ಗಡಿ ಜಿಲ್ಲೆ ಬಿಡದ ಮಹಾ ನಂಟು

ಗುರುವಾರ ಮತ್ತೆ 66 ಜನರಲ್ಲಿ ಸೋಂಕು ಗುಣಮುಖರಾದ 99 ಜನ ಮನೆಗೆ

Team Udayavani, Jun 12, 2020, 12:11 PM IST

12-June-06

ಯಾದಗಿರಿ: ಗಡಿ ಜಿಲ್ಲೆಗೆ ಮಹಾರಾಷ್ಟ್ರ ನಂಟಿನಿಂದ ಮಹಾಮಾರಿ ಕೋವಿಡ್ ಅಟ್ಟಹಾಸ ಇನ್ನೂ ಮುಂದುವರಿದಿದೆ. ಗುರುವಾರ 66 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 735ಕ್ಕೆ ಏರಿಕೆಯಾಗಿದೆ. ಇದರ ಜತೆಗೆ ಗುರುವಾರ 99 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಆಶಾದಾಯಕ ಬೆಳವಣಿಗೆಯಾಗಿದೆ.

ಬುಧವಾರ 27 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಗುರುವಾರ 10 ವರ್ಷದೊಳಗಿನ 9 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ ಗುರುಮಠಕಲ್‌ ತಾಲೂಕಿನ ವಡವಟ್‌ ಒಂದೇ ಗ್ರಾಮದ ಐದು ಮಕ್ಕಳಿಗೆ ಕೋವಿಡ್ ವಕ್ಕರಿಸಿದ್ದು, 5 ವರ್ಷದ ಬಾಲಕಿ (ಪಿ-6059), 7 ವರ್ಷದ ಬಾಲಕಿ (ಪಿ-6054) ಮತ್ತು 5 ವರ್ಷದ ಬಾಲಕಿ (ಪಿ-6055) 9 ವರ್ಷದ ಬಾಲಕಿ (ಪಿ-6057), ತುರುಕನ್‌ದೊಡ್ಡಿಯ 6 ವರ್ಷದ ಬಾಲಕಿ (ಪಿ-6061) ಸೇರಿದಂತೆ 29 ಪುರುಷರು ಹಾಗೂ 37 ಮಹಿಳೆಯರಲ್ಲಿ ಕೋವಿಡ್ ಪಾಸಿಟಿವ್‌ ಪತ್ತೆಯಾಗಿದೆ.

99 ಜನರು ಗುಣಮುಖ: ಜಿಲ್ಲೆಯಲ್ಲಿ ಕೋವಿಡ್‌-19 ಖಚಿತಪಟ್ಟ 735 ವ್ಯಕ್ತಿಗಳ ಪೈಕಿ ಗುರುವಾರ 99 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜೂನ್‌ 11ರವರೆಗೆ ಒಟ್ಟು 218 ಜನ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಉಳಿದ 536 ಪ್ರಕರಣಗಳು ಸಕ್ರಿಯವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ.

ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಗುರುವಾರದ 210 ನೆಗೆಟಿವ್‌ ವರದಿ ಸೇರಿ ಈವರೆಗೆ 17,950 ಮಾದರಿಗಳ ವರದಿ ನೆಗೆಟಿವ್‌ ಬಂದಿವೆ. 242 ಜನರ ಹೊಸ ಮಾದರಿ ಸೇರಿ 807 ಮಾದರಿಗಳ ವರದಿ ಬರಬೇಕಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1160 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2557 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಜಿಲ್ಲೆಯಲ್ಲಿ 36 ಕಂಟೈನ್ಮೆಂಟ್‌ ಝೋನ್‌ ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 144 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಕೊರೊನಾ ಕೇರ್‌ ಸೆಂಟರ್‌ನಲ್ಲಿ 113 ಜನರನ್ನು, ಸುರಪುರ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 100 ಮತ್ತು ಏಕಲವ್ಯ ಕೋವಿಡ್ ಕೇರ್‌ ಸೆಂಟರ್‌ನಲ್ಲಿ 112 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 30 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಒಟ್ಟು 1505 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.