ಮಕ್ಕಳ ಸಾಧನೆಯಲ್ಲಿ ತಂದೆ-ತಾಯಿ ಪಾತ್ರ ಮುಖ್ಯ

ಐದು ಋಣಗಳು ಪ್ರತಿಯೊಬ್ಬರ ಮೇಲೆ ಇದ್ದೆ ಇರುತ್ತವೆ.

Team Udayavani, Feb 1, 2021, 6:45 PM IST

ಮಕ್ಕಳ ಸಾಧನೆಯಲ್ಲಿ ತಂದೆ-ತಾಯಿ ಪಾತ್ರ ಮುಖ್ಯ

ಸುರಪುರ: ತಂದೆ, ತಾಯಿ ಎರಡು ಕಣ್ಣು ಇದ್ದಂತೆ. ಇವರಿಗೆ ಸಮಾನವಾದ ವ್ಯಕ್ತಿ ವಿಶ್ವದಲ್ಲಿಯೇ ಇಲ್ಲಾ. ಯಾರು ಎಷ್ಟೆ ಎತ್ತರಕ್ಕೆ ಬೆಳೆಯಲಿ ಸಾಧನೆಯ ಉತ್ತುಂಗದ ಶಿಖರವೇರಲಿ. ಅದರ ಹಿಂದೆ ತಂದೆ, ತಾಯಿ ಪಾತ್ರ ದೊಡ್ಡದಾಗಿರುತ್ತದೆ ಎಂದು ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ ನಾಟಕಕಾರ ಎಲ್‌ಬಿಕೆ ಆಲ್ದಾಳ ಅಭಿಪ್ರಾಯಪಟ್ಟರು ತಾಲೂಕಿನ ರುಕ್ಮಾಪುರ ಗ್ರಾಮದಲ್ಲಿ ಗಂಗಮ್ಮ ಬಣಗಾರ ಟ್ರಸ್ಟ್‌ ವತಿಯಿಂದ ನಿವೃತ್ತ ಎಸ್ಪಿ ಚಂದ್ರಕಾಂತ ಭಂಡಾರೆಯವರಿಗೆ ಏರ್ಪಡಿಸಿದ್ದ ಮಾತೋಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ತಂದೆ, ತಾಯಿ ಹೆಸರಲ್ಲಿ ಬಹುತೇಕರು ಪ್ರಶಸ್ತಿಗಳನ್ನು ವಿತರಿಸುತ್ತಾರೆ.

ಇದರಿಂದ ಯಾವುದೇ ಲಾಭವಿಲ್ಲ. ಸತ್ತ ಎಮ್ಮೆಗೆ ಸೇರು ತುಪ್ಪ ಎನ್ನುವಂತೆ ಸತ್ತ ಮೇಲೆ ನಾವೇನು ಕೊಟ್ಟರು ಪ್ರಯೋಜನವಿಲ್ಲ. ಏನಾದರು ಮಾಡುವುದಿದ್ದರೆ, ಕೊಡುವುದಾಗಿದ್ದರೆ ಅದು ಜೀವಂತ ಇರುವಾಗಲೇ ಮಾಡಬೇಕು ತಂದೆ. ತಾಯಿ ಕಣ್ತುಂಬ ನೋಡಿ ಸಂತೋಷ ಪಡುತ್ತಾರೆ. ತಾಯಿ ಜೀವಂತ ಇರುವಾಗಲೇ ಬಣಗಾರ ಕುಟುಂಬದವರು ತಾಯಿ ಹೆಸರಲ್ಲಿ ಟ್ರಸ್ಟ್‌ ಮೂಲಕ ಪ್ರಶಸ್ತಿ ಕೊಡುತ್ತಿರುವ ಸಂಪ್ರದಾಯ ಪ್ರಶಂಸನಾರ್ಹ ಎಂದು ಹರ್ಷ ವ್ಯಕ್ತಪಡಿಸಿದರು.

ಹಾಸ್ಯ ಕಲಾವಿದ ಬಸವರಾಜ ಮಾಮನಿ ಮಾತನಾಡಿ, ಅಪ್ಪ ಅಂದರೆ ಆಕಾಶ, ಅವ್ವ ಅಂದ್ರೆ ಭೂಮಿ. ಇವರಿಬ್ಬರಿಗೂ ಮಿಗಿಲಾದವರು ಇಲ್ಲವೇ ಇಲ್ಲಾ. ಕರುಳು ಬಳ್ಳಿಯ ಸಂಬಂಧಗಳು ಸೃಷ್ಟಿಯಾಗುವುದೇ ಇವರಿಬ್ಬರಿಂದ ಅಪ್ಪ, ಅವ್ವಾ ಎರಡಕ್ಷರಗಳಲ್ಲಿ ಇರುವ ಆನಂದ ಮಮ್ಮಿ, ಡ್ಯಾಡಿ ಶಬ್ದಗಳಲ್ಲಿ ಇಲ್ಲ. ಆದ್ದರಿಂದ ಪಾಲಕ, ಪೋಷಕರು ಮಕ್ಕಳಿಗೆ ಅಪ್ಪ, ಅವ್ವ ಸಂಸ್ಕೃತಿ ಕಲಿಸಿಕೊಡಬೇಕು. ಇಂಗ್ಲಿಷ್‌ ವ್ಯಾಮೋದಲ್ಲಿ ಬಿದ್ದು ನಮ್ಮ ಮಕ್ಕಳು ಮಕ್ಕಳಾಗಿ ಉಳಿಯುವುದಿಲ್ಲ. ಆದ್ದರಿಂದ ದಯವಿಟ್ಟು ಮಕ್ಕಳಿಗೆ ಬಾಲ್ಯದಿಂದಲೇ ಸಾಹಿತ್ಯ, ಸಂಸ್ಕೃತಿ ಕಲಿಸಿಕೊಡಿ ಎಂದು ಮನವಿ ಮಾಡಿದರು.

ಪ್ರಶಸ್ತಿ ಸ್ವೀಕರಿಸಿದ ನಿವೃತ್ತ ಎಸ್ಪಿ ಚಂದ್ರಕಾಥ ಭಂಡಾರೆ ಮಾತನಾಡಿ, ಹೆತ್ತವರ, ನೆರಹೊರೆಯವರ, ಸಮಾಜ, ಗ್ರಾಮ ಮತ್ತು ವಿದ್ಯೆ ನೀಡಿದ ಗುರು. ಈ ಐದು ಋಣಗಳು ಪ್ರತಿಯೊಬ್ಬರ ಮೇಲೆ ಇದ್ದೆ ಇರುತ್ತವೆ. ನಾನು ಸಾಧ್ಯವಾದಷ್ಟು ಇವುಗಳನು ತೀರಿಸುವ ಪ್ರಯತ್ನ ಮಾಡುತ್ತಿದ್ದೇನೆ. ಬಣಗಾರ ಕುಟುಂಬದವರು ನನ್ನ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ. ಇದರಿಂದ ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದೆ. ಕಷ್ಟ ತೊಂದರೆಯಲ್ಲಿದ್ದವರು ಯಾರೇ ಬರಲಿ ಕೈಲಾದ ನೆರವು ನೀಡುತ್ತೇನೆ. ತಾವು ಕೂಡಾ ಅಗತ್ಯ ಬಿದ್ದಲ್ಲಿ ನನ್ನ ನೆರವು ಪಡೆದುಕೊಳ್ಳ ಬಹುದು ಎಂದು ತಿಳಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ.ಎನ್‌. ಅಕ್ಕಿ, ಕಸಾಪ ತಾಲೂಕು ಅಧ್ಯಕ್ಷ ಶ್ರೀನಿವಾಸ ಜಾಲವಾದಿ, ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ, ಪ್ರಕಾಶ ಅಂಗಡಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ಗುರುಶಾಂತಮೂರ್ತಿ ಶಿವಾಚಾರ್ಯ ಆಶೀರ್ವಚನ ನೀಡಿದರು. ಟ್ರಸ್ಟ್‌ ಅಧ್ಯಕ್ಷ ಅಶೋಕ ಬಣಗಾರ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.