ಬಿರು ಬಿಸಿಲಲ್ಲಿ ಪ್ರಯಾಣಿಕರು ಹೈರಾಣ
Team Udayavani, Apr 10, 2021, 7:58 PM IST
ಯಾದಗಿರಿ: ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ಸೇರಿ ಮೂರು ದಿನ ಪೂರೈಸಿದೆ. ಆದರೂ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಸಾರಿಗೆ ಸಂಸ್ಥೆ ದಿನೇ ದಿನೇ ನಷ್ಟ ಅನುಭವಿಸುತ್ತಿರುವುದು ಒಂದೆಡೆಯಾದರೆ, ಬಸ್ ನಿಲ್ದಾಣವಿದ್ದರೂ ಪ್ರಯಾಣಿಕರು ಅನಿವಾರ್ಯವಾಗಿ ರಸ್ತೆಯಲ್ಲಿ ಬಿರು ಬಿಸಿಲಿನಲ್ಲಿಯೇ ವಾಹನಗಳಿಗಾಗಿ ಪರದಾಡುವಂತಾಗಿದೆ.
ಬಸ್, ಜನರಿಲ್ಲದೇ ಬಸ್ ನಿಲ್ದಾಣಗಳೆಲ್ಲ ಬಿಕೋ ಎನ್ನುತ್ತಿದ್ದವು. ಬೇಸಿಗೆ ಕಾಲ ಇರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುಂತಾಗಿದೆ. ಕೆಂಡದಂತ ಬಿಸಿಲಿನಲ್ಲಿ ಜನರು ಖಾಸಗಿ ವಾಹನಗಳಿಗೆ ಕಾಯುವಂತಾಗಿದ್ದು, ಸಂಬಂಧಿ ಸಿದ ಅಧಿ ಕಾರಿಗಳು ಖಾಸಗಿ ವಾಹನಗಳು ಬಸ್ ನಿಲ್ದಾಣದೊಳಗೆ ಪ್ರವೇಶ ನೀಡುವಂತೆ ಕ್ರಮವಹಿಸಬೇಕು ಎನ್ನುವ ಒತ್ತಾಯವೂ ಕೇಳಿ ಬಂದಿದೆ.
ಖಾಸಗಿ ವಾಹನಗಳು ಬಸ್ ನಿಲ್ದಾಣದೊಳಗೆ ನಿಂತರೆ ಕನಿಷ್ಟ ಪ್ರಯಾಣಿಕರು ನೆರಳಿನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯಾದರೂ ಆಗುತ್ತದೆ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಸಾರಿಗೆ ನಿಮಯದಂತೆ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ ಇರುವುದರಿಂದ ವಾಹನ ಚಾಲಕರು ಬಸ್ ನಿಲ್ದಾಣದೊಳಗೆ ತೆರಳುತ್ತಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಖಾಸಗಿ ವಾಹನ ಪ್ರವೇಶಕ್ಕೆ ತಾತ್ಕಾಲಿಕ ಅವಕಾಶ ನೀಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?
10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್ಗೆ
ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ
ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ
ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್ ಜಾನ್ಸನ್