21ರಿಂದ ಕಾನೂನು ಸಾಕ್ಷರತಾ ರಥ ಸಂಚಾರ: ಶಿವನಗೌಡ

Team Udayavani, Jan 19, 2020, 3:33 PM IST

ಯಾದಗಿರಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 4 ದಿನಗಳಂತೆ ಜ.21ರಿಂದ ಫೆ.7ರ ವರೆಗೆ ಸಂಚರಿಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವನಗೌಡ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನ ಜಿಲ್ಲೆಯಲ್ಲಿ ಸಂಚರಿಸುವ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಯಾದಗಿರಿ ತಾಲೂಕಿನಲ್ಲಿ ಜ.21ರಿಂದ 24ರ ವರೆಗೆ ಸಾಕ್ಷರತಾ ರಥ ಸಂಚರಿಸಲಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಿ ಗ್ರಾಮಾಂತರ ಪ್ರದೇಶದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಾಹನ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ದಿನಕ್ಕೆ ಮೂರು ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಕಾರ್ಯಕ್ರಮದಲ್ಲಿ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆ ಪ್ರಚಾರ ಮಾಡಬೇಕು ಎಂದು ಸೂಚಿಸಿದರು. ಕಾರ್ಯಕ್ರಮಗಳಲ್ಲಿ ಜನನ ಮರಣ ನೋಂದಣಿ, ಮಕ್ಕಳ ಹಕ್ಕುಗಳು, ಕಡ್ಡಾಯ ಶಿಕ್ಷಣದ ಹಕ್ಕು, ಉತ್ತರಾ ಧಿಕಾರತ್ವ, ಗ್ರಾಪಂ ಆಸ್ತಿ ಸಂರಕ್ಷಣೆ, ಬಾಲ ಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹ ನಿಷೇಧ, ವಿಕಲಚೇತನರ ಕಾಯ್ದೆ, ಹಿರಿಯ ನಾಗರಿಕರ ಕಾಯ್ದೆ ಸೇರಿದಂತೆ ಮುಂತಾದ ವಿಷಯಗಳ ಕುರಿತು ಉಪನ್ಯಾಸ ನೀಡಬೇಕು ಎಂದು ಹೇಳಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ. ಸಾಲಮಂಟಪಿ, ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಿವಿಲ್‌ ನ್ಯಾಯಾಧೀಶ ಲೋಕೇಶ್‌ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ ಉಪಸ್ಥಿತರಿದ್ದರು.

ಡಿವೈಎಸ್‌ಪಿ ಯು. ಶರಣಪ್ಪ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯರಾದ ಸಿ.ಎಸ್‌. ಮಾಲಿಪಾಟೀಲ್‌, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ