Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Team Udayavani, May 3, 2024, 4:39 PM IST
ಯಾದಗಿರಿ: ಹುಣಸಗಿ ತಾಲೂಕಿನ ರಾಯನಪಾಳ್ಯ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪರಸ್ಪರರ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ಈ ಕಲ್ಲು ತೂರಾಟದಲ್ಲಿ ಆರೇಳು ಜನರಿಗೆ ಗಾಯಗಳಾಗಿವೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಯಕರ್ತರನ್ನು ಬಂಧಿಸಿ ವಾಹನದಲ್ಲಿ ಕರೆದುಕೊಂಡು ಹೊಗುತ್ತಿದ್ದ ಪೊಲೀಸ್ ವಾಹನವನ್ನು ಬಿಜೆಪಿ ಅಭ್ಯರ್ಥಿ ರಾಜುಗೌಡ ತಡೆದು ಅಮಾಯಕರನ್ನು ಬಂಧಿಸಿದ್ದೀರಿ, ಈ ಕೂಡಲೆ ಬಿಡುಗಡೆ ಮಾಡುವಂತೆ ವಾಹನದ ಮುಂದೆ ಮಲಗುವ ಮೂಲಕ ಈ ಘಟನೆಯನ್ನು ಖಂಡಿಸಿದ್ದಾರೆ.
ಪರೀಕ್ಷೆ ಬರೆಯಲು ಹೊಗುತ್ತಿದ್ದ ಯುವಕರನ್ನು ಬಂಧಿಸಿದ್ದಾರೆಂದು ಅಭ್ಯರ್ಥಿ ರಾಜುಗೌಡ ಆರೋಪಿಸಿದ್ದಾರೆ. ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.