ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ

ಕಡ್ಡಾಯ ಆಚರಣೆಗೆ ತೀರ್ಮಾನಮೆರವಣಿಗೆಯಲ್ಲಿ ಕುಡಿಯುವ ನೀರು, ಶಾಂತಿ-ಸುವ್ಯವಸ್ಥೆಗೆ ಕ್ರಮ

Team Udayavani, Jan 26, 2020, 12:15 PM IST

ಯಾದಗಿರಿ: ಜಿಲ್ಲಾಡಳಿತ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವವನ್ನು ಫೆ.1ರಂದು ಬೆಳಗ್ಗೆ 11ಕ್ಕೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿ ಕಾರಿ ಪ್ರಕಾಶ್‌ ಜಿ.ರಜಪೂತ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತ್ಯುತ್ಸವ ನಿಮಿತ್ತ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಶ್ರದ್ಧಾ, ಭಕ್ತಿಯೊಂದಿಗೆ ಮಡಿವಾಳ ಮಾಚಿದೇವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲೂಕು ಮಟ್ಟದಲ್ಲಿಯೂ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಸೂಚಿಸಿದರು.

ಅಂದು ಬೆಳಗ್ಗೆ 9 ಗಂಟೆಗೆ ಯಾದಗಿರಿ ನಗರದಿಂದ ಜಿಲ್ಲಾಡಳಿತ ಭವನದವರೆಗೆ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು ಎಂದು ಮಡಿವಾಳ ಮಾಚಿದೇವ ಜಯಂತ್ಯುತ್ಸವ ಸಂಘದವರು ಸಭೆಯಲ್ಲಿ ತಿಳಿಸಿದರು. ಇದಕ್ಕೆ ಸಮ್ಮತಿಸಿದ ಅಪರ ಜಿಲ್ಲಾಧಿಕಾರಿಗಳು ಮೆರವಣಿಗಾಗಿ ಸಂಘಕ್ಕೆ ಒಂದು ದಿನ ಮುಂಚಿತವಾಗಿ ಟ್ರ್ಯಾಕ್ಟರ್‌ ನೀಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಸ್ಥಳೀಯ ನುರಿತ ಕಲಾತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಯಂತಿಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು. ಕಾರ್ಯಕ್ರಮದ ನೋಡಲ್‌ ಅಧಿಕಾರಿಯಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅ ಧಿಕಾರಿಗಳನ್ನು ನೇಮಕ ಮಾಡಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಠಾಕೂರ್‌ ಸಭೆಯ ನಡಾವಳಿ ಓದಿದರು. ಈ ಸಂದರ್ಭದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ದತ್ತಪ್ಪ ಕಲ್ಲೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜದ ಮುಖಂಡರಾದ ಮಹಾದೇವಪ್ಪ ಯಲಸತ್ತಿ, ಮಡಿವಾಳಪ್ಪ ಬಿಜಾಸ್ಪೂರ, ಶ್ರೀಶೈಲ ಮಡಿವಾಳ, ನಾಗಪ್ಪ ಮೊಗದಂಪುರ, ನಾಗಪ್ಪ ಸೂಗೂರ, ಮರಗಪ್ಪ ಸಾಲಿಕೇರಿ, ಮಲ್ಲಿಕಾರ್ಜುನ ಮಡಿವಾಳ, ರಮೇಶ ಮಡಿವಾಳ, ಚನ್ನಪ್ಪ ಮಡಿವಾಳ, ಮಾರೆಣ್ಣ ಮಡಿವಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮಡಿವಾಳ ಮಾಚಿದೇವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಜಯಂತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯವಸ್ಥೆ ಮಾಡಿಕೊಳ್ಳಲಾಗುವುದು. ಕಾನೂನು ಉಲ್ಲಂಘನೆಯಾಗುವ ಯಾವುದೇ ಚಟುವಟಿಕೆಗಳು ನಡೆದರೂ ಕ್ರಮ ಕೈಗೊಳ್ಳಲಾಗುವುದು.
ಪ್ರಕಾಶ ರಜಪೂತ,
ಅಪರ ಜಿಲ್ಲಾಧಿಕಾರಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ