ಬೆಳೆ ಹಾನಿ ರೈತರ ವಿವರ ದಾಖಲಿಸಲು ವಾರದ ಗಡುವು
Team Udayavani, Nov 23, 2020, 8:35 PM IST
ಯಾದಗಿರಿ: ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ರೈತರಿಗಾದ ಬೆಳೆ ನಷ್ಟ ಪರಿಹಾರವನ್ನು ಆನ್‌ಲೈನ್‌ನಲ್ಲಿ ನೋಂದಣಿ ಮಾಡುತ್ತಿದ್ದು, ಮುಂಬರುವ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್ ಅಧಿಕಾರಿಗಳಿಗೆ ಗಡುವು ನೀಡಿದರು. ಶನಿವಾರ ನಗರದ ಜಿಲ್ಲಾಧಿಕಾರಿ
ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಇತರೆ ಇಲಾಖೆಗಳ ಅಧಿ ಕಾರಿಗಳ ಸಭೆಯಲ್ಲಿಅವರು ಮಾತನಾಡಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಈ ನಷ್ಟಕ್ಕೆ ಸಂಬಂ ಧಿಸಿದಂತೆ ರೈತರ ಮಾಹಿತಿಯನ್ನು ಪರಿಹಾರ ಆನ್‌ಲೈನ್ ನಲ್ಲಿ ದಾಖಲಿಸಬೇಕು. ಅದನ್ನು ಮುಂದಿನವಾರದೊಳಗೆ ಪೂರ್ಣಗೊಳಿಸಬೇಕು, ಗ್ರಾಮಲೆಕ್ಕಾಧಿ ಕಾರಿಗಳ ಪರಿಹಾರ ಲಾಗ್‌ಇನ್‌ನಲ್ಲಿಬಾಕಿ ಉಳಿದಿರುವ ರೈತರ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ ಅನುಮೋದನೆನೀಡುವಂತೆ ಎಲ್ಲಾ ಗ್ರಾಮ ಲೆಕ್ಕಾ ಧಿಕಾರಿಗಳಿಗೆಇಂದೇ ನಿರ್ದೇಶನ ನೀಡುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಸೂಚಿಸಿದರು.
ವಡಗೇರಾ ತಾಲೂಕಿನ ಶಿವನೂರು, ಶಹಾಪುರದ ಅಣಬಿ ಮತ್ತು ರೋಜಾಗ್ರಾಮಗಳ ಸ್ಥಳಾಂತರಕ್ಕೆ ಸೂಕ್ತ ಜಮೀನು ಗುರುತಿಸಿ ವರದಿ ನೀಡಬೇಕು. ಆನೂರು ಕೆ ಗ್ರಾಮಸ್ಥರಿಗೆ ಹಕ್ಕು ಪತ್ರಗಳನ್ನು ಶೀಘ್ರದಲ್ಲೇ ವಿತರಿಸುವಂತೆ ತಹಶೀಲ್ದಾರರಿಗೆ ತಿಳಿಸಿದರು. ಲೋಕೋಪಯೋಗಿ ಇಲಾಖೆ, ಪಂಚಾಯತ್‌ರಾಜ್ ಇಲಾಖೆಗಳು ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಸಂಬಂಧಿ ಸಿದಂತೆ ತೆಗೆದುಕೊಂಡಿರುವ ಕಾಮಗಾರಿಗಳನ್ನು ಗುಣಮಟ್ಟದ ಕಾಮಗಾರಿಗಳನ್ನಾಗಿ ಮಾಡಲು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್, ಸಹಾಯಕ ಆಯುಕ್ತಶಂಕರ ಗೌಡ ಸೋಮನಾಳ್, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ,ಗುರುಮಠಕಲ್ ತಹಶೀಲ್ದಾರ್ ಸಂಗಮೇಶ್‌ಜಿಡಗೆ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಪಂಚಾಯತ್ ರಾಜ್‌ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444