ಮುಖ್ಯ ರಸ್ತೆಯಲ್ಲೇ ಕಸದ ರಾಶಿ

Team Udayavani, Apr 3, 2022, 12:53 PM IST

8clean

ಗುರುಮಠಕಲ್‌: ಪಟ್ಟಣದ ಹೊರವಲಯದ ಖಾಸಾ ಮಠದ ಮಾರ್ಗದಲ್ಲಿರುವ ಚಂಡರಕಿ ರಸ್ತೆ ತಿರುವಿನ ಮುಖ್ಯ ರಸ್ತೆಯಲ್ಲೇ ಕಸದ ರಾಶಿ ಇದ್ದು ದಾರಿಹೋಕರು ದುರ್ನಾತದಿಂದ ಬೇಸತ್ತಿದ್ದಾರೆ. ಹಂದಿ-ನಾಯಿಗಳು ಕಸ ಎಳೆದಾಡುವುದರಿಂದ ರಸ್ತೆ ತುಂಬೆಲ್ಲ ಹರಡುತ್ತಿದೆ. ಈ ಕುರಿತು ಹಲವು ಬಾರಿ ಪುರಸಭೆಗೆ ತಿಳಿಸಿದರೂ ಪ್ರಯೋಜನವಾಗುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಖಾಸಾಮಠಕ್ಕೆ ಹೋಗುವ ಭಕ್ತರಿಗೆ ಕಸದ ರಾಶಿ ದರ್ಶನವಾಗುತ್ತದೆ. ಹೀಗಾಗಿ ಮೂಗು ಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಚಂಡರಕಿ ರಸ್ತೆ ತಿರುವಿನಲ್ಲಿ ವಾಹನಗಳು ಕಸದ ರಾಶಿಯಲ್ಲೇ ಸಂಚಾರಿಸಬೇಕಾಗಿದೆ. ಇದರಿಂದ ವಾಹನಗಳು ಸ್ಕೀಡ್‌ ಆಗಿರುವ ಅನೇಕ ನಿದರ್ಶನಗಳಿವೆ.

ಮತ್ತೊಂದೆಡೆ ದುರ್ನಾತದಿಂದ ಸೊಳ್ಳೆಗಳ ಕಾಟವೂ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಇಲ್ಲಿನ ನಿವಾಸಿಗಳಿದ್ದಾರೆ. ಪುರಸಭೆ ತ್ಯಾಜ್ಯ ವಿಲೇವಾರಿ ವಾಹನಗಳೇ ಇಲ್ಲಿ ಕಸದ ರಾಶಿ ಹಾಕುತ್ತಿವೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತ್ಯಾಜ್ಯ ವಿಲೇವಾರಿಗಾಗಿ ಚಂಡರಕಿ ರಸ್ತೆಯಲ್ಲೇ ವ್ಯವಸ್ಥೆ ಕಲ್ಪಿಸಲಾಗಿದೆ. ಇದಕ್ಕಾಗಿ ಜಾಗ ಮೀಸಲಿಟ್ಟಿದ್ದಾರೆ. ಆದರೆ ಚಂಡರಕಿ ರಸ್ತೆ ತಿರುವಿನಲ್ಲಿಯೇ ಕಸದ ರಾಶಿ ಹಾಕುತ್ತಿದ್ದು ಸ್ವತ್ಛತೆಗೆ ಆದ್ಯತೆ ಇಲ್ಲದಂತಾಗಿದೆ. ಇನ್ನು ಕೆಲವು ಸಂದರ್ಭದಲ್ಲಿ ಕಸ ಸುಡುತ್ತಿರುವುದರಿಂದ ಅದರ ಕಾರ್ಬನ್‌ ಡೈ ಆಕ್ಸೈಡ್‌ ಜನರ ಜೀವ ಹಿಂಡುತ್ತಿದೆ. ಆದ್ದರಿಂದ ಈ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಪಟ್ಟಣದ ನಿವಾಸಿಗಳು ಮನೆ ಕಸ ಹಾಕುತ್ತಿದ್ದಾರೆ. ತಿರುವಿನಲ್ಲಿ ತಗ್ಗು ಇರುವುದರಿಂದ ಕಸ ಹಾಕುತ್ತಿದ್ದು, ಈ ಕುರಿತು ಅರಿವು ಮೂಡಿಸುತ್ತೇವೆ. ನಾನು ಈಗ ಅಧಿಕಾರ ವಹಿಸಿಕೊಂಡಿದ್ದೇನೆ. ಮುಂದೆ ಸೂಕ್ತ ಕ್ರಮ ವಹಿಸಲಾಗುವುದು. -ಲಕ್ಷ್ಮೀಬಾಯಿ, ಪುರಸಭೆ ಮುಖ್ಯಾಧಿಕಾರಿ, ಗುರುಮಠಕಲ್

ಕಸದ ರಾಶಿಯಿಂದ ವಾಹನ ಪ್ರಯಾಣಿಕರು ಸ್ಕೀಡ್‌ ಆಗಿ ಬೀಳುತ್ತಿದ್ದಾರೆ. ದುರ್ವಾಸನೆಯಲ್ಲಿ ಮಠದ ಭಕ್ತರು ಮತ್ತು ವಿದ್ಯಾರ್ಥಿಗಳು ಸಂಚರಿಸುತ್ತಿದ್ದಾರೆ. ಪುರಸಭೆ ಸ್ವಚ್ಛತೆಗೆ ಆದ್ಯತೆ ನೀಡದಿದ್ದಲ್ಲಿ ಮುತ್ತಿಗೆ ಹಾಕಿ ಲಾಗುವುದು. -ಯಲ್ಲಪ್ಪ ಯಾದವ್‌, ತಾಲೂಕು ಗೊಲ್ಲ ಸಮಾಜ ಅಧ್ಯಕ್ಷ, ಗುರುಮಠಕಲ್‌.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.