ಖಾತ್ರಿಯಲ್ಲಿ ಜಿಲ್ಲೆ ಪ್ರಥಮ

ಭೂಮಿ ಯೋಜನೆ ಜಿಲ್ಲೆಗೆ 2ನೇ ಸ್ಥಾನ ಅಧಿಕಾರಿಗಳು-ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ

Team Udayavani, Mar 18, 2020, 11:54 AM IST

18-March-11

ಯಾದಗಿರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಉತ್ತಮ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿರುವ ಗಡಿ ಜಿಲ್ಲೆ ಯಾದಗಿರಿ ಕಂದಾಯ ಇಲಾಖೆಯ ಭೂಮಿ ಯೋಜನೆಯಡಿ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವದಿನಗಳ ಸೃಜನೆ, ಸಕಾಲಿಕ ಕೂಲಿ ಪಾವತಿ, ಕಾಮಗಾರಿಗಳ ಪೂರ್ಣಗೊಳಿಸುವಿಕೆ, ಅನುಷ್ಠಾನ ಇಲಾಖೆಗಳ ಸಾಧನೆ, ಜಿಯೊ ಟ್ಯಾಗ್‌ ಮತ್ತು ಕೂಲಿ ಸಾಮಗ್ರಿ ವೆಚ್ಚದ ಅನುಪಾತ 40:60ರ ಗಡಿ ದಾಟದೆ ಇರುವ ಹಲವು ಮಾನದಂಡಗಳ ಆಧಾರದಲ್ಲಿ ಜಿಲ್ಲೆ ಎಲ್ಲ ಮಾನದಂಡ ಪಾಲಿಸಿರುವುದು ಮೌಲ್ಯ ಮಾಪನದಲ್ಲಿ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರು ಮನರೇಗಾ ಯೋಜನೆಯಡಿ ರಾಜ್ಯದ ಎಲ್ಲ ಜಿಲ್ಲೆಗಳ ಮೌಲ್ಯಮಾಪನ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯು 90.30 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತ ಅನಿರುದ್ಧ ಶ್ರವಣ ಅವರು ಸಾಧನೆಗೆ ಜಿಪಂ ಸಿಇಓ ಶಿಲ್ಪಾ ಶರ್ಮಾ ಅವರನ್ನು ಅಭಿನಂದಿಸಿದ್ದಾರೆ. ಭೂಮಿ ಯೋಜನೆಯಡಿ ಸಾರ್ವಜನಿಕರಿಂದ ಜಿಲ್ಲೆಯಲ್ಲಿ ಫೆಬ್ರವರಿ-2020ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ 7066 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ 3.16 ಸಿಗ್ಮಾ ಮೌಲ್ಯ ಪಡೆದಿರುವುದರಿಂದ ವಿಲೇವಾರಿ ಸೂಚ್ಯಂಕದ ಪ್ರಕಾರ ಯಾದಗಿರಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಫೆಬ್ರವರಿ ಮಾಹೆಯಲ್ಲಿ ದ್ವೀತಿಯ ಸ್ಥಾನ ಪಡೆದಿದೆ. ಭೂಮಿ ಮತ್ತು ಯುಪಿಒಆರ್‌ ಪದನಿಮಿತ್ತ ನಿರ್ದೇಶಕರು ಹಾಗೂ ಭೂಮಾಪನ ಇಲಾಖೆ ಆಯುಕ್ತರು ಯಾದಗಿರಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಅವರಿಗೆ ಶ್ಲಾಘಿಸಿ ಅಭಿನಂದನಾ ಪತ್ರ ನೀಡಿದ್ದಾರೆ.

ಜಿಲ್ಲೆಯ ಎಲ್ಲ ತಹಶೀಲ್ದಾರ್‌ ಕಚೇರಿ ಒಳಗೊಂಡು ವಿವಿಧ ಭೂಮಿ ಸೇವೆಗಳನ್ನು ಸೇರಿ ಒಟ್ಟು 7066 ಅರ್ಜಿಗಳನ್ನು ನಿಗದಿತ ಕಾಲಾವಧಿಯಲ್ಲಿ ವಿಲೇಗೊಳಿಸಿ ರಾಜ್ಯ ಮಟ್ಟದಲ್ಲಿ 3.16 ಸಿಗ್ಮಾ ಮೌಲ್ಯ ಪಡೆದಿದೆ. 3.01702 ಅರ್ಜಿಗಳ ವಿಲೇವಾರಿ ಸೂಚ್ಯಂಕದ ಪ್ರಕಾರ ಸ್ವೀಕೃತವಾದ ಅರ್ಜಿಗಳನ್ನು ಶೀಘ್ರ ವಿಲೇ ಮಾಡಿ ಫೆಬ್ರವರಿ 2020ರ ಮಾಹೆಯಲ್ಲಿ ಯಾದಗಿರಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ದ್ವೀತಿಯ ಸ್ಥಾನ ಪಡೆದಿರುವುದಕ್ಕೆ ಜಿಲ್ಲಾಧಿಕಾರಿಗಳು ಸಂತಸಗೊಂಡಿದ್ದಾರೆ.

ಇನ್ನು ಜಿಲ್ಲೆಯ ತಹಶೀಲ್ದಾರರು, ತಾಲೂಕು ಕಚೇರಿ ಅಧಿಕಾಳು, ಸಿಬ್ಬಂದಿ ಕಾರ್ಯ ಸಾಧನೆ ಕಾರಣವಾಗಿದೆ. ಅಲ್ಲದೇ ಜಿಲ್ಲಾಡಳಿತದ ಪರವಾಗಿ ಸಹಾಯಕ ಆಯುಕ್ತರು, ಜಿಲ್ಲೆಯ ಆಯಾ ತಾಲೂಕಿನ ಭೂಮಿ ಕೋಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿ ಬಗ್ಗೆ ಜಿಲ್ಲಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಕೂಡ ಇದೇ ರೀತಿ ಪ್ರಗತಿ ಸಾಧಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದಲ್ಲಿ ಆನ್ ಲೈನ್ ತರಗತಿ: ದಕ್ಷಿಣಕನ್ನಡ ಡಿ.ಸಿ

ಮಂಗಳೂರು : ಶಾಲೆಗಳಲ್ಲಿ 5ಕ್ಕಿಂತ ಹೆಚ್ಚು ಪ್ರಕರಣ ಪತ್ತೆಯಾದರೆ ಭೌತಿಕ ತರಗತಿ ರದ್ದು ; ಡಿ.ಸಿ

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

ಹಾವೇರಿ: ತಾನೇ ಹಚ್ಚಿದ ಬೆಂಕಿಯಲ್ಲಿ ಆಕಸ್ಮಿಕವಾಗಿ ಬಿದ್ದು ರೈತ ಸಾವು

Covid test

ರಾಜ್ಯದಲ್ಲಿ ಇಂದೂ 40 ಸಾವಿರ ದಾಟಿದ ಕೋವಿಡ್ ಕೇಸ್ : 21 ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

ನೀರಿನ ಸಂಪ್‌ ಕ್ಲೀನ್‌ ಮಾಡುವಾಗ ಕರೆಂಟ್ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವು

nirani

ನನ್ನ ವಿರುದ್ಧ ಹೈಕಮಾಂಡ್ ಗೆ ಸಿಎಂ ದೂರು ನೀಡಲು ಸಾಧ್ಯವೇ ಇಲ್ಲ: ಸಚಿವ ನಿರಾಣಿ

CM @ 2

ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ : ಈ ವಾರ ಸಿಎಂ ದೆಹಲಿಗೆ ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22service

ಸೇವಾ ಭದ್ರತೆಗಾಗಿ ಹೋರಾಟ

12goat

ಜಾತ್ರೆ: 188 ಕುರಿ-ಆಡುಮರಿ ವಶ

24morden

ತೊಗರಿ ಬೆಳೆಯಲ್ಲಿ ಆಧುನಿಕ ಕೃಷಿ ತಾಂತ್ರಿಕತೆ ಬಳಸಿ

23housing

ವಸತಿ ಫಲಾನುಭವಿ ಆಯ್ಕೆಗೆ ಮಾರ್ಗಸೂಚಿ ಪಾಲಿಸಿ

22youth

ವಿವೇಕಾನಂದರ ಚಿಂತನೆ ಯುವ ಜನಾಂಗಕ್ಕೆ ಸ್ಪೂರ್ತಿ: ಪಾಟೀಲ್‌

MUST WATCH

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

ಹೊಸ ಸೇರ್ಪಡೆ

1-fffdf

ಡಾ| ಸೋಮಶೇಖರ ಇಮ್ರಾಪೂರ ಅವರಿಗೆ 2022ನೇ ಸಾಲಿನ ಅಂಬಿಕಾತನಯದತ್ತ ಪ್ರಶಸ್ತಿ

1-asewewewe

ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್‍ಸಿಪಿ; ಕಾಂಗ್ರೆಸ್ ಇಲ್ಲ

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

1-dsda

ಮಸೀದಿಯ ಬಗ್ಗೆ ವಿವಾದಿತ ಹೇಳಿಕೆ : ಕಾಳಿ ಸ್ವಾಮೀಜಿಗೆ ಜಾಮೀನು

ಮೆಟ್ರಿಕ್ ನಂತರ : ವಿದ್ಯಾರ್ಥಿನಿಲಯಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮೆಟ್ರಿಕ್ ನಂತರ : ವಿದ್ಯಾರ್ಥಿನಿಲಯಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.