ಹೊರ ಜಿಲ್ಲೆಗಳಿಂದ ಬರುವವರಿಗೆ ಕ್ವಾರಂಟೈನ್‌


Team Udayavani, May 9, 2021, 9:35 PM IST

9-15

ಯಾದಗಿರಿ: ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಜನರಿಗೆ ಚೆಕ್‌ಪೋಸ್ಟ್‌ಗಳಲ್ಲಿ ಕೋವಿಡ್‌ ರ್ಯಾಪಿಡ್‌ ಟೆಸ್ಟ್‌ ನಡೆಸಿ, ಕ್ವಾರಂಟೈನ್‌ಲ್ಲಿ ಇಡಲಾಗುವುದು ಎಂದು ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾ. ಆರ್‌ ತಿಳಿಸಿದರು. ನಗರಸಭೆ, ಪುರಸಭೆ ಅ ಧಿಕಾರಿಗಳು ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅ ಧಿಕಾರಿಗಳೊಂದಿಗೆ ಶನಿವಾರ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ 20 ಮೊಬೈಲ್‌ ಕೋವಿಡ್‌ ಸ್ವಾಬ್‌ ಮಾದರಿ ಸಂಗ್ರಹ ತಂಡ, ಆದ್ಯತೆ ಮೇರೆಗೆ ಹೊರಜಿಲ್ಲೆಯಿಂದ ಬರುವ ಜನರಿಗೆ ಕೋವಿಡ್‌ ಟೆಸ್ಟ್‌ ಮಾಡಬೇಕು. ಕೋವಿಡ್‌ ಪಾಸಿಟಿವ್‌ ವರದಿ ಬಂದವರಿಗೆ ಕ್ವಾರಂಟೈನ್‌ ಸೆಂಟರ್‌ ಅಥವಾ ಕೋವಿಡ್‌ ಕೇರ್‌ ಸೆಂಟರ್‌ಗೆ ಕಳುಹಿಸಲಾಗುವುದು. ನೆಗೆಟಿವ್‌ ವರದಿ ಬಂದವರಿಗೆ ಅವರವರ ಮನೆಗಳಿಗೆ ಕಳುಹಿಸಲಾಗುವುದು ಎಂದು ಹೇಳಿದರು.

ಜಿಲ್ಲೆಗೆ ಮರಳುವ ಜನರನ್ನು ಹಿಂದುಳಿದ ವರ್ಗಗಳ ಇಲಾಖೆಯ ಬಿಸಿಎಂ ಹಾಸ್ಟೆಲ್‌, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗ‌ಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮುಂತಾದವುಗಳನ್ನು ಗುರುತಿಸಿ, ಜನರನ್ನು ಕ್ವಾರಂಟೈನ್‌ನಲ್ಲಿಡಬೇಕು. ಇಲ್ಲಿ ಇರಿಸಲಾಗುವ ಜನರಿಗೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಅವರು ತಿಳಿಸಿದರು.

ತಹಶೀಲ್ದಾರ್‌, ತಾಪಂ ಕಾರ್ಯನಿರ್ವಹಣಾ ಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಆಯಾ ಇಲಾಖೆ ಅಧಿ ಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. ಚೆಕ್‌ ಪೋಸ್ಟ್‌ ನಿಂದ ಕ್ವಾರಂಟೈನ್‌ ಕೇಂದ್ರಗಳಿಗೆ ಜನರನ್ನುಕರೆದೊಯ್ಯಲು ಬಸ್‌ ವ್ಯವಸ್ಥೆ ಮಾಡಬೇಕೆಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿ ಕಾರಿಗಳಿಗೆ ಅವರು ಸೂಚಿಸಿದರು.

ಗ್ರಾಮ ಮಟ್ಟದಲ್ಲಿರುವ ಕಾರ್ಯಪಡೆ (ಟಾಸ್ಕ್ ಫೋರ್ಸ್‌) ಸಮಿತಿ ಹಳ್ಳಿಗಳಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಾಗಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್‌ ಸರಪಳಿ ತುಂಡರಿಸಬೇಕು ಎಂದು ಅವರು ಸಲಹೆ ನೀಡಿದರು. ಮೇ 10ರಿಂದ 24ವರೆಗೆ ಕರ್ಫ್ಯೂ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜಿಲ್ಲಾಸ್ಪತ್ರೆಯಲ್ಲಿ ಕೂಡಲೇ 10 ವೆಂಟಿಲೇಟರ್‌ ಅಳವಡಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಡೆಕ್ಕ ಕಿಶೋರ್‌ ಬಾಬು, ಪ್ರಕಾಶ್‌. ಜಿ. ರಜಪೂತ್‌, ಶಂಕರ್‌ಗೌಡ ಸೋಮನಾಳ, ಇಂದುಮತಿ ಕಾಮಶೆಟ್ಟಿ ಇದ್ದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

1-sadsad

CHC; ದಿಢೀರ್ ಭೇಟಿ ನೀಡಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕಂದಕೂರ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗರೆಡ್ಡಿ

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

Yadagiri; ರಾಜ್ಯ ಸರ್ಕಾರದ ಜಾತಿಗಣತಿ ಅವೈಜ್ಞಾನಿಕ: ಜಯ ಮೃತ್ಯುಂಜಯ ಸ್ವಾಮೀಜಿ

ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

Yadagiri; ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.