ರಸ್ತೆ ದುರಸ್ತಿ ಗೆ ಕ್ರಮ ಯಾವಾಗ?


Team Udayavani, Jun 20, 2018, 4:48 PM IST

yadagiri1.jpg

„ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ: ಬಾಕಿ ಉಳಿದ ಒಂದು ಕಿ.ಮೀ ರಸ್ತೆಗೆ ಡಾಂಬರೀಕರಣ ಹಾಕುವಲ್ಲಿ ಲೋಕೊಪಯೋಗಿ ಇಲಾಖೆ ಹಿಂದೇಟು ಹಾಕಿದ್ದರಿಂದ ಹಾಳಾದ ರಸ್ತೆಯಲ್ಲಿ ನಿತ್ಯ ವಾಹನಗಳು ಸಂಚರಿಸುವುದು ಕಷ್ಟವಾಗಿದ್ದು,  ಅಲ್ಲದೇ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ, ಬೈಕ್‌ ಸವಾರರಿಗೆ ಸಂಕಟವಾಗಿದೆ.

ಕಕ್ಕೇರಾ ಪಟ್ಟಣದಿಂದ ಬಲಶೆಟ್ಟಿಹಾಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ದುಸ್ಥಿತಿ ಇದು. 9 ಕಿ.ಮೀ ರಸ್ತೆಯಲ್ಲಿ 8 ಕಿ.ಮೀ ರಸ್ತೆಗೆ ಡಾಂಬರೀಕರಣ ಹಾಕಿ ದುರಸ್ತಿಗೊಳಿಸಲಾಗಿದ್ದು, ಚಿಂಚೋಡಿರ ದೊಡ್ಡಿಯಿಂದ ಒಂದು ಕಿ.ಮೀ ರಸ್ತೆ ರಿಪೇರಿ ಮಾಡದೆ ನಿರ್ಲಕ್ಷ್ಯ ವಹಿಸಿದ್ದು, ರಸ್ತೆಗೆ ಅಲ್ಲಲ್ಲಿ ಜಲ್ಲಿಕಲ್ಲು ಎದ್ದು ರಸ್ತೆ ತೀರಾ ಹದಗೆಟ್ಟಿದ್ದು, ಪ್ರಯಾಣಿಕರು ಸಂಚಾರಕ್ಕೆ ನರಕಯಾತನೆ ಅನುಭವಿಸುವಂತಾಗಿದೆ.

ಅಪೆಂಡಿಕ್‌.ಇ. ಅಡಿಯಲ್ಲಿ 2.75 ಕೋಟಿ ರೂ. ವೆಚ್ಚದಲ್ಲಿ ಕಕ್ಕೇರಾದಿಂದ ಚಿಂಚೋಡಿರ ದೊಡ್ಡಿವರೆಗೂ ರಸ್ತೆಗೆ ಡಾಂಬರೀಕರಣ ಹಾಕಿ ಅಭಿವೃದ್ಧಿಪಡಿಸಲಾಗಿದೆ. ಬಾಕಿ ಇದ್ದ ಒಂದು ಕಿ.ಮೀ ರಸ್ತೆಗೆ ಇಲ್ಲಿಯವರೆಗೂ ಡಾಂಬರೀಕರಣ ಹಾಕುವ ಗೋಜಿಗೆ ಸಂಬಂಧಿಸಿದ ಇಲಾಖೆ ಮುಂದಾಗಿಲ್ಲ.

ಈ ಸಮಸ್ಯೆ ಅನೇಕ ದಿನಗಳಿಂದ ವಾಹನ ಸವಾರರು ಎದುರಿಸುತ್ತಿದ್ದಾರೆ. ಅಧಿಕಾರಿಗಳಿಗೆ ಕೇಳಿದರೆ, ರಸ್ತೆಗೆ ಅನುದಾನ ಇಲ್ಲ ಎಂದು ಸಬೂಬು ಹೇಳುತ್ತಾರೆ ಎಂದು ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ನಿರ್ವಹಣೆ ವೆಚ್ಚ ಎಲ್ಲಿ?: ಬಾಕಿ ಉಳಿದ ರಸ್ತೆಗೆ ಅನುದಾನ ಇಲ್ಲದೆ ಹಾಗೇ ಬಿಡಲಾಗಿದೆಯಾದರೂ ಇದಕ್ಕಾಗಿ ಇದ್ದ
ನಿರ್ವಹಣೆ ವೆಚ್ಚದಲ್ಲಿ ಡಾಂಬರೀಕರಣ ಹಾಕಿ ದುರಸ್ತಿ ಗೊಳಿಸಬಹುದಾಗಿತ್ತು. ಇದಕ್ಕೂ ನಿಷ್ಕಾಳಜಿ ತೋರಲಾಗಿದೆ.

ಹಾಗಾದರೆ ರಸ್ತೆಗೆ ಸಂಬಂಧಿಸಿದ ನಿರ್ವಹಣ ವೆಚ್ಚ ಏನು ಮಾಡಲಾಗಿದೆ ಎಂದು ಜನರ ಪ್ರಶ್ನೆಯಾಗಿದೆ. ನಿರ್ವಹಣೆ ಅನುದಾನದಲ್ಲಿ ಗುಂಡಿ ಬಿದ್ದ ರಸ್ತೆಗೆ ತಾತ್ಕಾಲಿಕವಾಗಿ ಡಾಂಬರೀಕರಣ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿತ್ತು. ಇದ್ಯಾವುದು ಗಮನಹರಿಸಿಲ್ಲ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಅಪೂರ್ಣಗೊಂಡ 1 ಕಿ.ಮೀ ರಸ್ತೆಗೆ ತಾತ್ಕಾಲಿಕವಾಗಿ ರಿಪೇರಿ ಮಾಡಲಿ ಎಂದು ಪ್ರಯಾಣಿಕರ ಒತ್ತಾಯವಾಗಿದೆ.

ಸದ್ಯ ಕ್ರಿಯಾಯೋಜನೆಯಡಿ ಬಾಕಿ ಉಳಿದ ನೂರು ಮೀಟರ್‌ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಇದಕ್ಕಾಗಿ ಅಂದಾಜು ವರದಿ ತಯಾರಿಸಲಾಗಿದ್ದು, ಅನುಮೊದನೆಯೊಂದಿಗೆ ಡಾಂಬರೀಕರಣ ರಸ್ತೆ ನಿರ್ಮಿಸಲಾಗುವುದು. 

ಸುಭಾಶ್ಚಂದ್ರ. ಎಇಇ

ರಸ್ತೆ ಹದಗೆಟ್ಟಿದರಿಂದ ಸಂಚಾರಕ್ಕೆ ತೊಂದರೆ ಅನುಭವಿಸಬೇಕಾಗಿದೆ. ರಾತ್ರಿ ವೇಳೆ ಅಪಾಯವೇ ಜಾಸ್ತಿ. ಹೀಗಾಗಿ ಶೀಘ್ರ ರಸ್ತೆ ಅಭಿವೃದ್ಧಿಪಡಿಸಬೇಕು.

ಹನುಮಂತ, ವಾಹನ ಸವಾರ

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.