾಗುವಂತಿಲ್ಲ. ಇನ್ನುಳಿದ ಸದಸ್ಯರು ಯಾರು ಬೇಕಾದರೂ ಆಗಬಹುದು.

ಅಂತಹವರಿಂದ ವೈದ್ಯಕೀಯ ಕ್ಷೇತ್ರದ ಬೆಳವಣಿಗೆ, ನಿಯಂತ್ರಣ ನಿರೀಕ್ಷಿಸಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಕೇಂದ್ರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ಖಾಸಗಿ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳಿಗೇ ಶೇ. 60ರಷ್ಟು ಸೀಟು ಭರ್ತಿ ಮಾಡಿಕೊಳ್ಳುವ ಮತ್ತು ಶುಲ್ಕ ನಿಗದಿಪಡಿಸುವ ಅಧಿಕಾರ ಒದಗಿಸಲಿದೆ. ಹಣ ಇದ್ದವರಿಗೆ ಮಾತ್ರ ವೈದ್ಯಕೀಯ ಶಿಕ್ಷಣ ಎನ್ನುವಂತಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
 
ವೈದ್ಯಕೀಯ ಪದವಿ ಪಡೆದವರು ವೃತ್ತಿ ಪ್ರಾರಂಭಿಸಲು ಎಕ್ಸಿಟ್‌ ಪರೀಕ್ಷೆ ಬರೆಯಬೇಕಾಗುತ್ತದೆ. ಎಷ್ಟೇ ಅಂಕ ಪಡೆದವರು ಸಹ ಎಕ್ಸಿಟ್‌ ಪರೀಕ್ಷೆ ಬರೆಯುವ ಅವಕಾಶ ನೀಡುವುದರಿಂದ ವೈದ್ಯಕೀಯ ಕ್ಷೇತ್ರದಲ್ಲಿ ಗುಣಮಟ್ಟ ನಿರೀಕ್ಷೆ ಸಾಧ್ಯವೇ ಇಲ್ಲ. ಆಯುರ್ವೇದ ಪದವಿ ಮಾಡಿದವರು 6 ತಿಂಗಳ ಬ್ರಿಡ್ಜ್ ಕೋರ್ಸ್‌ ಪೂರೈಸಿ, ಅಲೋಪಥಿ ಚಿಕಿತ್ಸೆ ನೀಡುವ ಅರ್ಹತೆ ಪಡೆಯಬಹುದು. ವೈದ್ಯಕೀಯ
ಕ್ಷೇತ್ರ ಮತ್ತು ಜನಸಾಮಾನ್ಯರಿಗೆ ಅತೀ ಮಾರಕವಾಗಲಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕವನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಭಾರತೀಯ ವೈದ್ಯಕೀಯ ಸಂಘಟನೆ ದಾವಣಗೆರೆ ಶಾಖಾ ಕಾರ್ಯದರ್ಶಿ ಡಾ| ಪ್ರವೀಣ್‌ ಎಂ. ಅಣೆಕರ್‌, ಡಾ| ಬಿ.ಎಸ್‌. ನಾಗಪ್ರಕಾಶ್‌, ಡಾ| ಸುಬ್ಟಾರಾವ್‌, ಡಾ| ನಾಗರತ್ನ, ಡಾ| ಪ್ರಿಯಾಂಕ, ಡಾ| ಚಂದನಾ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.