
ದೋರನಹಳ್ಳಿ ಮಹಾಂತ ಶಿವಾಚಾರ್ಯರು ಹೃದಯಾಘಾತದಿಂದ ನಿಧನ
ಬೆಂಗಳೂರಿನಿಂದ ಬರುವಾಗ ಹೃದಯಾಘಾತ ; ಹಿರೇಮಠದ ಮುಂದೆ ಭಕ್ತರ ಆಕ್ರಂದನ
Team Udayavani, Jan 12, 2023, 8:12 AM IST

ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.
ಮುಂದಿನ ತಿಂಗಳು ಅವರ 25ನೇ ವರ್ಷದ ಪಟ್ಟಾಧಿಕಾರ ಕಾರ್ಯಕ್ರಮ ಹಿನ್ನೆಲೆ ಗಣ್ಯರಿಗೆ ಆಮಂತ್ರಣ ನೀಡಲು ಬೆಂಗಳೂರಿಗೆ ತೆರಳಿದ್ದರು. ಎಲ್ಲರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ವಾಪಾಸ್ ಆಗುವ ವೇಳೆ ರೈಲು ನಿಲ್ದಾಣದಲ್ಲಿಯೇ ಶ್ರೀಗಳಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣಕ್ಕೆ ಪ್ರಥಮ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ ಎನ್ನಲಾಗಿದೆ.
ಕೂಡಲೇ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಯಿತು. ಆದರೆ ಅಷ್ಟೊತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎನ್ನಲಾಗಿದೆ.
ಶ್ರೀಗಳ ಅಗಲಿಕೆಯಿಂದ ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಭಕ್ತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಶ್ರೀಗಳು ಇನ್ನಿಲ್ಲಎಂಬ ಸುದ್ದಿ ತಿಳಿದ ಭಕ್ತರು ಗ್ರಾಮದ ಹಿರೇಮಠ ಮುಂದೆ ಜಮಾವಣೆಗೊಂಡಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಶ್ರೀಗಳ ಅಗಲಿಕೆಯಿಂದ ಭಕ್ತಾಧಿಗಳು ಕಂಗಾಲಾಗಿದ್ದಾರೆ.
ರೈಲು ನಿಲ್ದಾಣದಲ್ಲಿ ಅವರ ಜೊತೆ ಭಕ್ತರಾದ ರಾಯಪ್ಪಗೌಡ ದರ್ಶನಾಪುರ ಮತ್ತು ಷಣ್ಮುಖಪ್ಪ ಕಕ್ಕೇರಿ ಇದ್ದರು. ಶ್ರೀಗಳಿಗೆ ಹೃದಯಾಘಾತ ಆಗಿರುವುದನ್ನು ಕಂಡು ಪರದಾಡಿದ್ದಾರೆ. ಪ್ರಥಮ ಚಿಕಿತ್ಸೆಗೆ ಮುಂದಾದರೂ ಯಾವುದೇ ಪ್ರಯೋಜನವಾಗದೆ ಕಂಗಾಲಾಗಿ ಕಂಬನಿ ಮಿಡಿದಿದ್ದಾರೆ. ವಿಷಯ ತಿಳಿದ ಕೂಡಲೇ ರಾತ್ರಿಯಿಂದಲೇ ಸಾವಿರಾರು ಭಕ್ತರು ಮಠದತ್ತ ಧಾವಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
