ಯಾದಗಿರಿ: 15ರಿಂದ ರೈತ ಬಂಧು ಅಭಿಯಾನ

ಗ್ರಾಪಂಗೆ ಕನಿಷ್ಠ 25 ಎರೆಹುಳು ತೊಟ್ಟಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Team Udayavani, Aug 13, 2021, 5:38 PM IST

Yadgir

ಯಾದಗಿರಿ: ಎರೆಹುಳು ರೈತನ ಮಿತ್ರ. ರೈತನಂತೆ ಭೂಮಿಯಲ್ಲಿ ನಿರಂತರ ಕೆಲಸ ಮಾಡುವ ಜೀವಿ. ಮಣ್ಣಿನ ಫಲವತ್ತತೆ ಕಾಪಾಡುವಲ್ಲಿ ಎರೆಹುಳು ಪ್ರಮುಖ ಪಾತ್ರವಹಿಸುತ್ತದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೆ„ ಹೇಳಿದರು.

ತಾಪಂ ಸಾಮರ್ಥ್ಯಸೌಧದಲ್ಲಿ ಯಾದಗಿರಿ ಮತ್ತು ಗುರುಮಠಕಲ್‌ ತಾಪಂ ವತಿಯಿಂದ ಆ.15ರಂದು ಆರಂಭಗೊಳ್ಳುವ ರೈತ ಬಂಧು ಹಾಗೂ ಪೌಷ್ಟಿಕ ಕೈತೋಟ ಅಭಿಯಾನದ ಕುರಿತು ನರೇಗಾ ತಾಲೂಕು ಅನುಷ್ಠಾನಾ ಧಿಕಾರಿ, ಪಿಡಿಒ, ತಾಂತ್ರಿಕ ಸಹಾಯಕರಿಗಾಗಿ ಹಮ್ಮಿಕೊಂಡ ತರಬೇತಿಯಲ್ಲಿ ಮಾತನಾಡಿದರು.

ಕೃಷಿಯಲ್ಲಿ ಹೆಚ್ಚು ಇಳುವರಿ ಪಡೆಯಲು ಎರೆಹುಳು ಗೊಬ್ಬರ ತಯಾರಿಕೆಗೆ ರೈತರಲ್ಲಿ ಉತ್ತೇಜನ ನೀಡಲು ಜಿಲ್ಲಾದ್ಯಂತ ಆ.15ರಿಂದ ಅ.15ರ ರೈತ ಬಂಧು ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶೇ.60 ಕೃಷಿ ಸಂಬಂ ಧಿತ ಚಟುವಟಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿದ್ದು, ರೈತ ಬಂಧು ಅಭಿಯಾನವು ರೈತರಲ್ಲಿ ಉತ್ಪಾದನೆ ವೆಚ್ಚ ಕಡಿಮೆಗೊಳಿಸಿ ಆರ್ಥಿಕ ಸದೃಢರನ್ನಾಗಿ ಮಾಡಿ ಮಳೆಗಾಲದಲ್ಲಿ ನಿರಂತರ ಉದ್ಯೋಗ ನೀಡುವ ಗುರಿ ಹೊಂದಿದೆ.

ರಾಸಾಯನಿಕ ಗೊಬ್ಬರ ಬಳಕೆಯಿಂದಾಗುವ ಸಾಧಕ ಬಾಧಕಗಳ ಕುರಿತು ರೈತರಲ್ಲಿ ಅರಿವು ಮೂಡಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ರೈತರು ಎರೆಹುಳು ಗೊಬ್ಬರ ತಯಾರಿಕೆ ಉತ್ತೇಜಿಸುವ ದೃಷ್ಟಿಯಿಂದ ಮಹಾತ್ಮಾ ಗಾಂರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತ ಬಂಧು ಅಭಿಯಾನ ನಡೆಯುತ್ತಿದ್ದು ಅಭಿಯಾನದಡಿ ಪ್ರತಿ ಗ್ರಾಪಂಗೆ ಕನಿಷ್ಠ 25 ಎರೆಹುಳು ತೊಟ್ಟಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

75ನೇ ಸ್ವಾತಂತ್ರ್ಯೋತ್ಸವದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಆ.15ರಂದು ತಾಲೂಕು ಹಾಗೂ ಗ್ರಾಪಂಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ ನೇತೃತ್ವದಲ್ಲಿ ರೈತ ಬಂಧು ಅಭಿಯಾನಕ್ಕೆ ಎಲ್ಲಾ ಗಾಪಂಗಳಲ್ಲಿ ಚಾಲನೆ ನೀಡಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ ಇಲಾಖೆಯ ವಿಷಯ ತಜ್ಞ ಗಣಪತಿ ಮಾತನಾಡಿದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ, ರಾಮಚಂದ್ರ ಬಸೂದೆ, ಆರ್‌ಎಫ್‌ಒ ಸೋಮರಾಯ, ತಾಲೂಕು ಆರೋಗ್ಯಾಧಿಕಾರಿ ಡಾ| ಹಣಮಂತರಡ್ಡಿ, ಅಭಿಯಾನ ಅನುಷ್ಠಾನದ ತಾಲೂಕು ಅಧಿಕಾರಿ, ನರೇಗಾ ಯೋಜನೆಯ ವಿಷಯ ನಿರ್ವಾಹಕರು ಹಾಗೂ ವಿವಿಧ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.